ಬಂಗಾಳಿ ವಲಸೆಗಾರರ ಮೇಲೆ ಹಲ್ಲೆ, ದೌರ್ಜನ್ಯ ಹೆಚ್ಚಳ; ದೀದಿ ನೇತೃತ್ವದಲ್ಲಿ ಪ್ರತಿಭಟನೆ

Public TV
1 Min Read

– ನನ್ನನ್ನೂ ಬಂಧನ ಕೇಂದ್ರಕ್ಕೆ ಹಾಕಿ, ಬಿಜೆಪಿಗರ ಮನೋಭಾವಕ್ಕೆ ನನಗೆ ನಾಚಿಕೆಯಾಗ್ತಿದೆ ಎಂದ ಮಮತಾ

ಕೋಲ್ಕತ್ತಾ: ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಬಂಗಾಳಿ ವಲಸೆಗಾರರ ಮೇಲೆ ಹಲ್ಲೆ, ದೌರ್ಜನ್ಯ ಹೆಚ್ಚಳ ಹಿನ್ನೆಲೆ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ (Mamata Banerjee) ಕೋಲ್ಕತ್ತಾದಲ್ಲಿ ರಸ್ತೆಗಿಳಿದು ಪ್ರತಿಭಟನೆ ನಡೆಸಿದ್ದಾರೆ.

ಕೋಲ್ಕತ್ತಾದ ಕಾಲೇಜು ಚೌಕದಿಂದ ಧರ್ಮತಾಲಾದ ಡೊರಿನಾ ಕ್ರಾಸಿಂಗ್‌ನಲ್ಲಿ ಮೆರವಣಿಗೆ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಟಿಎಂಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಸೇರಿ ಪಕ್ಷದ ಹಿರಿಯ ನಾಯಕರು ದೀದಿಗೆ ಸಾಥ್ ನೀಡಿದ್ದಾರೆ. ಇದನ್ನೂ ಓದಿ: ಸಿರಿಯಾ ಮಿಲಿಟರಿ ಹೆಡ್‌ಕ್ವಾಟ್ರಸ್‌ ಮೇಲೆ ಇಸ್ರೇಲ್ ದಾಳಿ – ಲೈವ್‌ನಿಂದಲೇ ಎದ್ದು ಓಡಿದ ಟಿವಿ ಆಂಕರ್

ಈ ವೇಳೆ ಮಹಾರಾಷ್ಟ್ರ ಮತ್ತು ದೆಹಲಿಯಲ್ಲಿ ಬಿಜೆಪಿಯು ಬಂಗಾಳಿ ವಲಸೆಗಾರರ (Bengali migrants) ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕುವ ಮೂಲಕ ಚುನಾವಣೆಯಲ್ಲಿ ಅಕ್ರಮವೆಸಗಿದೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಭಾರತಕ್ಕೆ ಮತ್ತಷ್ಟು ಬಲ – ವಾಯುಪಡೆಗೆ 3 ಅಪಾಚೆ ಹೆಲಿಕಾಪ್ಟರ್‌, ಪಾಕ್ ಗಡಿಯಲ್ಲಿ ನಿಯೋಜನೆಗೆ ನಿರ್ಧಾರ

ಬಂಗಾಳಿ ಜನರ ಮೇಲೆ ದೌರ್ಜನ್ಯ ಮಾಡಲು ಬಿಜೆಪಿಗೆ ಯಾವ ಅಧಿಕಾರವಿದೆ. ತಕ್ಷಣವೇ ಈ ಹಿಂಸಾತ್ಮಕ ನೀತಿಯನ್ನು ನಿಲ್ಲಿಸಬೇಕು. ಇಲ್ಲದಿದ್ದರೆ ಇದನ್ನು ಹೇಗೆ ನಿಲ್ಲಿಸಬೇಕೆಂದು ನಮಗೆ ಗೊತ್ತಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ.

ಸುಮಾರು 3 ಕಿ.ಮೀವರೆಗೆ ಪ್ರತಿಭಟನಾ ಮೆರವಣಿಗೆ ನಡೆದಿದ್ದು, ಪೊಲೀಸರು ಬಿಗಿ ಭದ್ರತೆಯನ್ನು ಕೈಗೊಂಡಿದ್ದರು. ಈ ವೇಳೆ ಭದ್ರತೆಗೆ ಸುಮಾರು 1,500 ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು. ಇದನ್ನೂ ಓದಿ: ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್ – ನಟಿಗೆ ಒಂದು ವರ್ಷ ಜೈಲೇ ಗತಿ!

ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಲಿದ್ದು, ಅವರ ಭೇಟಿಗೆ ಒಂದು ದಿನ ಮುಂಚಿತವಾಗಿ ರಾಜ್ಯದಲ್ಲಿ ಪ್ರತಿಭಟನೆ ನಡೆಸಲಾಗಿತ್ತು. ಈ ಪ್ರತಿಭಟನೆಯಲ್ಲಿ ಸಾವಿರಾರು ಟಿಎಂಸಿ ಕಾರ್ಯಕರ್ತರು ಭಾಗಿಯಾಗಿದ್ದರು.

Share This Article