ಒಂದೇ ವಧುವನ್ನು ಮದುವೆಯಾದ ಸಹೋದರರು!

Public TV
1 Min Read

ಶಿಮ್ಲಾ: ಹಿಮಾಚಲ ಪ್ರದೇಶದ (Himachal Pradesh) ಶಿಲೈ ಗ್ರಾಮದಲ್ಲಿ ಒಂದೇ ಯುವತಿಯನ್ನು ಇಬ್ಬರು (Brothers) ಸಹೋದರರು (Marriage) ಮದುವೆಯಾಗಿದ್ದಾರೆ.

ಹಟ್ಟಿ ಬುಡಕಟ್ಟಿನ ಇಬ್ಬರು ಸಹೋದರ ಮದುವೆಗೆ ನೂರಾರು ಜನ ಸಾಕ್ಷಿಯಾಗಿದ್ದಾರೆ. ವಧು (Bride) ಸುನೀತಾ ಚೌಹಾಣ್ ಮತ್ತು ವರ ಪ್ರದೀಪ್ ಮತ್ತು ಕಪಿಲ್ ನೇಗಿ ಪರಸ್ಪರ ಒಪ್ಪಿಗೆಯಿಂದ ಈ ನಿರ್ಧಾರ ತೆಗೆದುಕೊಂಡಿದ್ದಾಗಿ ಹೇಳಿಕೊಂಡಿದ್ದಾರೆ. ವಿವಾಹ ಸಮಾರಂಭದ ವಿಡಿಯೋಗಳು ಇಂಟರ್‌ನೆಟ್‌ನಲ್ಲಿ ವೈರಲ್ ಆಗಿವೆ. ಇದನ್ನೂ ಓದಿ: ಲಿವ್-ಇನ್-ಪಾರ್ಟ್ನರ್‌ನ ಕೊಂದು ಆಕೆ ಕೆಲಸ ಮಾಡ್ತಿದ್ದ ಠಾಣೆಗೆ ಹೋಗಿ ಶರಣಾದ ಯೋಧ

ಕುನ್ಹತ್ ಗ್ರಾಮದ ವಧು ಸುನೀತಾ ಈ ಬಗ್ಗೆ ಮಾತನಾಡಿ, ಸಂಪ್ರದಾಯದ ಬಗ್ಗೆ ನನಗೆ ಅರಿವಿತ್ತು. ಯಾವುದೇ ಒತ್ತಡವಿಲ್ಲದೆ ನಾನು ಈ ಮದುವೆಗೆ ಒಪ್ಪಿಕೊಂಡಿದ್ದೇನೆ. ಪ್ರದೀಪ್ ಸರ್ಕಾರಿ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರ ಕಿರಿಯ ಸಹೋದರ ಕಪಿಲ್ ವಿದೇಶದಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿಕೊಂಡಿದ್ದಾರೆ.

ನಾವು ಈ ಸಂಪ್ರದಾಯವನ್ನು ಒಪ್ಪಿಕೊಂಡಿದ್ದೇವೆ. ನಮಗೆ ಈ ಬಗ್ಗೆ ಹೆಮ್ಮೆಯಿದೆ ಎಂದು ಪ್ರದೀಪ್ ಹೇಳಿಕೊಂಡಿದ್ದಾರೆ. ಹಿಮಾಚಲ ಪ್ರದೇಶದಲ್ಲಿ ಇಂತಹ ಸಂಪ್ರದಾಯ ಇದೆ. ಟ್ರಾನ್ಸ್-ಗಿರಿಯ ಬಧಾನಾ ಗ್ರಾಮದಲ್ಲಿ ಕಳೆದ 6 ವರ್ಷಗಳಲ್ಲಿ ಇಂತಹ ಐದು ಮದುವೆಗಳು ನಡೆದಿವೆ. ಇದನ್ನೂ ಓದಿ: Chitradurga | ಮದುವೆಯಾಗಲು ಹೆಣ್ಣು ಸಿಕ್ಕಿಲ್ಲವೆಂದು ಹೋಂ ಗಾರ್ಡ್ ನೇಣಿಗೆ ಶರಣು

Share This Article