ಬಿಜೆಪಿಯಲ್ಲಿ ಕೆಲವೊಂದಷ್ಟು ಖಾಲಿ ಟ್ರಂಕುಗಳಿವೆ, ಕೇವಲ ಶಬ್ದ ಮಾತ್ರ ಮಾಡುತ್ತವೆ: ಡಿಕೆಶಿ

Public TV
1 Min Read

ಬೆಂಗಳೂರು: ಬಿಜೆಪಿಯಲ್ಲಿ (BJP) ಕೆಲವೊಂದಷ್ಟು ಖಾಲಿ ಟ್ರಂಕುಗಳಿವೆ. ಅವು ಕೇವಲ ಶಬ್ದ ಮಾತ್ರ ಮಾಡುತ್ತವೆ. ಬರೀ ಶಬ್ದ ಮಾಡುವವರು ಸಂಸತ್‌ನಲ್ಲಿ ಮಾತನಾಡಿ, ಪ್ರಧಾನಮಂತ್ರಿಯವರನ್ನು ಭೇಟಿ ಮಾಡಿ ರಾಜ್ಯಕ್ಕೆ ಹತ್ತು ರೂ. ಆದರೂ ಅನುದಾನ ತೆಗೆದುಕೊಂಡು ಬರಲಿ ಎಂದು ಬಿಜೆಪಿ ಸಂಸದರ ವಿರುದ್ಧ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ವಾಗ್ದಾಳಿ ನಡೆಸಿದ್ದಾರೆ.

ಭಾನುವಾರ ಪ್ರಧಾನಿ ಮೋದಿಯವರಿಗೆ (Narendra Modi) ಮನವಿ ಪತ್ರ ಕೊಟ್ಟ ವಿಚಾರಕ್ಕೆ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಬರೀ ಶಬ್ದ ಮಾಡುವವರಿಗೂ ನಾನು ಅನುದಾನದ ವಿಚಾರವಾಗಿ ಎಲ್ಲಾ ಮಾಹಿತಿಗಳನ್ನು ಕಳುಹಿಸಿ ಕೊಡುತ್ತಿದ್ದೇನೆ. ಏಕೆಂದರೆ ಇದುವರೆಗೂ ಯಾರೊಬ್ಬರೂ ಅನುದಾನ ತಂದಿಲ್ಲ, ತರಲು ಆಸಕ್ತಿಯನ್ನೂ ತೋರಿಲ್ಲ. ಪ್ರಧಾನಿಯವರನ್ನೂ ಭೇಟಿ ಮಾಡಿಲ್ಲ. ರಾಜ್ಯಕ್ಕೆ, ಅದರಲ್ಲೂ ಬೆಂಗಳೂರಿಗಂತೂ ಏನೇನೂ ತಂದಿಲ್ಲ ಎಂದು ಕಿಡಿಕಾರಿದರು. ಇದನ್ನೂ ಓದಿ: ದಕ್ಷಿಣ ಭಾರತದಲ್ಲಿ ಅತಿಹೆಚ್ಚು ಬಿಪಿಎಲ್ ಕಾರ್ಡ್ ಇರೋದು ಕರ್ನಾಟಕದಲ್ಲೇ, ಮತ್ತೆ ಪರಿಷ್ಕರಣೆ ಮಾಡ್ತೀವಿ: ಸಚಿವ ಮುನಿಯಪ್ಪ

ಬೆಂಗಳೂರು (Bengaluru) ಅಭಿವೃದ್ಧಿಗೆ ಅನುದಾನ ನೀಡುವ ಬಗ್ಗೆ ಪ್ರಧಾನಿಯವರ ಬಳಿ ಮಾತನಾಡಿದೆ. ಅವರು ನಮ್ಮ ಮನವಿಯನ್ನು ಗಮನಿಸುವುದಾಗಿ ತಿಳಿಸಿದ್ದಾರೆ. ಅವರು ಮಾತನಾಡಿದ ಶೈಲಿ ನೋಡಿದರೆ ನನಗೆ ಅವರ ಮಾತಿನ ಮೇಲೆ ಭರವಸೆಯಿದೆ. ಬೆಂಗಳೂರು ಜಾಗತಿಕ ನಗರ ಎನ್ನುವುದನ್ನು ಅವರು ಒಪ್ಪಿಕೊಂಡಿದ್ದಾರೆ. ಬೆಂಗಳೂರು ಭಾರತವನ್ನು ಪ್ರತಿನಿಧಿಸುತ್ತದೆ ಎಂದರು. ಇದನ್ನೂ ಓದಿ: ಮಂತ್ರಾಲಯದಲ್ಲಿ ಅದ್ದೂರಿಯಾಗಿ ಜರುಗಿದ ಚಿನ್ನದ ರಥೋತ್ಸವ

ಬೆಂಗಳೂರು ಅಭಿವೃದ್ಧಿಗೆ ಎಲ್ಲಾ ಪಕ್ಷಗಳು ಕೊಡುಗೆ ನೀಡಿವೆ. ನಾನು ಒಬ್ಬನೇ ಅಥವಾ ನಮ್ಮ ಸರ್ಕಾರದಿಂದಲೇ ಎಲ್ಲಾ ಆಗಿದೆ ಎಂದು ಹೇಳುವುದಿಲ್ಲ. ಬೆಂಗಳೂರು ದೇಶದಲ್ಲಿಯೇ ಪ್ರಮುಖ ನಗರವಾಗಿದೆ. ಇದನ್ನು ಇನ್ನೂ ಅತ್ಯುತ್ತಮ ನಗರವನ್ನಾಗಿ ಮಾಡುವುದು ನಮ್ಮೆಲ್ಲರ ಜವಾಬ್ದಾರಿ. ಇಲ್ಲಿ ರಾಜಕೀಯಕ್ಕಿಂತ ರಾಜ್ಯದ ಹಿತಾಸಕ್ತಿ ಮುಖ್ಯ ಅಂತ ತಿಳಿಸಿದರು. ಇದನ್ನೂ ಓದಿ: ರಾಹುಲ್‌, ಪ್ರಿಯಾಂಕಾ ಗಾಂಧಿ ಸೇರಿ 30 ಸಂಸದರು ಪೊಲೀಸರ ವಶಕ್ಕೆ

Share This Article