ಹಾಸನ: ಮನೆಗೆಲಸದಾಕೆ ಮೇಲೆ ಅತ್ಯಾಚಾರ ಎಸಗಿದ ಆರೋಪ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಅಪರಾಧಿ ಎಂದು ತೀರ್ಪು ನೀಡಿದ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ. ಈ ಬಗ್ಗೆ ಮೊದಲ ಬಾರಿಗೆ ಪ್ರಜ್ವಲ್ ಸಹೋದರ ಹಾಗೂ ಎಂಎಲ್‌ಸಿ ಸೂರಜ್ ರೇವಣ್ಣ (Suraj Revanna) ಪ್ರತಿಕ್ರಿಯೆ ನೀಡಿದ್ದಾರೆ.
ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸೂರಜ್ ಅವರು, ಅದು ವರ್ಡಿಕ್ಟ್ ವಾರ್‌ಗೆ ಬಂದಿದೆ. ಮೇಲ್ಮನವಿ ಮಾಡ್ತಿವಿ. ಅದನ್ನು ಬಿಟ್ಟು ಪ್ರತಿಕ್ರಿಯೆ ಕೊಡುವಂತಹ ಅವಶ್ಯಕತೆ ಇಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕೈದಿ ನಂ. 15528 – ಪ್ರಜ್ವಲ್‍ಗೆ 524 ರೂ. ದಿನಗೂಲಿ, ಕೆಲಸವೇನು ಗೊತ್ತಾ?
ಪ್ರಕರಣ ನ್ಯಾಯಾಲಯದಲ್ಲಿದೆ. ನಾವ್ಯಾರೂ ಚರ್ಚೆ ಮಾಡುವುದು ಸೂಕ್ತವಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ.
ಕೆ.ಆರ್.ನಗರ ಮೂಲದ ಮಹಿಳೆ ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆಯಾಗಿದೆ. ಅಪರಾಧಿಗೆ ಈಚೆಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶಿಕ್ಷೆ ಪ್ರಮಾಣವನ್ನು ಘೋಷಿಸಿದೆ. ಇದನ್ನೂ ಓದಿ: ಪ್ರಜ್ವಲ್‍ಗೆ ಶಿಕ್ಷೆ – ಕೋರ್ಟ್ ತೀರ್ಪಿಗೆ ಯಾರೇ ಆದರೂ ತಲೆ ಬಾಗಬೇಕಾಗುತ್ತದೆ: ನಿಖಿಲ್ ಕುಮಾರಸ್ವಾಮಿ