ಕರ್ನಾಟಕದಲ್ಲಿ‌ ಬ್ಯಾಲೆಟ್ ಪೇಪರ್ ಎಲೆಕ್ಷನ್: ಕಾನೂನು ತರಲು ರಾಜ್ಯ ಸಚಿವ ಸಂಪುಟ ಒಪ್ಪಿಗೆ

By
1 Min Read

ಬೆಂಗಳೂರು: ದೇಶದಲ್ಲಿ ಇವಿಎಂ (EVM)  ಚಾಲೆಂಜ್ ಮಾಡ್ತಿರುವ ಕಾಂಗ್ರೆಸ್ ರಾಜ್ಯದಲ್ಲಿ ಬ್ಯಾಲೆಟ್ ಪೇಪರ್ (Ballot Paper) ಮೊರೆ ಹೋಗ್ತಿದೆ. ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ(Local Body Elections) ಬ್ಯಾಲೆಟ್ ಪೇಪರ್ ಬಳಕೆಗೆ ಅಗತ್ಯ ಕಾನೂನು ತರಲು ಕ್ಯಾಬಿನೆಟ್ (Cabinet) ಒಪ್ಪಿಗೆ ಸೂಚಿಸಿದೆ.

ಅಲ್ಲದೆ ಸ್ಥಳಿಯ ಸಂಸ್ಥೆಗಳ ಚುನಾವಣೆಗೆ ಮತದಾರರ ಪಟ್ಟಿಯನ್ನು ತಯಾರಿಸಲು, ಪರಿಷ್ಕರಣೆ ಮಾಡಲು ಅಗತ್ಯ ಕಾನೂನು ಮಾಡಲು ನಿಯಮಾವಳಿ ರೂಪಿಸಲು ರಾಜ್ಯ ಚುನಾವಣಾ ಆಯೋಗಕ್ಕೆ ಶಿಫಾರಸ್ಸು ಮಾಡಲು ಸಂಪುಟ ಒಪ್ಪಿಗೆ ಸಿಕ್ಕಿದೆ. ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ ಮಾಡಲು ಕಾಯ್ದೆಗೆ ತಿದ್ದುಪಡಿ ತರಬೇಕಿದ್ದು, ಸುಗ್ರೀವಾಜ್ಞೆ ಮೂಲಕ ಅಥವಾ ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ ಪಡೆಯಬೇಕಿದೆ. ಇಲ್ಲ ಸಚಿವ ಸಂಪುಟ ಶಿಫಾರಸ್ಸನ್ನ ಚುನಾವಣಾ ಆಯೋಗಕ್ಕೆ ಕಳುಹಿಸಬಹುದು. ಆಗ ಚುನಾವಣಾ ಆಯೋಗ ಒಪ್ಪಬಹುದು ಇಲ್ಲ. ಇಲ್ಲ ಬಿಡಬಹುದು. ಹಾಗಾಗಿ ಕಾಂಗ್ರೆಸ್ ಸರ್ಕಾರದ ಈ ಮಹತ್ವದ ನಿರ್ಧಾರ ಮುಂದಿನ ದಿನಗಳಲ್ಲಿ ರಾಜಕೀಯ ತಿರುವು ಪಡೆದುಕೊಳ್ಳುವ ಸಾಧ್ಯತೆ ಇದೆ. ಇದನ್ನೂ ಓದಿ: ʻಇವಿಎಂ ಹ್ಯಾಕ್‌ ಮಾಡಬಹುದುʼ ವಿಡಿಯೋ ಹರಿಬಿಟ್ಟವನ ವಿರುದ್ಧ ಎಫ್‌ಐಆರ್

ಗ್ರಾಮ ಪಂಚಾಯತ್‌ ಚುನಾವಣೆಗಳನ್ನ ಬಿಟ್ಟು ಉಳಿದ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಇವಿಎಂ ಬಳಕೆ ಮಾಡಲಾಗುತ್ತಿತ್ತು. ಆದರೆ ಬೀದರ್ ಜಿಲ್ಲೆಯಲ್ಲಿ ಮಾತ್ರ ಪ್ರಯೋಗಿಕವಾಗಿ ಗ್ರಾಮಪಂಚಾಯ್ತಿ ಚುನಾವಣೆಗೆ ಇವಿಎಂ ಬಳಕೆ ಮಾಡಲಾಗಿತ್ತು. ಈ ಹೊಸ ಕಾನೂನಿಗೆ ಒಪ್ಪಿಗೆ ಸಿಕ್ಕಿದ್ರೆ ಗ್ರೇಟರ್ ಬೆಂಗಳೂರು ಚುನಾವಣೆ ಸೇರಿದಂತೆ ಎಲ್ಲ ಮಹಾನಗರಪಾಲಿಕೆ, ನಗರಸಭೆ, ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್ ಚುನಾವಣೆಗಳಿಗೂ ಬ್ಯಾಲೆಟ್ ಪೇಪರ್ ಮೂಲಕ ಮತದಾನ ಆಗಲಿದೆ.

Share This Article