ಲಂಡನ್: ಇಲ್ಲಿನ ಮೃಗಾಲಯ ಒಂದರಲ್ಲಿ ತನ್ನ ಸಹೋದ್ಯೋಗಿ ಯುವತಿಗೆ ಪದೇ ಪದೇ ಕಿರುಕುಳ ನೀಡುತ್ತಿರುವ ಆರೋಪ ಎದುರಿಸುತ್ತಿರುವ ಕೇರಳದ (Kerala) ಯುವಕನೊಬ್ಬ ಇಂಗ್ಲೆಂಡ್‌ನಿಂದ (England) ಗಡೀಪಾರಾಗುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.
ಕೆರಳ ಮೂಲದ ಆಶಿಶ್ ಜೋಸ್ ಪಾಲ್ (Asish Jose Paul) ಎಂಬಾತ ಸಹೋದ್ಯೋಗಿ ಯುವತಿಗೆ ನಿರಂತರ ಮೆಸೇಜ್ ಮಾಡುವುದು, ಅನಗತ್ಯ ಗಿಫ್ಟ್ ನೀಡುವುದು, ಆಕೆಯನ್ನು ಹಿಂಬಾಲಿಸಿ ಕಿರುಕುಳ ನೀಡುತ್ತಿದ್ದ ಎಂದು ಆರೋಪಿಸಲಾಗಿದೆ. ಇದೆ ವಿಚಾರಕ್ಕೆ ಆಶಿಶ್ ಹಲವು ಬಾರಿ ಬಂಧನಕ್ಕೊಳಗಾಗಿದ್ದ. ಅಲ್ಲದೇ 6 ತಿಂಗಳ ಶಿಕ್ಷೆಯನ್ನು ವಿಧಿಸಿ, ಒಂದು ವರ್ಷದವರೆಗೆ ಅಮಾನತುಗೊಳಿಸಲಾಗಿತ್ತು. ಬಳಿಕ ಷರತ್ತು ಬದ್ಧ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿತ್ತು. ಈ ವೇಳೆ ಮತ್ತೆ ಅಪರಾಧ ಪುನರಾವರ್ತನೆ ಮಾಡಿದರೆ ಜೈಲಿಗೆ ಹಾಕುವ ಎಚ್ಚರಿಕೆಯನ್ನು ನೀಡಲಾಗಿತ್ತು. ಆದರೂ ಆತ ಜೈಲಿಂದ ಹೊರಬಂದ ಮರುದಿನವೇ ಯುವತಿಯನ್ನು ಸಂಪರ್ಕಿಸಲು ಯತ್ನಿಸಿದ್ದಾನೆ. ಇದನ್ನೂ ಓದಿ: ಅಪ್ಪಾ.. ನಾವು ಬದುಕುಳಿಯಲ್ಲ, ಇಲ್ಲಿ ನೀರು ತುಂಬಿದೆ: ಉತ್ತರಾಖಂಡ ಪ್ರವಾಹದಲ್ಲಿ ಮಗನ ಕೊನೆ ಮಾತು ನೆನೆದು ತಂದೆ ಕಣ್ಣೀರು
ಜೋಸ್ ಪಾಲ್, ಯುವತಿಗೆ ಹೂವುಗಳು ಮತ್ತು ಚಾಕೊಲೇಟ್‌ಗಳನ್ನು ಕೊಟ್ಟು, ಪ್ರಪೋಸ್ ಮಾಡುವುದು ಮಾಡಿದ್ದಾನೆ. ಆಕೆ ಆತನ ನಂಬರ್ ಬ್ಲಾಕ್ ಮಾಡಿದಾಗ ಹಿಂಬಾಲಿಸಲು ಆರಂಭಿಸಿದ್ದಾನೆ ಎಂದು ಆರೋಪಿಸಲಾಗಿದೆ. ಇನ್ನೂ ಆತನನ್ನು ಬಂಧಿಸಿ ಬಿಡುಗಡೆ ಮಾಡುವಾಗ, ಆಕೆಯನ್ನು ಭೇಟಿಯಾಗದಂತೆ ಸೂಚಿಸಲಾಗಿತ್ತು. ಅಲ್ಲದೇ ಲಂಡನ್ ಮೃಗಾಲಯದಿಂದ 50 ಮೀಟರ್ ಒಳಗೆ ಹೋಗದಂತೆ ಆದೇಶಿಸಲಾಗಿತ್ತು. ಆದರೂ ಆತ ತನ್ನ ಚಾಳಿಯನ್ನು ಮುಂದುವರಿಸಿದ್ದ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಯುವತಿ, ಆಶಿಶ್ ನಡತೆ ನನ್ನನ್ನು ಭಾವನಾತ್ಮಕವಾಗಿ ಮತ್ತು ಮಾನಸಿಕವಾಗಿ ಕುಗ್ಗುವಂತೆ ಮಾಡಿದೆ. ಈ ಘಟನೆ ನನ್ನ ಸ್ನೇಹಿತರು ಹಾಗೂ ಕುಟುಂಬ ನನ್ನ ಬಗ್ಗೆ ಯೋಚಿಸುವಂತೆ ಮಾಡಿದೆ. ನಾನು ಸುರಕ್ಷಿತವಾಗಿರಲು ಯಾರನ್ನಾದರೂ ಅವಲಂಭಿಸುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಹೇಳಿಕೊಂಡಿದ್ದಾಳೆ.
ಇದೆಲ್ಲದರ ನಡುವೆ ಜೋಸ್ ಪಾಲ್ ಪರ ವಕೀಲರು ನ್ಯಾಯಾಲಯದಲ್ಲಿ ಆತ ಮಾನಸಿಕ ಸಮಸ್ಯೆಯಿಂದ ಬಳಲುತ್ತಿದ್ದಾನೆ. ಯುವತಿಗೆ ಗಮನಾರ್ಹ ತೊಂದರೆ ಉಂಟಾಗಿದೆ ಎಂಬುದಕ್ಕೆ ಯಾವುದೇ ಪುರಾವೆಗಳಿಲ್ಲ ಎಂದು ವಾದಿಸಿದ್ದರು. ನ್ಯಾಯಾಲಯ, ಅಶಿಶ್ ವೀಸಾ ಈ ವರ್ಷ ಸೆಪ್ಟೆಂಬರ್ 13ರಂದು ಮುಕ್ತಾಯಗೊಳ್ಳಲಿದೆ. ಹೊಸ ವೀಸಾ ನೀಡದ ಹೊರತು ಇಲ್ಲಿ ಉಳಿದುಕೊಳ್ಳಲು ಸಾಧ್ಯವಿಲ್ಲ. ಅದ್ದರಿಂದ ಗಡೀಪಾರಾಗುವ ಸಾಧ್ಯತೆಯ ಬಗ್ಗೆ ಎಚ್ಚರಿಕೆ ನೀಡಿದ್ದಾರೆ.
ಜೋಸ್ ಪಾಲ್, ಆಂಗ್ಲಿಯಾ ರಸ್ಕಿನ್ ವಿಶ್ವವಿದ್ಯಾಲಯದಲ್ಲಿ (2022-2023) ಲೆಕ್ಕಪತ್ರ ನಿರ್ವಹಣೆ ಮತ್ತು ಹಣಕಾಸು ವಿಷಯದಲ್ಲಿ ಸ್ನಾತಕೋತ್ತರ ಪದವಿ ವ್ಯಾಸಾಂಗ ಮಾಡುತ್ತಿದ್ದ. ಇದರ ಜೊತೆ ಲಂಡನ್ ಮೃಗಾಲಯದ ಕೆಫೆಯಲ್ಲಿ ಕೆಲಸ ಮಾಡುತ್ತಿದ್ದ. ಅಲ್ಲಿ ಆತ ಯುವತಿಯನ್ನು ಪರಿಚಯ ಮಾಡಿಕೊಂಡಿದ್ದ. ಕಳೆದ ವರ್ಷ ಜುಲೈ ಮತ್ತು ಡಿಸೆಂಬರ್ ಅವಧಿಯಲ್ಲಿ ಜೋಸ್ ಪಾಲ್ ಯುವತಿಗೆ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಲಾಗಿದೆ. ಇದನ್ನೂ ಓದಿ: ಒಂದು ಫ್ರೆಂಡ್ ರಿಕ್ವೆಸ್ಟ್ ಸ್ವೀಕರಿಸಿ 9 ಕೋಟಿ ಹಣ ಕಳೆದುಕೊಂಡ 80ರ ವೃದ್ಧ