ಸಾಧನಾ ಸಮಾವೇಶ ಮುಗಿಸಿ ವಾಪಸ್‌ ಬರುವಾಗ ಡಿಕೆಶಿ ಬೆಂಗಾವಲು ವಾಹನ ಪಲ್ಟಿ – ಪ್ರಾಣಾಪಾಯದಿಂದ ಪಾರು

By
1 Min Read

ಮಂಡ್ಯ: ಮೈಸೂರಿನಲ್ಲಿ ನಡೆಯುತ್ತಿದ್ದ ಸಾಧನಾ ಸಮಾವೇಶ ಮುಗಿಸಿ ಬೆಂಗಳೂರಿಗೆ ವಾಪಸ್‌ ತೆರಳುತ್ತಿದ್ದ ವೇಳೆ ಡಿಸಿಎಂ ಡಿಕೆ ಶಿವಕುಮಾರ್‌ (DK Shivakumar) ಅವರ ಬೆಂಗಾವಲು ವಾಹನ ಪಲ್ಟಿಯಾಗಿರುವ ಘಟನೆ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ (Bengaluru Mysuru Expressway) ನಡೆದಿದೆ.

ಮಂಡ್ಯ (Mandya) ಜಿಲ್ಲೆ ಶ್ರೀರಂಗಪಟ್ಟಣ ತಾಲೂಕು ವ್ಯಾಪ್ತಿಯ ಗೌಡಹಳ್ಳಿ ಟಿಎಂ ಹೊಸೂರು ಬಳಿಯ ಎಕ್ಸ್‌ಪ್ರೆಸ್‌ವೇನಲ್ಲಿ ಘಟನೆ ನಡೆದಿದೆ. ಬೆಂಗಾವಲು ವಾಹನ ಪಲ್ಟಿಯಾಗಿದ್ದು, ಇಬ್ಬರು ಸಿಬ್ಬಂದಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇದನ್ನೂ ಓದಿ: ನಮ್ಮ ಸರ್ಕಾರ ದೇವರ ಮನೆಯಿದ್ದಂತೆ, ಸಿದ್ದರಾಮಯ್ಯ ನಮ್ಮೆಲ್ಲರ ನಾಯಕ: ಡಿಕೆಶಿ

ಮೈಸೂರಿನ ಸಾಧನಾ ಸಮಾವೇಶಕ್ಕೆ ತೆರಳಿದ್ದ ಡಿಕೆಶಿ ಬೆಂಗಳೂರಿಗೆ ವಾಪಸ್‌ ತೆರಳುತ್ತಿದ್ದರು. ಈ ವೇಳೆ ಡಿಕೆಶಿ ಬೆಂಗಾವಲು ವಾಹನ ಹೊಸೂರು ಬಳಿಯ ಎಕ್ಸ್‌ಪ್ರೆಸ್‌ವೇ ಬಳಿ ಡಿವೈಡರ್‌ಗೆ ಡಿಕ್ಕಿಯಾಗಿ ಪಲ್ಟಿಯಾಗಿದೆ. ಎಸ್ಕಾರ್ಟ್‌ ವಾಹನದಲ್ಲಿದ್ದ ಇಬ್ಬರು ಸಿಬ್ಬಂದಿ ಗಾಯಗೊಂಡಿದ್ದು ಚಿಕಿತ್ಸೆಗಾಗಿ ಮೈಸೂರು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಅದೃಷ್ಟವಶಾತ್‌ ಹಿಂದೆಯೇ ಇದ್ದ ಡಿಕೆಶಿ ಕಾರಿಗೆ ಯಾವುದೇ ಅಪಾಯ ಆಗಿಲ್ಲ, ಘಟನೆ ಬಳಿಕ ಬಳಿಕ ಬೆಂಗಳೂರಿಗೆ ಸೇಫಾಗಿ ಪ್ರಯಾಣ ಮಾಡಿದ್ದಾರೆ. ಇದನ್ನೂ ಓದಿ: ಜು.23-26ರವರೆಗೆ ಪ್ರಧಾನಿ ಮೋದಿ ಬ್ರಿಟನ್, ಮಾಲ್ಡೀವ್ಸ್‌ಗೆ ಭೇಟಿ

Share This Article