ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu and Kashmir) ಕಿಶ್ತ್ವಾರ್‌ನಲ್ಲಿ (Indian Army) ಭಯೋತ್ಪಾದಕರು ಅಡುಗುತಾಣಗಳನ್ನಾಗಿ ಬಳಸಿಕೊಂಡಿದ್ದಾರೆ ಎಂದು ಶಂಕಿಸಲಾದ ಗುಹೆಗಳನ್ನು ಭಾರತೀಯ ಸೇನೆ (Indian Army) ಸ್ಫೋಟಿಸಿದೆ.
ಕಿಶ್ತ್ವಾರ್ ಜಿಲ್ಲೆಯ ಪರ್ವತ ಪ್ರದೇಶದಲ್ಲಿ ಭಾನುವಾರದಿಂದ ಉಗ್ರರ ವಿರುದ್ಧ ಕಾರ್ಯಾಚರಣೆ ನಡೆಯುತ್ತಿದೆ. ಈ ಪ್ರದೇಶದಲ್ಲಿ ಭಯೋತ್ಪಾದಕರು ಅಡಗಿರುವ ಬಗ್ಗೆ ನಿರ್ದಿಷ್ಟ ಗುಪ್ತಚರ ಮಾಹಿತಿ ಸಿಕ್ಕ ಬಳಿಕ ಕಾರ್ಯಾಚರಣೆ ಆರಂಭಿಸಲಾಗಿತ್ತು. ಕಾರ್ಯಾಚರಣೆ ವೇಳೆ, ಭಾರೀ ಗುಂಡಿನ ದಾಳಿ ಮತ್ತು ಸ್ಫೋಟಗಳು ಸಂಭವಿಸಿವೆ.
General area Dool, Kishtwar
The Indian army blasted the opening of the cave where Terrorists are Hiding. pic.twitter.com/Ju2uDQkcVp
— Suraj Kumar 🔃 (@SurajKumar180) August 11, 2025
ಕಾರ್ಯಾಚರಣೆ ಸಮಯದಲ್ಲಿ ಪರ್ವತಗಳಲ್ಲಿ ಇರುವ ಉಗ್ರರ ಅಡಗು ತಾಣಗಳಾಗಿ ಬಳಸಿಕೊಳ್ಳುತ್ತಿದ್ದರು ಎಂದು ಶಂಕಿಸಲಾದ ನೈಸರ್ಗಿಕ ಗುಹೆಯನ್ನು ಸ್ಫೋಟಿಸಲಾಯಿತು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸ್ಫೋಟ ಸಂಭವಿದಾಗ ಭಾರೀ ಬೆಂಕಿ ಮತ್ತು ಹೊಗೆ ಕಾಣಿಸಿಕೊಂಡಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಕಾರ್ಯಾಚರಣೆಯಲ್ಲಿ ಉಗ್ರರು ಸಾವನ್ನಪ್ಪಿದ್ದಾರೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಇದನ್ನೂ ಓದಿ: ಆಪರೇಷನ್ ಸಿಂಧೂರದಲ್ಲಿ ಭಾರತ ಪರಾಕ್ರಮ – ಪಾಕ್‌ನ 6 ಯುದ್ಧ ವಿಮಾನಗಳು ಉಡೀಸ್; ವಾಯುಪಡೆ ಮುಖ್ಯಸ್ಥ
ಪಾಕಿಸ್ತಾನದಲ್ಲಿ ತರಬೇತಿ ಪಡೆದು ಬಂದ ಉಗ್ರರು ಕಿಶ್ತ್ವಾರ್ ಜಿಲ್ಲೆಯಲ್ಲಿ ಅಡಗಿಕೊಂಡು ಭಯೋತ್ಪಾದನಾ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುತ್ತಿದ್ದಾರೆ. ಇದು ಜಮ್ಮು ಸೇರಿದಂತೆ ಏಳು ಜಿಲ್ಲೆಗಳಿಗೆ ಭದ್ರತಾ ಸವಾಲಾಗಿ ಪರಿಣಮಿಸಿದೆ. ಇದೇ ಕಾರಣಕ್ಕೆ ಸೇನೆ ಈ ಭಾಗದಲ್ಲಿ ಭಾರೀ ಕಾರ್ಯಾಚರಣೆ ಕೈಗೊಂಡಿದೆ.
ಆ.1 ರಿಂದ ಆರಂಭಗೊಂಡ ಕಾರ್ಯಾಚರಣೆ ಇಂದು (ಸೋಮವಾರ) 11 ನೇ ದಿನಕ್ಕೆ ಕಾಲಿಟ್ಟಿದೆ. ಈ ಸುದೀರ್ಘ ಕಾರ್ಯಾಚರಣೆಯಲ್ಲಿ ಶನಿವಾರ ಭಾರತೀಯ ಸೇನೆಯ ಇಬ್ಬರು ಸೈನಿಕರು ಹುತಾತ್ಮರಾಗಿದ್ದರು. ಎನ್‌ಕೌಂಟರ್ ಸಮಯದಲ್ಲಿ ಇಲ್ಲಿಯವರೆಗೆ 10 ಭದ್ರತಾ ಪಡೆಗಳ ಸಿಬ್ಬಂದಿ ಗಾಯಗೊಂಡಿದ್ದಾರೆ. ಓರ್ವ ಸ್ಥಳೀಯ ಉಗ್ರನನ್ನು ಸೇನೆ ಹತ್ಯೆಗೈದಿದೆ. ಇದನ್ನೂ ಓದಿ: ಆಪರೇಷನ್ ಅಖಾಲ್ | ಭದ್ರತಾ ಸಿಬ್ಬಂದಿ, ಉಗ್ರರ ನಡುವೆ ಗುಂಡಿನ ಚಕಮಕಿ – ಇಬ್ಬರು ಯೋಧರು ಹುತಾತ್ಮ