ಬೆಂಗಳೂರು: ದ್ವಿಚಕ್ರ ವಾಹನಕ್ಕೆ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದು 11 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ನಗರದ ಕೆ.ಆರ್ ಮಾರ್ಕೆಟ್ ಬಳಿ ನಡೆದಿದೆ.
ಶಬರೀಶ್ (11) ಮೃತ ಬಾಲಕ. ಕುಟುಂಬದವರ ಜೊತೆ ದ್ವಿಚಕ್ರ ವಾಹನದಲ್ಲಿ ಬಾಲಕ ಹೋಗುತ್ತಿದ್ದ. ಈ ವೇಳೆ ಬಿಎಂಟಿಗೆ ಬಸ್ ಡಿಕ್ಕಿ ಹೊಡೆದು ಬಾಲಕ ಮೃತಪಟ್ಟಿದ್ದಾನೆ.
ಬಾಲಕನ ತಂದೆ ದಿಲೀಪ್ ಕುಮಾರ್ ದೇವಸ್ಥಾನವೊಂದರಲ್ಲಿ ಪೂಜಾರಿಯಾಗಿದ್ದಾರೆ. ಕುಟುಂಬ ಸಮೇತರಾಗಿ ಮಾರ್ಕೆಟ್‌ಗೆ ಹೊರಟಿದ್ದರು. ಈ ವೇಳೆ ಮುಂದೆ ಹೋಗುತ್ತಿದ್ದ ಬೈಕ್‌ಗೆ ಬಸ್ ಡಿಕ್ಕಿ ಹೊಡೆದಿದೆ. ಬೈಕ್‌ನಿಂದ ಬಲಗಡೆಗೆ ಬಿದ್ದ ಬಾಲಕ ಸಾವಿಗೀಡಾಗಿದ್ದಾನೆ.
ಘಟನೆ ಸಂಬAಧ ಬಿಎಂಟಿಸಿ ಬಸ್ ಚಾಲಕ ಮತ್ತು ನಿರ್ವಾಹಕನನ್ನು ವಶಕ್ಕೆ ಪಡೆಯಲಾಗಿದೆ. ಹಲಸೂರು ಗೇಟ್ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.