ಚಾಮರಾಜನಗರ | ಎರಡು ಬೈಕ್ ನಡುವೆ ಡಿಕ್ಕಿ ಅಗ್ನಿವೀರ್ ಯೋಧ ಸಾವು

Public TV
0 Min Read

ಚಾಮರಾಜನಗರ/ ಶಿವಮೊಗ್ಗ ಎರಡು ಬೈಕ್‌ಗಳ ನಡುವೆ ಡಿಕ್ಕಿ ಸಂಭವಿಸಿ ಅಗ್ನಿವೀರ್ ಯೋಧ ಸಾವನ್ನಪ್ಪಿದ ಘಟನೆ ‌ಚಾಮರಾಜನಗರ ಜಿಲ್ಲೆಯ ಕಮರವಾಡಿ ಬಳಿ ನಡೆದಿದೆ. ಅಪಘಾತದಲ್ಲಿ ಮತ್ತೊಬ್ಬ ಬೈಕ್‌ ಸವಾರ ಗಾಯಗೊಂಡಿದ್ದಾರೆ.

ಮೃತರನ್ನು ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಜಿಗಳೆಮನೆ ಗ್ರಾಮದ ಪ್ರಜ್ವಲ್ (21) ಎಂದು ಗುರುತಿಸಲಾಗಿದೆ. ಪಶ್ಚಿಮ ಬಂಗಾಳದಲ್ಲಿ ಅವರು ಕರ್ತವ್ಯ ನಿರ್ವಹಿಸುತ್ತಿದ್ದರು. ರಜೆ ಮೇಲೆ ಚಾಮರಾಜನಗರಕ್ಕೆ ಬಂದಿದ್ದಾಗ ಈ ಅಪಘಾತ ಸಂಭವಿಸಿದೆ. ಗಾಯಗೊಂಡ ರೋಹಿತ್‌ನನ್ನು ಸಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪ್ರಜ್ವಲ್ ಮೃತದೇಹವನ್ನು ಸಿಮ್ಸ್‌ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಮಾಡಲಾಗಿದೆ. ಅವಘಡದ ಬಳಿಕ ಬೈಕ್‌ಗಳನ್ನು ವಶಕ್ಕೆ ಪಡೆದುಕೊಂಡಿರುವ ಸಂತೇಮರಹಳ್ಳಿ ಠಾಣೆ ಪೊಲೀಸರು ಕೇಸ್ ದಾಖಲಿಸಿದ್ದಾರೆ.

Share This Article