ಡಿಕೆಶಿಗೆ ಶಾಸಕರ ಬೆಂಬಲ ಇಲ್ಲ | ಸಿಎಂ ಶಾಲಲ್ಲಿ ಅಲ್ಲ ಡೈರೆಕ್ಟಾಗಿ ಹೊಡೆದಿದ್ದಾರೆ: ಸಿ.ಟಿ ರವಿ

Public TV
1 Min Read

– ಈ ಥರ ಅವಮಾನ ಮಾಡಿಸಿಕೊಂಡು ಶಿವಕುಮಾರ್ ಹೇಗೆ ಸುಮ್ನಿರ್ತಾರೆ?

ಚಿಕ್ಕಮಗಳೂರು: ಡಿಸಿಎಂ ಡಿ.ಕೆ ಶಿವಕುಮಾರ್ (D.K Shivakumar) ಅವರಿಗೆ ಶಾಸಕರ ಬೆಂಬಲ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ. ಈ ರೀತಿ ಅವಮಾನ ಮಾಡಿಸಿಕೊಂಡು ಡಿಕೆಶಿ ಹೇಗೆ ಸುಮ್ಮನೆ ಇರುತ್ತಾರೆ ಎಂದು ಎಮ್‍ಎಲ್‍ಸಿ ಸಿ.ಟಿ ರವಿ (C.T Ravi)  ಕುಟುಕಿದ್ದಾರೆ.

ಚಿಕ್ಕಮಗಳೂರಿನಲ್ಲಿ (Chikkamagaluru) ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಈ ವೇಳೆ, ಡಿಸಿಎಂ ಡಿಕೆಶಿಗೆ ಶಾಸಕರ ಬೆಂಬಲ ಇಲ್ಲ ಎಂಬ ಸಿಎಂ ಹೇಳಿಕೆಗೆ ಅವರು ಪ್ರತಿಕ್ರಿಯಿಸಿದರು. ಅವರಿಗೆ ಶಾಸಕರ ಬೆಂಬಲವೇ ಇಲ್ಲ ಎಂದು ಹೇಳಿದ್ದಾರೆ. 136 ಶಾಸಕರು ಅವರ ಅಧ್ಯಕ್ಷತೆಯಲ್ಲೇ ಗೆದ್ದಿದ್ದು. ಇದು ಶಾಲಿನಲ್ಲಿ ಸುತ್ತಿ ಹೊಡೆಯೋದಲ್ಲ, ಹಾಗೇ ಹೊಡೆದಿರೋದು ಎಂದು ವ್ಯಂಗ್ಯವಾಡಿದ್ದಾರೆ. ಇದನ್ನೂ ಓದಿ: ಅತ್ತ ಡೆಲ್ಲಿಯಲ್ಲಿ ಸಿದ್ದರಾಮಯ್ಯ ಕ್ಲಿಯರ್ ಮೆಸೇಜ್ – ಬೆಂಗಳೂರಲ್ಲಿ ಆಪ್ತರು ದಿಲ್ ಖುಷ್

 

ಶಾಲಿನಲ್ಲಿ ಸುತ್ತಿ ಹೊಡುದ್ರೆ ಶಾಲು ಅಂತ ಹೇಳ್ಬೋದು, ಇದು ಹಾಗಲ್ಲ, ಡೈರೆಕ್ಟ್. ಇದನ್ನು ಡಿ.ಕೆ ಶಿವಕುಮಾರ್ ಸಹಿಸಿಕೊಂಡರೆ ಅವರ ವ್ಯಕ್ತಿತ್ವಕ್ಕೆ ಅಪಚಾರ ಎಂದು ಹೇಳಿಕೊಂಡಿದ್ದಾರೆ.

ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ ಅವರು, ಮಾಧ್ಯಮಗಳ ಜೊತೆ ಮಾತಾಡುತ್ತ, ಮುಂದಿನ ಐದು ವರ್ಷಗಳ ಕಾಲ ನಾನೇ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತೇನೆ. ಮುಖ್ಯಮಂತ್ರಿ ಸ್ಥಾನ ಬದಲಾವಣೆ ಚರ್ಚೆ ಅನ್ನೋದು ಸುಳ್ಳು. ಡಿ.ಕೆ.ಶಿವಕುಮಾರ್​ಗೆ ಹೆಚ್ಚು ಶಾಸಕರ ಬೆಂಬಲ ಇಲ್ಲ. ಇರೋ ಬೆಂಬಲಿಗರ ಸಂಖ್ಯೆ ಕಡಿಮೆ ಇದೆ. ಅವರಿಗೆ ಕೆಲವರು ಬೆಂಬಲ ನೀಡಿದ್ದಾರೆ. ಸುರ್ಜೇವಾಲಾ ಯಾರಿಗೂ ಅಧಿಕಾರ ಬದಲಾವಣೆ ಪ್ರಶ್ನೆ ಕೇಳಿಲ್ಲ. ಕೆಲವು ಶಾಸಕರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಅಷ್ಟೇ ಎಂದು ಹೇಳಿದ್ದರು. ಇದನ್ನೂ ಓದಿ: ಕಾಂಗ್ರೆಸ್ ಏನ್ ದಬಾಕಿರೋದು? ಹೆಂಗಸರು ಬೀದಿ ಸುತ್ತೋ ಹಾಗೆ ಮಾಡಿದ್ದೇ ಸಿಎಂ – ಮಹಿಳಾ ಅಧಿಕಾರಿ ಮಾತಾಡಿದ ವಿಡಿಯೋ ವೈರಲ್

Share This Article