ಪ್ರಜಾಪ್ರಭುತ್ವಕ್ಕೆ ವಿಷವಿಕ್ಕುವ ಘೋರ ಷಡ್ಯಂತ್ರ‍ – ರಾಹುಲ್ ವಿರುದ್ಧ ಹೆಚ್‌ಡಿಕೆ ಕಿಡಿ

By
2 Min Read

ಬೆಂಗಳೂರು: ಅಮೃತಕಾಲದ ಪ್ರಜಾಪ್ರಭುತ್ವಕ್ಕೆ ವಿಷವಿಕ್ಕುವ ಘೋರ ಷಡ್ಯಂತ್ರ‍ ಮಾಡಲಾಗುತ್ತಿದೆ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ (H D Kumaraswamy) ಎಕ್ಸ್ ಮೂಲಕ ಕಿಡಿಕಾರಿದ್ದಾರೆ.

ಗುರುವಾರ ರಾಹುಲ್‌ಗಾಂಧಿ (Rahul Gandhi) ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಲೋಕಸಭಾ ಚುನಾವಣೆ ವೇಳೆ ಮತಗಳ್ಳತನ ನಡೆದಿದೆ ಗಂಭೀರ ಆರೋಪ ಮಾಡಿದ್ದರು. ಈ ಕುರಿತು ಎಕ್ಸ್ನಲ್ಲಿ ಪೋಸ್ಟ್ ಮಾಡಿದ ಅವರು, ಚುನಾವಣೆ ಆಯೋಗದ (Election Commission) ಮೇಲೆ ಸುಳ್ಳಿನ ಸುರಿಮಳೆ ಹಾಗೂ ಜನತಂತ್ರಕ್ಕೆ ನೇಣು ಬಿಗಿಯುವ ದೂರ್ತ ಹುನ್ನಾರ ಮಾಡುತ್ತಿದ್ದಾರೆ. ಅಮೃತಕಾಲದ ಪ್ರಜಾಪ್ರಭುತ್ವಕ್ಕೆ ವಿಷವಿಕ್ಕುವ ಘೋರ ಷಡ್ಯಂತ್ರ‍ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಮಹೇಶ್‌ ಶೆಟ್ಟಿ ತಿಮರೋಡಿ, ಮಟ್ಟಣ್ಣನವರ್, ಪುನೀತ್‌ ಕೆರೆಹಳ್ಳಿ ವಿರುದ್ಧ ಎಫ್‌ಐಆರ್‌ ದಾಖಲು

ಸಾಂವಿಧಾನಿಕ ಸಂಸ್ಥೆಗಳ ಮೇಲೆ ಅಸತ್ಯದ ಆರೋಪದ ಮೂಲಕ ಅನುಮಾನದ ಪ್ರಯೋಜನ ಪಡೆಯುವ ಕಿಡಿಗೇಡಿಗಳ ಪಿತೂರಿ ನಡೆಯುತ್ತಿದೆ. ಚುನಾವಣೆಯಲ್ಲಿ ಎಸಗಿದ ಪಾಪವನ್ನು ಸುಳ್ಳಿನಿಂದ ಮುಚ್ಚಿಕೊಳ್ಳುವ ಗೂಬೆಲ್ ರಾಜಕಾರಣ. ಮತಗಳ್ಳತನಕ್ಕೆ ಒಂದೇ ಮದ್ದು. ಮತದಾರರ ಗುರುತಿನ ಚೀಟಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡುವುದು. ಅಷ್ಟು ಮಾಡಿದರೆ ಮತಗಳ್ಳರ ಆಟಕ್ಕೆ ಅಂಕೆ ಬೀಳುವುದು ಗ್ಯಾರಂಟಿ ಎಂದಿದ್ದಾರೆ. ಇದನ್ನೂ ಓದಿ: ಕಾಂತಾರ ಚಾಪ್ಟರ್ 1| ಕನಕವತಿಯ ಮೊದಲ ನೋಟ ವರಮಹಾಲಕ್ಷ್ಮಿಯಂದು ಅನಾವರಣ

ಕೇಂದ್ರೀಯ ಚುನಾವಣೆ ಆಯೋಗಕ್ಕೆ ನನ್ನ ಮನವಿ ಅಥವಾ ಒತ್ತಾಯ ಇಷ್ಟೇ, ಮುಳ್ಳನ್ನು ಮುಳ್ಳಿನಿಂದಲೇ ತೆಗೆಯಿರಿ ಎಂದು ಹೇಳಿದ್ದಾರೆ. ಇದನ್ನೂ ಓದಿ: ಮಂತ್ರಾಲಯದಲ್ಲಿ ರಾಯರ 354ನೇ ಆರಾಧನಾ ಮಹೋತ್ಸವ – ಇಂದಿನಿಂದ 7 ದಿನ ಸಪ್ತರಾತ್ರೋತ್ಸವ

ರಾಹುಲ್‌ಗಾಂಧಿ ಅವರ ಆರೋಪವೇನು?
ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಲ್ಲಿ ಬರುವ ಮಹಾದೇವಪುರದಲ್ಲಿ (Mahadevapura) ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಭಾರೀ ಅಕ್ರಮ ನಡೆದಿದೆ. ಮಹಾರಾಷ್ಟ್ರ, ಹರಿಯಾಣ, ಕರ್ನಾಟಕ ಚುನಾವಣೆ ಸೇರಿ ಹಲವೆಡೆ ಮತಗಳ್ಳತನ ಆಗಿದೆ. ಕಳೆದ ಐದು ತಿಂಗಳಲ್ಲಿ ಮಹಾರಾಷ್ಟ್ರಕ್ಕೆ ಅತಿ ಹೆಚ್ಚು ಮತದಾರರು ಸೇರ್ಪಡೆಯಾಗಿದ್ದಾರೆ. ಜನಸಂಖ್ಯೆಗಿಂತ ಹೆಚ್ಚು ಮತದಾರರಿದ್ದಾರೆ ಎಂದು ದಾಖಲೆ ಸಮೇತವಾಗಿ ಆರೋಪಿಸಿದ್ದರು.

Share This Article