ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್‌ಗೆ ಆಹ್ವಾನ – ಹೈಕೋರ್ಟ್ ಮೆಟ್ಟಿಲೇರಿದ ಪ್ರತಾಪ್ ಸಿಂಹ

By
1 Min Read

ಬೆಂಗಳೂರು: ನಾಡಹಬ್ಬ ದಸರಾ (Dasara) ಉದ್ಘಾಟನೆಗೆ ಬಾನು ಮುಷ್ತಾಕ್‌ಗೆ ಆಹ್ವಾನದ ವಿಚಾರ ರಾಜಕೀಯದಿಂದ ಕಾನೂನು ಹೋರಾಟಕ್ಕೆ ತಿರುವು ಪಡೆದಿದೆ. ಬಾನು ಮುಷ್ತಾಕ್ (Banu Mushtaq) ಆಹ್ವಾನ ಹಿಂಪಡೆಯುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ (Pratap Simha) ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಹೌದು, ರಾಜ್ಯ ಸರ್ಕಾರದ ಕ್ರಮ ಪ್ರಶ್ನಿಸಿ ಹೈಕೋರ್ಟ್ (High Court) ಮೆಟ್ಟಿಲೇರಿದ ಪ್ರತಾಪ್ ಸಿಂಹ, ಸರ್ಕಾರದ ಕ್ರಮಕ್ಕೆ ತಡೆ ನೀಡುವಂತೆ ಕೋರಿ ಅರ್ಜಿ ಸಲ್ಲಿಸಿದ್ದಾರೆ. ಇದನ್ನೂ ಓದಿ: ಪಾಕಿಸ್ತಾನ ಜೊತೆಗಿನ ಯುದ್ಧ ಮೇ 10ಕ್ಕೆ ಕೊನೆಗೊಂಡಿಲ್ಲ: ಭಾರತೀಯ ಸೇನಾ ಮುಖ್ಯಸ್ಥ

ದಸರಾ ಉದ್ಘಾಟನೆ ವೇಳೆ ಚಾಮುಂಡೇಶ್ವರಿ ಪ್ರತಿಮೆಗೆ ಪುಷ್ಪಾರ್ಚನೆ ಮಾಡಬೇಕು. ವೇದ ಮಂತ್ರ, ಧಾರ್ಮಿಕ ಆಚರಣೆಗಳೊಂದಿಗೆ ಉದ್ಘಾಟನೆಯ ಸಂಪ್ರದಾಯವಿದೆ. ಬಾನು ಮುಷ್ತಾಕ್ ಹಿಂದೂ ವಿರೋಧಿ, ಕನ್ನಡ ವಿರೋಧಿ ಭಾವನೆ ಹೊಂದಿದ್ದಾರೆ. ಈ ವಿಚಾರದಲ್ಲಿ ರಾಜ್ಯ ಸರ್ಕಾರ ಏಕಪಕ್ಷೀಯವಾಗಿ ಬಾನು ಮುಷ್ತಾಕ್ ಅವರ ಆಯ್ಕೆ ಮಾಡಿದೆ. ಮೈಸೂರಿನ ರಾಜಮನೆತನದವರೂ ಸರ್ಕಾರದ ನಡೆ ವಿರೋಧಿಸಿದ್ದಾರೆ. ಆದರೂ ಸರ್ಕಾರದ ನಿರ್ಧಾರದಿಂದ ಹಿಂದೂಗಳ ಭಾವನೆಗೆ ಘಾಸಿ ಉಂಟು ಮಾಡಿದ್ದಾರೆ. ಹೀಗಾಗಿ ಬಾನು ಮುಷ್ತಾಕ್ ಅವರಿಗೆ ನೀಡಿದ ಆಹ್ವಾನ ಹಿಂಪಡೆಯುವಂತೆ ನಿರ್ದೇಶಿಸಲು ಮನವಿ ಮಾಡಿದ್ದಾರೆ. ಈ ವಿಚಾರ ಇನ್ನಷ್ಟೇ ಹೈಕೋರ್ಟ್ ಅಲ್ಲಿ ವಿಚಾರಣೆಗೆ ಬರಬೇಕಿದೆ. ಇದನ್ನೂ ಓದಿ: ಮೈಸೂರು | ಬಿಜೆಪಿಗೂ ಮುನ್ನವೇ ಹಿಂದೂ ಜಾಗರಣ ವೇದಿಕೆಯಿಂದ ʻಚಾಮುಂಡಿ ಬೆಟ್ಟ ಚಲೋ’ ಯಾತ್ರೆ

Share This Article