ಉತ್ತರಾಖಂಡದ ಚಮೋಲಿಯಲ್ಲಿ ಮೇಘಸ್ಫೋಟ – ಮನೆಗಳು ಸರ್ವನಾಶ, ಹಲವರು ನಾಪತ್ತೆ ಶಂಕೆ

By
2 Min Read

– ವಾಹನಗಳು, ಅಂಗಡಿಗಳು ಜಲಸಮಾಧಿ

ಡೆಹ್ರಾಡೂನ್: ಶನಿವಾರ ಮುಂಜಾನೆ ಉತ್ತರಾಖಂಡದ (Uttarakhand) ಚಮೋಲಿ (Chamoli) ಜಿಲ್ಲೆಯಲ್ಲಿ ಮೇಘಸ್ಫೋಟ (Cloudburst) ಸಂಭವಿಸಿದ ಪರಿಣಾಮ ಅನೇಕ ಮನೆಗಳು ಸರ್ವನಾಶವಾಗಿದ್ದು, ಹಲವರು ನಾಪತ್ತೆಯಾಗಿರುವ ಶಂಕೆ ವ್ಯಕ್ತವಾಗಿದೆ.

ಶನಿವಾರ ಮುಂಜಾನೆ 1 ಗಂಟೆಯ ಸುಮಾರಿಗೆ ಮೇಘಸ್ಫೋಟ ಸಂಭವಿಸಿದೆ. ಅವಶೇಷಗಳಡಿ ಹುಡುಗಿಯೊಬ್ಬಳು ಸಿಲುಕಿಕೊಂಡಿದ್ದು, ಪೊಲೀಸ್ ಹಾಗೂ ಎಸ್‌ಡಿಆರ್‌ಎಫ್ ತಂಡದಿಂದ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಮೇಘಸ್ಫೋಟದಿಂದ ಅನೇಕ ವಾಹನಗಳು ಹಾಗೂ ಅಂಗಡಿಗಳು ಸಹ ಜಲಸಮಾಧಿಯಾಗಿದೆ. ಇದನ್ನೂ ಓದಿ: ಮೈಕ್ರೋ ಫೈನಾನ್ಸ್‌ ಕಿರುಕುಳ ಆರೋಪ – ಗೃಹಿಣಿ ಆತ್ಮಹತ್ಯೆ

ಡೆಹ್ರಾಡೂನ್, ತೆಹ್ರಿ, ಪೌರಿ, ಚಮೋಲಿ, ರುದ್ರಪ್ರಯಾಗ, ನೈನಿತಾಲ್ ಮತ್ತು ಅಲ್ಮೋರಾ ಸೇರಿದಂತೆ ರಾಜ್ಯದಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ರಕ್ಷಣಾ ತಂಡಗಳೊಂದಿಗೆ ಜಿಲ್ಲಾಧಿಕಾರಿ ಘಟನಾ ಸ್ಥಳಕ್ಕೆ ಧಾವಿಸಿದ್ದಾರೆ. ಥರಾಲಿ ಬಜಾರ್, ರಾಡಿಬಾಗ್ ಮತ್ತು ಚೆಪ್ಡೊ ಗ್ರಾಮಗಳು ಹೆಚ್ಚು ಹಾನಿಗೊಳಗಾಗಿವೆ ಎಂದು ವರದಿಗಳು ತಿಳಿಸಿವೆ. ಮೇಘಸ್ಫೋಟದ ಪರಿಣಾಮ ಅವಶೇಷಗಳು ರಸ್ತೆಯಲ್ಲಿ ಬಿದ್ದಿದ್ದು, ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇದನ್ನೂ ಓದಿ: ಕಮ್ಯುನಿಸ್ಟ್ ಪಕ್ಷದ ಹಿರಿಯ ನಾಯಕ, ಮಾಜಿ ಸಂಸದ ಸುರವರಂ ಸುಧಾಕರ ರೆಡ್ಡಿ ನಿಧನ

ಪಿಥೋರಗಢದಲ್ಲಿ, ಭೂಕುಸಿತದಿಂದಾಗಿ ಥಾಲ್-ಮುನ್ಸಾರಿ ಮತ್ತು ಮುನ್ಸಾರಿ-ಮಿಲಮ್ ರಸ್ತೆಗಳು ಮುಚ್ಚಲ್ಪಟ್ಟಿವೆ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ. ಮಳೆ ಮತ್ತು ಭೂಕುಸಿತ ಪೀಡಿತ ಪ್ರದೇಶಗಳಲ್ಲಿ ನಿವಾಸಿಗಳು ಜಾಗರೂಕರಾಗಿರುವಂತೆ ಪೊಲೀಸರು ಮನವಿ ಮಾಡಿದ್ದಾರೆ.  ಅನೇಕ ಗ್ರಾಮಸ್ಥರನ್ನು ಸುರಕ್ಷಿತ ಜಾಗಕ್ಕೆ ಸ್ಥಳಾಂತರಿಸಲಾಗಿದೆ. ಇದನ್ನೂ ಓದಿ: ಮಹೇಶ್ ಶೆಟ್ಟಿ ತಿಮರೋಡಿಗೆ ಜೈಲಾ? ಬೇಲಾ? – ಇಂದು ಉಡುಪಿ ಕೋರ್ಟ್‌ನಲ್ಲಿ ಅರ್ಜಿ ವಿಚಾರಣೆ

Share This Article