ಕಿಂಗ್ (King) ಸಿನಿಮಾ ಶೂಟಿಂಗ್ ವೇಳೆ ಬಾಲಿವುಡ್ ನಟ ಶಾರುಖ್ ಖಾನ್ (Shah Rukh Khan) ಗಾಯಗೊಂಡಿದ್ದಾರೆ. ಕಿಂಗ್ ಖಾನ್ ಬೆನ್ನಿಗೆ ಪೆಟ್ಟಾಗಿದ್ದು, ವಿಶ್ರಾಂತಿಗೆ ವೈದ್ಯರು ಸಲಹೆ ನೀಡಿದ್ದಾರೆ.
ಸಾಹಸ ಸನ್ನಿವೇಶ ಚಿತ್ರೀಕರಣ ಮಾಡುವಾಗ ಶಾರುಖ್ ಕಾನ್ ಗಾಯಗೊಂಡಿದ್ದಾರೆ. ಮುಂಬೈನ ಚಿತ್ರೀಕರಣದ ಸ್ಟುಡಿಯೋದಲ್ಲಿ ಘಟನೆ ನಡೆದಿದೆ. ಚಿತ್ರೀಕರಣದ ವೇಳೆ ಮಗಳು ಕೂಡ ಭಾಗಿಯಾಗಿದ್ದರು. ಇದನ್ನೂ ಓದಿ: ಕಿಡ್ನಿ ವೈಫಲ್ಯದಿಂದ ಖ್ಯಾತ ಖಳನಟ ಫಿಶ್ ವೆಂಕಟ್ ನಿಧನ
ಗಾಯದ ಕಾರಣಕ್ಕೆ ಶಾರುಖ್ ಅಮೆರಿಕಕ್ಕೆ ಪ್ರಯಾಣ ಬೆಳೆಸಬಹುದು ಎನ್ನಲಾಗಿದೆ. ನಂತರ ಯುಕೆಗೆ ಪ್ರವಾಸ ಮಾಡಲಿದ್ದಾರೆ. ಅಲ್ಲಿ ಕುಟುಂಬದವರೊಟ್ಟಿಗೆ ಇದ್ದು ಚೇತರಿಸಿಕೊಳ್ಳಲಿದ್ದಾರೆ. ವಿಶ್ರಾಂತಿ ಕಾರಣಕ್ಕಾಗಿ ಶ್ರೀಲಂಕಾಗೆ ಯೋಜಿಸಿದ್ದ ಪ್ರವಾಸವನ್ನು ಮುಂದೂಡಲಾಗಿದೆ.
ಸಿದ್ಧಾರ್ಥ್ ಆನಂದ್ ನಿರ್ದೇಶನದಲ್ಲಿ ‘ಕಿಂಗ್’ ಚಿತ್ರ ಶೂಟಿಂಗ್ ನಡೆಯುತ್ತಿದೆ. ಈ ಚಿತ್ರದಲ್ಲಿ ದೀಪಿಕಾ ಪಡುಕೋಣೆ, ಅಭಿಷೇಕ್ ಬಚ್ಚನ್, ಜೈದೀಪ್ ಅಹ್ಲಾವತ್, ಅನಿಲ್ ಕಪೂರ್ ಮತ್ತು ಅಭಯ್ ವರ್ಮಾ ಕೂಡ ನಟಿಸಿದ್ದಾರೆ. ಇದನ್ನೂ ಓದಿ: ರಿಯಲ್ ಹೀರೋ ಅಕ್ಷಯ್ಕುಮಾರ್ ಮಾಡಿದ ಕಾರ್ಯ ಎಲ್ಲರಿಗೂ ಮಾದರಿ
ಶಾರುಖ್ ಖಾನ್ಗೆ ಗಂಭೀರ ಪೆಟ್ಟಾಗಿಲ್ಲ. ಚೇತರಿಸಿಕೊಳ್ಳುತ್ತಿದ್ದಾರೆ. ಕಿಂಗ್ ಖಾನ್ ಗಾಯಗೊಂಡಿರುವುದರಿಂದ ಸಿನಿಮಾ ಚಿತ್ರೀಕರಣದಲ್ಲಿ ವಿಳಂಬವಾಗಲಿದೆ.