– ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡಿ ದಸರಾ ಉದ್ಘಾಟಿಸುವುದು ಸ್ವಂತ ಧಾರ್ಮಿಕ ನಂಬಿಕೆಗೆ ವಿರುದ್ಧ: ಶಾಸಕ
ಬೆಂಗಳೂರು: ಸಾಹಿತಿ ಬಾನು ಮುಷ್ತಾಕ್ (Banu Musthaq) ಅವರು ದಸರಾ ಉದ್ಘಾಟಿಸುವುದಕ್ಕೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಯತ್ನಾಳ್, ನಾನು ವೈಯಕ್ತಿಕವಾಗಿ ಬಾನು ಮುಷ್ತಾಕ್ ಅವರನ್ನು ಲೇಖಕಿ ಹಾಗೂ ಹೋರಾಟಗಾರ್ತಿಯಾಗಿ ಗೌರವಿಸುತ್ತೇನೆ. ಆದರೆ, ನಾಡದೇವತೆ ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆ ಸಲ್ಲಿಸಿ ದೀಪ ಬೆಳಗುವುದರ ಮೂಲಕ ದಸರಾವನ್ನು ಉದ್ಘಾಟಿಸುವುದು, ಅವರ ಸ್ವಂತ ಧಾರ್ಮಿಕ ನಂಬಿಕೆಗಳಿಗೆ ವಿರುದ್ಧವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಇದನ್ನೂ ಓದಿ: ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು ಮುಷ್ತಾಕ್ರಿಂದ ದಸರಾ ಉದ್ಘಾಟನೆ: ಸಿಎಂ ಘೋಷಣೆ
ನಾನು ವೈಯಕ್ತಿಕವಾಗಿ ಶ್ರೀಮತಿ ಭಾನು ಮುಶ್ತಾಕ್ ಅವರನ್ನು ಲೇಖಕಿ ಹಾಗೂ ಹೋರಾಟಗಾರ್ತಿಯಾಗಿ ಗೌರವಿಸುತ್ತೇನೆ. ಆದರೆ, ನಾಡದೇವತೆ ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆ ಸಲ್ಲಿಸಿ ದೀಪ ಬೆಳಗುವುದರ ಮೂಲಕ ದಸರಾವನ್ನು ಉದ್ಘಾಟಿಸುವುದು, ಅವರ ಸ್ವಂತ ಧಾರ್ಮಿಕ ನಂಬಿಕೆಗಳಿಗೆ ವಿರುದ್ಧವಾಗಿದೆ.
ಇಸ್ಲಾಂ ಮೂರ್ತಿ ಪೂಜೆಯನ್ನು ಧಿಕ್ಕರಿಸಿ ಒಂದು…
— Basanagouda R Patil (Yatnal) (@BasanagoudaBJP) August 24, 2025
ಇಸ್ಲಾಂ ಮೂರ್ತಿ ಪೂಜೆಯನ್ನು ಧಿಕ್ಕರಿಸಿ ಒಂದು ದೇವರು ಹಾಗೂ ಒಂದು ಗ್ರಂಥವನ್ನೇ ಒಪ್ಪಿಕೊಳ್ಳುತ್ತದೆ ಎಂಬ ನಂಬಿಕೆಯಲ್ಲಿ ಅವರು ಇನ್ನೂ ಇದ್ದಾರೆಯೇ, ಅಥವಾ ಎಲ್ಲಾ ಮಾರ್ಗಗಳೂ ಅಂತಿಮವಾಗಿ ಒಂದೇ ಮೋಕ್ಷಕ್ಕೆ ದಾರಿ ಮಾಡಿಕೊಡುತ್ತವೆ ಎಂದು ಅವರು ನಂಬುತ್ತಾರೆಯೇ ಎಂಬುದರ ಬಗ್ಗೆ ಬಾನು ಮುಷ್ತಾಕ್ ಅವರು ಸ್ಪಷ್ಟನೆ ನೀಡುವುದು ಅಗತ್ಯ. ಈ ಸ್ಪಷ್ಟತೆ ಇಲ್ಲದೆ, ದಸರಾ ಉದ್ಘಾಟಿಸುವುದು ಸರಿಯಲ್ಲ ಎಂದು ತಿಳಿಸಿದ್ದಾರೆ.
ದಸರಾ ಉತ್ಸವದ ಅಂಗವಾಗಿ ನಡೆಯುವ ಸಾಂಸ್ಕೃತಿಕ ಅಥವಾ ಕವಿಗೋಷ್ಠಿಯಂತಹ ಸಾಹಿತ್ಯ ಕಾರ್ಯಕ್ರಮಗಳನ್ನು ಉದ್ಘಾಟಿಸುವ ಅತಿಥಿಯಾಗಿ ಅವರು ಭಾಗವಹಿಸುವುದು ತಕ್ಕದ್ದಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು ಮುಷ್ತಾಕ್ರಿಂದ ಈ ಬಾರಿ ದಸರಾ ಉದ್ಘಾಟನೆ?