– ದೇವಸ್ಥಾನ ವಿಚಾರದಲ್ಲಿ ರಾಜಕೀಯ ಬೆರೆಸಿದ್ದಕ್ಕೆ ಬೇಸರ
ಮೈಸೂರು: ಚಾಮುಂಡಿ ಬೆಟ್ಟ (Chamundi Hills) ಹಿಂದೂಗಳಿಗೆ ಸೇರಿದಲ್ಲ ಎಂಬ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಹೇಳಿಕೆ ಬಗ್ಗೆ ಯದುವಂಶಸ್ಥೆ ಪ್ರಮೋದಾದೇವಿ ಒಡೆಯರ್ (Pramoda Devi Wadiyar) ಮೌನ ಮುರಿದಿದ್ದಾರೆ. ಚಾಮುಂಡಿ ಬೆಟ್ಟ ಹಿಂದೂಗಳದ್ದು ಅಂತಾ ಗಟ್ಟಿಧ್ವನಿಯಲ್ಲಿ ಪ್ರತಿಪಾದಿಸಿದ್ದಾರೆ. ಜೊತೆಗೆ ಚಾಮುಂಡಿ ತಾಯಿಯನ್ನು ರಾಜಕೀಯ ವಿಷಯವಾಗಿ ಮಾಡಿಕೊಂಡದ್ದಕ್ಕೂ ಬೇಸರ ಹೊರ ಹಾಕಿದ್ದಾರೆ.
ಚಾಮುಂಡಿ ಬೆಟ್ಟ ಹಿಂದೂಗಳದಲ್ಲ ಎಂಬ ಡಿಕೆ ಶಿವಕುಮಾರ್ ಹೇಳಿಕೆ ರಾಜಕೀಯವಾಗಿ ಬಹಳ ದೊಡ್ಡ ಮಟ್ಟದ ಸದ್ದು ಮಾಡುತ್ತಿದೆ. ಈ ಬೆಳವಣಿಗೆ ಬಗ್ಗೆ ರಾಜವಂಶಸ್ಥೆ ಮೊದಲ ಬಾರಿಗೆ ಮೌನ ಮುರಿದಿದ್ದಾರೆ. ಚಾಮುಂಡಿ ಬೆಟ್ಟ ಹಿಂದೂಗಳಿಗೆ ಸೇರಿದ್ದು. ಚಾಮುಂಡಿ ಹಿಂದೂ ದೇವರು. ಯದುವಂಶಕ್ಕೆ ಮನೆ ದೇವರು. ಚಾಮುಂಡಿ ದೇವಿ ಯದುವಂಶಕ್ಕೆ ಧಾರ್ಮಿಕ ತಾಯಿ ಇದ್ದಂತೆ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾಗಿ ಎಂ.ಎ ಸಲೀಂ ನೇಮಕ
ಚಾಮುಂಡಿ ದೇವಸ್ಥಾನದಲ್ಲಿ ಹಿಂದೂ ಧಾರ್ಮಿಕ ವಿಧಿವಿಧಾನದಿಂದ ಪೂಜೆ ನಡೆಯುತ್ತದೆ. ಈ ಬಗ್ಗೆ ರಾಜಕಾರಣಿಗಳು ಏನೂ ಬೇಕಾದರು ಹೇಳಲಿ. ಕರೆಯುವವರು ಏನಾದರೂ ಕರೆಯಲಿ. ಅವರು ಹೇಳಿದ ತಕ್ಷಣ ಅವರು ಹೇಳಿದಂತೆ ಆಗಲ್ಲ ಎಂದು ಡಿಕೆ ಶಿವಕುಮಾರ್‌ಗೆ ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: ಉಡುಪಿ ಶ್ರೀಕೃಷ್ಣ ಮಠಕ್ಕೆ ಡಿಕೆಶಿ ಭೇಟಿ – ನಾಡಿನ ಒಳಿತಿಗಾಗಿ ಡಿಸಿಎಂ ಪ್ರಾರ್ಥನೆ
ರಾಜ ಮನೆತನ ದೇವಸ್ಥಾನ ವಿಚಾರದಲ್ಲಿ ನ್ಯಾಯಾಲಯದಲ್ಲಿ ಹೋರಾಟ ಮಾಡುತ್ತಿದೆ. ಚಾಮುಂಡಿ ಬೆಟ್ಟ ಪ್ರಾಧಿಕಾರ ರಚನೆ ಆದರೂ ಅದು ಅಧಿಕೃತ ಅಲ್ಲ. ನ್ಯಾಯಾಲಯದ ಆದೇಶ ಬಂದ ಮೇಲೆ ಅಷ್ಟೆ ಎಲ್ಲಾವು ಸ್ಪಷ್ಟ ಆಗೋದು ಎಂದು ಹೇಳುವ ಮೂಲಕ ಚಾಮುಂಡಿ ಬೆಟ್ಟ ಸರ್ಕಾರದ್ದೋ ಅಥವಾ ಯದುವಂಶದ್ದಾ ಎಂಬ ಪ್ರಶ್ನೆ ಇನ್ನೂ ಜೀವಂತವಾಗಿದೆ ಎಂದು ಸೂಚ್ಯವಾಗಿ ಹೇಳಿದ್ದಾರೆ. ಇದನ್ನೂ ಓದಿ: ಬುರುಡೆ ಕೇಸ್‌ಗೆ ಬೆಂಗಳೂರು ಲಿಂಕ್ – ಚಿನ್ನಯ್ಯ ನನ್ನ ಮನೆಯಲ್ಲಿದ್ದ, ತಲೆಬುರುಡೆ ತಂದಿದ್ದ; ʻಪಬ್ಲಿಕ್ ಟಿವಿʼಗೆ ಜಯಂತ್ ಸ್ಫೋಟಕ ಹೇಳಿಕೆ
ಚಾಮುಂಡಿ ದೇವಸ್ಥಾನವನ್ನು ರಾಜಕೀಯಕ್ಕೆ ಬಳಸಿಕೊಂಡಿದ್ದಕ್ಕೆ ನನಗೆ ಬೇಸರವಿದೆ ಎಂದ ಪ್ರಮೋದಾದೇವಿ ಒಡೆಯರ್, ದಸರಾ ಉದ್ಘಾಟಕರ ವಿಚಾರದಲ್ಲಿ ನನ್ನ ಅಭಿಪ್ರಾಯ ಏನೂ ಇಲ್ಲ. ಕರೆದವರು, ಕರೆಸಿಕೊಂಡವರಿಗಷ್ಟೇ ಅದು ಗೊತ್ತು. ಸರ್ಕಾರದ ದಸರಾ ನಮ್ಮ ಪರಂಪರೆ ಭಾಗವಲ್ಲ. ನಮ್ಮ ದಸರಾ ಖಾಸಗಿಯಾಗಿಯೆ ನಡೆಯುತ್ತದೆ. ಸರ್ಕಾರ ಅವರಿಗೆ ಬೇಕಾದ ರೀತಿ ದಸರಾ ಮಾಡುತ್ತಾರೆ. ಅದಕ್ಕೂ ನಮಗೂ ಸಂಬಂಧ ಇಲ್ಲ ಎಂದಿದ್ದಾರೆ. ದಸರಾ ವಿಚಾರದಲ್ಲಿ ಇಲ್ಲಿವರೆಗೆ ಆಗಿರುವ ರಾಜಕೀಯವೇ ಸಾಕು. ಆ ವಿಚಾರ ಇನ್ನು ಮುಂದುವರಿಸುವುದು ಬೇಡ ಎಂದಿದ್ದಾರೆ. ಇದನ್ನೂ ಓದಿ: ನೋಂದಣಿ, ಮುದ್ರಾಂಕ ಶುಲ್ಕ ನೆರೆ ರಾಜ್ಯಗಳ ದರಗಳೊಂದಿಗೆ ಸಮೀಕರಿಸಿ ಪರಿಷ್ಕರಣೆ – ಮುಲೈ ಮುಗಿಲನ್