ದುನಿಯಾ ವಿಜಯ್ ಪುತ್ರಿ ರಿತನ್ಯಾ ಹುಟ್ಟುಹಬ್ಬಕ್ಕೆ ಲ್ಯಾಂಡ್ ಲಾರ್ಡ್ ಫಸ್ಟ್ ಲುಕ್

By
1 Min Read

ʻಭೀಮಾʼ ಸಕ್ಸಸ್‌ ಬಳಿಕ ನಟ ದುನಿಯಾ ವಿಜಯ್ (Duniya Vijay), ರಚಿತಾ ರಾಮ್ ಪ್ರಮುಖಪಾತ್ರದಲ್ಲಿ ನಟಿಸುತ್ತಿರುವ ʻಲ್ಯಾಂಡ್ ಲಾರ್ಡ್ʼ ಚಿತ್ರದಲ್ಲಿ ದುನಿಯಾ ವಿಜಯ್ ಪುತ್ರಿ ರಿತನ್ಯಾ ವಿಜಯ್ ಸಹ ಮುಖ್ಯಪಾತ್ರದಲ್ಲಿ ಅಭಿನಯಿಸಿದ್ದಾರೆ.

ಯೆಸ್‌. ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ಅವರು ನಾಯಕರಾಗಿ ನಟಿಸಿದ್ದ ಸೂಪರ್ ಹಿಟ್ ಸಾರಥಿ ಚಿತ್ರವನ್ನು ನಿರ್ಮಿಸಿದ್ದ ಕೆ.ವಿ.ಸತ್ಯಪ್ರಕಾಶ್ ಹಾಗೂ ಕೆ.ಎಸ್ ಹೇಮಂತ್ ಗೌಡ ಅವರು ಸಾರಥಿ ಫಿಲಂಸ್ ಮೂಲಕ ಚಿತ್ರ‌ ನಿರ್ಮಾಣಕ್ಕೆ ಕೈ ಜೋಡಿಸಿದ್ದಾರೆ. ಜೊತೆಗೆ ಗುರುಶಿಷ್ಯರು ಚಿತ್ರದ ನಿರ್ದೇಶಕ ಹಾಗೂ ಕಾಟೇರ ಚಿತ್ರದ ಕಥಾ ಲೇಖಕ ಜಡೇಶ್ ಕೆ ಹಂಪಿ ನಿರ್ದೇಶನದ ಹಾಗೂ ತಮ್ಮ ಅಮೋಘ ಅಭಿನಯದ ಮೂಲಕ ಆಭಿಮಾನಿಗಳ ಮನ ಗೆದ್ದಿರುವ ದುನಿಯಾ ವಿಜಯ್, ರಚಿತಾ ರಾಮ್ ಪ್ರಮುಖಪಾತ್ರದಲ್ಲಿ ನಟಿಸುತ್ತಿರುವ ʻಲ್ಯಾಂಡ್ ಲಾರ್ಡ್ʼ ಚಿತ್ರದಲ್ಲಿ (Landlord Cinema) ದುನಿಯಾ ವಿಜಯ್ ಪುತ್ರಿ ರಿತನ್ಯಾ ವಿಜಯ್ ಸಹ ಮುಖ್ಯಪಾತ್ರದಲ್ಲಿ ಅಭಿನಯಿಸಿದ್ದಾರೆ.

ಆಗಸ್ಟ್ 30 ರಿತನ್ಯ ಅವರ ಜನ್ಮದಿನ. ಅಂದು ರಿತನ್ಯಾ ಅವರ ಫಸ್ಟ್ ಲುಕ್ ಬಿಡುಗಡೆ ಮಾಡುವ ಮೂಲಕ ಲ್ಯಾಂಡ್ ಲಾರ್ಡ್ ಚಿತ್ರತಂಡ ಹುಟ್ಟುಹಬ್ಬದ ಶುಭಾಶಯ ತಿಳಿಸಿದೆ. ರಿತನ್ಯಾ ವಿಜಯ್ ಅವರು ಭಾಗ್ಯ ಎನ್ನುವ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಲ್ಯಾಂಡ್ ಲಾರ್ಡ್ ಚಿತ್ರದ ರಿತನ್ಯ ವಿಜಯ್ ಅವರ ಫಸ್ಟ್ ಲುಕ್ ಪೋಸ್ಟರ್ ಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ ಹಾಗೂ ಕುತೂಹಲ ಮೂಡಿಸಿದೆ.

ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನ, ಸ್ವಾಮಿ ಜೆ ಗೌಡ ಛಾಯಾಗ್ರಹಣ ಹಾಗೂ ಕೆ.ಎಂ.ಪ್ರಕಾಶ್ ಅವರ ಸಂಕಲನವಿರುವ ಲ್ಯಾಂಡ್ ಲಾರ್ಡ್ ಚಿತ್ರದ ಚಿತ್ರೀಕರಣ ಬಹುತೇಕ ಮುಕ್ತಾಯವಾಗಿದ್ದು, ಪೋಸ್ಟ್ ಪ್ರೊಡಕ್ಷನ್ ವರ್ಕ್ ಬಿರುಸಿನಿಂದ ಸಾಗಿದೆ. ವರ್ಷದ ಕೊನೆಗೆ ಚಿತ್ರ ತೆರೆಗೆ ಬರುವ ಸಾಧ್ಯತೆ ಇದೆ.

Share This Article