ಆಯಿಲ್ ಕಾರ್ಖಾನೆಯಲ್ಲಿ ಭಾರೀ ಅಗ್ನಿ ಅವಘಡ – ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಬೆಂಕಿಗಾಹುತಿ

By
1 Min Read

ಆನೇಕಲ್: ಆಯಿಲ್ ಕಾರ್ಖಾನೆಯಲ್ಲಿ (Oil Factory) ಭಾರೀ ಅಗ್ನಿ ಅವಘಡ (Fire Incident) ಸಂಭವಿಸಿದ ಪರಿಣಾಮ ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಬೆಂಕಿಗೆ ಆಹುತಿಯಾಗಿರುವ ಘಟನೆ ಬೆಂಗಳೂರು (Bengaluru) ಹೊರವಲಯ ಆನೇಕಲ್ (Anekal) ತಾಲೂಕಿನ ಹೀಲಲಿಗೆಯಲ್ಲಿ ನಡೆದಿದೆ.

ವಿಶಾಲ್ ಟ್ರೈಬೊಟೆಕ್ ಪ್ರೈವೇಟ್ ಲಿಮಿಟೆಡ್ ಕಾರ್ಖಾನೆಯಲ್ಲಿ ಹೆಚ್ಚಿನ ಪ್ರಮಾಣದ ಆಯಿಲ್ ಬ್ಯಾರೆಲ್‌ಗಳನ್ನು ಶೇಖರಿಸಲಾಗಿತ್ತು. ಏಕಾಏಕಿ ಕಾರ್ಖಾನೆಯಲ್ಲಿ ಬೆಂಕಿ ಹೊತ್ತಿಕೊಂಡು ಕ್ಷಣಾರ್ಧದಲ್ಲಿ ಇಡೀ ಕಾರ್ಖಾನೆಯನ್ನು ಆವರಿಸಿದೆ. ಸ್ಥಳಕ್ಕೆ ಹತ್ತಕ್ಕೂ ಹೆಚ್ಚು ಅಗ್ನಿಶಾಮಕ ದಳದ ವಾಹನಗಳು ಆಗಮಿಸಿದ್ದು, ಅಗ್ನಿಶಾಮಕ ಸಿಬ್ಬಂದಿ ಕಳೆದ ಐದು ಗಂಟೆಗಳಿಂದ ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ. ಇದನ್ನೂ ಓದಿ: ದಾವಣಗೆರೆ | ವೃದ್ಧ ದಂಪತಿಯ ಕೈಕಾಲು ಕಟ್ಟಿ 8 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಗ್ಯಾಂಗ್

ಸೂರ್ಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಅದೃಷ್ಟವಶಾತ್ ಅಗ್ನಿ ಅವಘಡದಿಂದ ಯಾವುದೇ ಸಾವು ನೋವು ಸಂಭವಿಸಿಲ್ಲ. ಕಾರ್ಖಾನೆಯಲ್ಲಿ ಸುಮಾರು 40 ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಆದರೆ ಇಂದು ಭಾನುವಾರ ಆಗಿರುವುದರಿಂದ ರಜೆ ಇತ್ತು. ಹೀಗಾಗಿ ಅಗ್ನಿ ಅವಘಡದ ವೇಳೆ ಕಾರ್ಖಾನೆಯಲ್ಲಿ ಕಾರ್ಮಿಕರು ಇರಲಿಲ್ಲ. ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹತ್ತಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಇದನ್ನೂ ಓದಿ: ಚಂದ್ರಗ್ರಹಣ ಕಣ್ತುಂಬ ನೋಡಿ ಸಂಭ್ರಮಿಸಿ: ಭೌತವಿಜ್ಞಾನಿ ಎ.ಪಿ.ಭಟ್‌

Share This Article