ಬೆಂಗಳೂರು: ಮಲ್ಟಿಪ್ಲೆಕ್ಸ್ (Multiplex) ಸೇರಿದಂತೆ ಎಲ್ಲ ಚಿತ್ರಮಂದಿರಗಳಲ್ಲಿ ಏಕರೂಪ ದರ ಜಾರಿ ಸಂಬಂಧ ರಾಜ್ಯ ಸರ್ಕಾರ ಕರಡು ಅಧಿಸೂಚನೆ ಹೊರಡಿಸಿದೆ. ಅಧಿಸೂಚನೆ ಪ್ರಕಟವಾದ 15 ದಿನಗಳ ಒಳಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಿದೆ.
ಮಲ್ಟಿಪ್ಲೆಕ್ಸ್ ಸೇರಿದಂತೆ ಎಲ್ಲ ಥಿಯೇಟರ್‌ಗಳಲ್ಲಿ ಟಿಕೆಟ್ ದರವನ್ನು 200 ರೂ.ಗೆ ಮಿತಿಗೊಳಿಸುವುದಾಗಿ ಬಜೆಟ್‌ನಲ್ಲಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದರು. ಇದನ್ನೂ ಓದಿ: ಆನೆ-ಮಾನವ ಸಂಘರ್ಷ ನಿಯಂತ್ರಣಕ್ಕೆ ಮಹತ್ವದ ಹೆಜ್ಜೆ `ಆನೆಪಥ’: ಈಶ್ವರ್ ಖಂಡ್ರೆ
ಕರ್ನಾಟಕ ಸಿನೆಮಾಸ್ (ನಿಯಂತ್ರಣ) ನಿಯಮಗಳನ್ನು ತಿದ್ದುಪಡಿ ಮಾಡಲು, ಕಾಯ್ದೆ 1964, 1964 (ಕರ್ನಾಟಕ ಕಾಯ್ದೆ 23) ಅಧಿಕೃತ ಗೆಜೆಟ್‌ನಲ್ಲಿ ಪ್ರಕಟವಾದ ದಿನಾಂಕದಿಂದ 15 ದಿನಗಳ ನಂತರ ಈ ಕರಡನ್ನು ಗಣನೆಗೆ ತೆಗೆದುಕೊಳ್ಳಲಾಗುವುದು ಸರ್ಕಾರ ತಿಳಿಸಿದೆ.
ಮೇಲೆ ನಿರ್ದಿಷ್ಟಪಡಿಸಿದ ಅವಧಿ ಮುಗಿಯುವ ಮೊದಲು ಈ ಕರಡಿಗೆ ಸಂಬಂಧಿಸಿದಂತೆ ಯಾವುದೇ ಆಕ್ಷೇಪಣೆ ಮತ್ತು ಸಲಹೆಯನ್ನು ರಾಜ್ಯ ಸರ್ಕಾರವು ಪರಿಗಣಿಸುತ್ತದೆ. ಆಕ್ಷೇಪಣೆಗಳು ಮತ್ತು ಸಲಹೆಗಳನ್ನು ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ತಿಳಿಸಬಹುದು. ಇದನ್ನೂ ಓದಿ: ಮಂತ್ರಾಲಯದಲ್ಲಿ ರಾಯರ ದರ್ಶನ ಪಡೆದ ಸಚಿವ ರಾಮಲಿಂಗಾರೆಡ್ಡಿ