ರಾಜಕೀಯಕ್ಕೆ ಎಂಟ್ರಿ ಕೊಡ್ತೀರಾ? ಅಭಿಮಾನಿಗಳ ಪ್ರಶ್ನೆಗೆ ರಜನೀಕಾಂತ್ ಉತ್ತರಿಸಿದ್ದು ಹೀಗೆ

Public TV
1 Min Read

ಚೆನ್ನೈ:ಜಯಲಲಿತಾ ನಿಧನರಾದ ಬಳಿಕ ತಮಿಳುನಾಡಿನ ರಾಜಕೀಯ ಹೈಡ್ರಾಮದ ವೇಳೆ ರಜನೀಕಾಂತ್ ರಾಜಕೀಯಕ್ಕೆ ಬರಲಿದ್ದಾರೆ ಎನ್ನುವ ಮಾತು ಕೇಳಿ ಬಂದಿತ್ತು. ಆದರೆ ಈಗ ರಾಜಕೀಯಕ್ಕೆ ಸೇರುವ ಬಗ್ಗೆ ನನ್ನ ನಿಲುವು ಏನು ಎನ್ನುವುದನ್ನು ಅಭಿಮಾನಿಗಳಿಗೆ ಸೂಪರ್ ಸ್ಟಾರ್ ತಿಳಿಸಿದ್ದಾರೆ.

9 ವರ್ಷಗಳ ಬಳಿಕ ಅಭಿಮಾನಿಗಳ ಜೊತೆ ಸಂವಾದ ನಡೆಸಿದ ರಜನಿಕಾಂತ್ ಸದ್ಯಕ್ಕೆ ರಾಜಕೀಯಕ್ಕೆ ಬರುವುದನ್ನು ಅಲ್ಲಗಳೆದಿದ್ದಾರೆ. ರಾಜಕೀಯ ರಂಗಕ್ಕೆ ಕಾಲಿಡುವ ಬಗ್ಗೆ ಅಡ್ಡ ಗೋಡೆ ಮೇಲೆ ದೀಪವಿಟ್ಟಂತೆ ಮಾತಾನಾಡಿದ ಅವರು, ಭವಿಷ್ಯದಲ್ಲಿ ದೇವರು ಬಯಸಿದ್ರೆ ರಾಜಕೀಯಕ್ಕೆ ಕಾಲಿಡುವ ಇಂಗಿತವನ್ನು ಪರೋಕ್ಷವಾಗಿ ವ್ಯಕ್ತಪಡಿಸಿದ್ದಾರೆ.

ಸದ್ಯಕ್ಕೆ ದೇವರು ನಟನಾಗಲು ಸೂಚಿಸಿದ್ದಾರೆ. ಮುಂದೇನಾಗುತ್ತದೆ ಎನ್ನುವುದು ಗೊತ್ತಿಲ್ಲ ಎಂದ ಅವರು ರಾಜಕೀಯ ಪಕ್ಷಗಳಿಗೆ ಸೇರ್ಪಡೆ ವದಂತಿಗಳನ್ನ ಅಲ್ಲಗೆಳೆದು, ಪಕ್ಷಗಳು ತಮ್ಮ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುತ್ತಿವೆ ಎಂದು ಆರೋಪಿಸಿದರು. ಅಷ್ಟೇ ಅಲ್ಲದೇ ನಾನು ಯಾವುದೇ ರಾಜಕೀಯ ಪಕ್ಷಕ್ಕೆ ಸೇರುವುದಿಲ್ಲ ಎಂದು ಸ್ಪಷ್ಟಪಡಿಸಿದರು.

1996ರಲ್ಲಿ ತಮಿಳುನಾಡಿನಲ್ಲಿ ಜಯಲಲಿತಾ ವಿರುದ್ಧ ಪ್ರಚಾರ ನಡೆಸಿದ್ದನ್ನು ರಾಜಕೀಯ ಅಪಘಾತಕ್ಕೆ ಹೋಲಿಸಿದ ಅವರು, 21 ವರ್ಷಗಳ ಹಿಂದೆ ನಾನು ಮೈತ್ರಿಕೂಟಕ್ಕೆ ಬೆಂಬಲ ಸೂಚಿಸಿದ್ದು ನನ್ನ ದೊಡ್ಡ ತಪ್ಪು ನಿರ್ಧಾರ. ಈ ಘಟನೆಯಿಂದ ರಾಜಕೀಯ ಪಕ್ಷಗಳನ್ನು ನನ್ನ ಹೆಸರನ್ನು ದುರ್ಬಳಕೆ ಮಾಡಿಕೊಂಡವು. ಆದರೆ ಈಗ ರಾಜಕೀಯಕ್ಕೆ ಸೇರುವುದಿಲ್ಲ ಎಂದು ಸ್ಪಷ್ಟನೆ ನೀಡುತ್ತೇನೆ ಎಂದು ಅಭಿಮಾನಿಗಳಿಗೆ ತಿಳಿಸಿದರು.

ಮದ್ಯಪಾನ ಮಾಡಬೇಡಿ: ನಿಮ್ಮ ಮಕ್ಕಳು ಮತ್ತು ಕುಟುಂಬವನ್ನು ಚೆನ್ನಾಗಿ ನೋಡಿಕೊಳ್ಳಿ. ಧೂಮಪಾನ ಮತ್ತು ಮದ್ಯಪಾನದಿಂದ ನಿಮ್ಮ ಜೀವನವನ್ನು ನೀವು ಹಾಳು ಮಾಡಬೇಡಿ. ಧೂಮಪಾನ ಮತ್ತು ಮದ್ಯಪಾನ ನಿಮ್ಮ ಆರೋಗ್ಯವನ್ನು ಹಾಳು ಮಾತ್ರ ಮಾಡುವುದಿಲ್ಲ ಬದಲಾಗಿ ನಿಮ್ಮ ನಿರ್ಧಾರ ಕೈಗೊಳ್ಳುವ ಸಾಮಥ್ರ್ಯವನ್ನು ಕಡಿಮೆ ಮಾಡುತ್ತದೆ. ಇದರಿಂದ ನಾನು ತುಂಬಾ ತೊಂದರೆಯನ್ನು ಅನುಭವಿಸಿದ್ದೇನೆ. ಹೀಗಾಗಿ ನನ್ನ ಸಲಹೆಯನ್ನು ನೀವು ಗಂಭೀರವಾಗಿ ಸ್ವೀಕರಿಸಿ ಎಂದು ಅವರು ಅಭಿಮಾನಿಗಳಲ್ಲಿ ಮನವಿ ಮಾಡಿದರು.

ಮೇ 28ರಿಂದ ಪ ರಂಜೀತ್ ಅವರ ನಿರ್ದೇಶನದಲ್ಲಿ ಮುಂದಿನ ಚಿತ್ರದ ಶೂಟಿಂಗ್ ನಲ್ಲಿ ಭಾಗಿಯಾಗಲಿದ್ದೇನೆ ಎಂದು ರಜನೀಕಾಂತ್ ತಿಳಿಸಿದರು.

Share This Article
Leave a Comment

Leave a Reply

Your email address will not be published. Required fields are marked *