ನಂದಿಬೆಟ್ಟದ ರಸ್ತೆಯಲ್ಲಿ ಅಪಘಾತ – Friendship Day ದಿನವೇ ಪ್ರಾಣ ಬಿಟ್ಟ ಸ್ನೇಹಿತರು

Public TV
1 Min Read

ಚಿಕ್ಕಬಳ್ಳಾಪುರ: ಸ್ನೇಹಿತರ ದಿನದ ಹಿನ್ನೆಲೆ ಬೈಕಿನಲ್ಲಿ ನಂದಿಬೆಟ್ಟಕ್ಕೆ ತೆರಳಿದ್ದ ಇಬ್ಬರು ಫ್ರೆಂಡ್ಸ್‌ ಅಪಘಾತಕ್ಕೆ ಬಲಿಯಾಗಿರುವ ದಾರುಣ ಘಟನೆ ಚಿಕ್ಕಬಳ್ಳಾಪುರ (Chikkaballapura) ತಾಲ್ಲೂಕಿನ ನಂದಿಬೆಟ್ಟದ ರಸ್ತೆಯ 15ನೇ ತಿರುವಿನ ಬಳಿ ಸಂಭವಿಸಿದೆ.

ಚಿಕ್ಕಬಳ್ಳಾಪುರ ತಾಲ್ಲೂಕಿನ ಕಣಿತಹಳ್ಳಿ ಗ್ರಾಮದ ಅರವಿಂದ್ (21) ಹಾಗೂ ಶ್ರೀಕಾಂತ್ (21) ಮೃತರು. ಇಬ್ಬರು ಸ್ನೇಹಿತರಾಗಿದ್ದು Friendship Day ಅಂಗವಾಗಿ ಪ್ಲ್ಯಾನ್‌ ಮಾಡಿಕೊಂಡು ಒಂದೇ ಬೈಕಿನಲ್ಲಿ‌ ಬೆಟ್ಟಕ್ಕೆ ಹೋಗಿ ವಾಪಸ್ ಬರುವಾಗ ಅಪಘಾತ ಸಂಭವಿಸಿದೆ. ಇದನ್ನೂ ಓದಿ: ಕಲಬುರಗಿ ಕೇಂದ್ರಿಯ ವಿವಿ ಆವರಣದಲ್ಲಿ ಗೋರಿ – ರಾತ್ರೋರಾತ್ರಿ ಕಾಂಪೌಂಡ್‌ ನಿರ್ಮಾಣ

ರಸ್ತೆ ಬದಿಯ ದೊಡ್ಡ ಬಂಡೆಗಲ್ಲಿಗೆ ಬೈಕ್ ಡಿಕ್ಕಿ ಹೊಡೆದಿದೆ. ಪರಿಣಾಮ ತಲೆಗಳಿಗೆ ಗಂಭೀರ ಗಾಯಗಾಳಾಗಿ ಇಬ್ಬರೂ ಮೃತಪಟ್ಟಿದ್ದಾರೆ. ಮೃತದೇಹಗಳನ್ನ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ರವಾನೆ ಮಾಡಲಾಗಿದೆ. ನಂದಿಗಿರಿಧಾಮ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ. ಇದನ್ನೂ ಓದಿ: ಕೊಪ್ಪಳ| ನಡುರಸ್ತೆಯಲ್ಲೇ ಮಚ್ಚಿನಿಂದ ಕೊಚ್ಚಿ ಯುವಕನ ಭೀಕರ ಕೊಲೆ

Share This Article