ರಾಜ್ಯದಲ್ಲಿ ಚುರುಕುಗೊಂಡ ಮುಂಗಾರು – ಎಲ್ಲಾ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ಘೋಷಣೆ

By
1 Min Read

ಬೆಂಗಳೂರು: ರಾಜ್ಯದಲ್ಲಿ ಒಂದು ವಾರ ಬಿಡುವುಕೊಟ್ಟಿದ್ದ ಮುಂಗಾರು ಮತ್ತೆ ಚುರುಕುಗೊಂಡಿದೆ. ಈ ವಾರ ಪೂರ್ತಿ ಭಾರೀ ಮಳೆಯಾಗಲಿದೆ (Rain) ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಮತ್ತು ಮಲೆನಾಡಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಇಂದು (ಆ.4) ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ನಾಳೆಯಿಂದ (ಜು.5) ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್. ಉಳಿದ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇದನ್ನೂ ಓದಿ: ಗ್ರೌಂಡ್‌ ಪೆನೆಟೇರಿಂಗ್ ರೇಡಾರ್‌ನಿಂದ ಅಸ್ಥಿಪಂಜರ ಪತ್ತೆ ಕಾರ್ಯ ನಡೆಸಿ – ಎಸ್‌ಐಟಿಗೆ ದೂರುದಾರ ಹೊಸ ರಿಕ್ವೆಸ್ಟ್‌

ರಾಜ್ಯದಲ್ಲಿ ಆ.7 ರವರೆಗೆ ಮಳೆಯ ಮುನ್ಸೂಚನೆ ನೀಡಲಾಗಿದೆ. ಬೆಂಗಳೂರಿನಲ್ಲಿ ಮುಂದಿನ ನಾಲ್ಕು ದಿನ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ. ಇದನ್ನೂ ಓದಿ: ನಂದಿಬೆಟ್ಟದ ರಸ್ತೆಯಲ್ಲಿ ಅಪಘಾತ – Friendship Day ದಿನವೇ ಪ್ರಾಣ ಬಿಟ್ಟ ಸ್ನೇಹಿತರು

Share This Article