ಎಲ್ಲಾ ಹೆಣ್ಮಕ್ಕಳು ಮಾಡೋದು ವರದಕ್ಷಿಣೆ ಆರೋಪವೊಂದೇ ತಾನೆ – ಎಸ್‌. ನಾರಾಯಣ್‌

Public TV
2 Min Read

– ಒಂದು ವರ್ಷದ ಹಿಂದೆಯೇ ಮನೆಬಿಟ್ಟು ಹೋಗಿದ್ದಾರೆ
– ಸೊಸೆಗೆ ವರದಕ್ಷಿಣೆ ಕಿರುಕುಳ ಆರೋಪಕ್ಕೆ ಪ್ರತಿಕ್ರಿಯೆ

ಬೆಂಗಳೂರು: ಒಂದು ವರ್ಷದ ಹಿಂದೆಯೇ ಸೊಸೆ ಮನೆ ಬಿಟ್ಟು ಹೋಗಿದ್ರು. ಈಗ ದೂರು ವರದಕ್ಷಿಣೆ (Dowry0 ಕಿರುಕುಳ ಅಂತ ದೂರು ಕೊಟ್ಟಿದ್ದಾರೆ. ರೆಗ್ಯೂಲರ್‌ ಆಗಿ ನಮ್ಮ ದೇಶದಲ್ಲಿ ಎಲ್ಲಾ ಹೆಣ್ಮಕ್ಕಳು ಮಾಡೋದು ಅದೊಂದೇ ತಾನೆ ಎಂದ‌ ನಿರ್ದೇಶಕ ಎಸ್‌. ನಾರಾಯಣ್‌ (S Narayana) ಹೇಳಿದ್ದಾರೆ.

ಸೊಸೆ ಕೊಟ್ಟ ದೂರಿನ ಬಗ್ಗೆ ʻಪಬ್ಲಿಕ್‌ ಟಿವಿʼಗೆ (Public TV0 ಅವರು ಪ್ರತಿಕ್ರಿಯೆ ನೀಡಿದ್ದಾರೆ. ನಾವೇನೋ ಹಿಂಸೆ ಕೊಟ್ಟಿದ್ದೇವೆ ಅಂತ ದೂರು ಕೊಟ್ಟಿದ್ದಾರೆ. ಅದು ಕೋರ್ಟಿಗೆ ಹೋಗಿದೆ. ನಾವು ಅದರ ಬಗ್ಗೆ ಹೇಳಿದ್ರೆ ಅವರಿಗೇ ಅವಮಾನ ಮಾಡಿದಂತೆ ಆಗುತ್ತೆ. ಪಾಪ ಹೆಣ್ಮಗು ಅಲ್ವಾ? ಅವರಿಗೆ ತೇಜೋವಧೆ ಮಾಡಬಾರದು ಅಂತ ಹೇಳಿದ್ದಾರೆ. ಇದನ್ನೂ ಓದಿ: ಸೊಸೆಗೆ ವರದಕ್ಷಿಣೆ ಕಿರುಕುಳ ಆರೋಪ – ಎಸ್.ನಾರಾಯಣ್, ಪತ್ನಿ, ಪುತ್ರನ ವಿರುದ್ಧ ಎಫ್‌ಐಆರ್

ಇನ್ನೂ ವರದಕ್ಷಿಣ ಕಿರುಕುಳ ಅಂತ ಆರೋಪ ಮಾಡಿದ್ದರೆ ಅನ್ನೋ ಪ್ರಶ್ನೆಗೆ ಪ್ರತಿಕ್ರಿಯಿಸಿ, ರೆಗ್ಯೂಲರ್‌ ಆಗಿ ನಮ್ಮ ದೇಶದಲ್ಲಿ ಎಲ್ಲಾ ಹೆಣ್ಮಕ್ಕಳು ಮಾಡೋದು ಅದೊಂದೇ ತಾನೆ. ಬೇರೆ ಇನ್ನೇನಾದ್ರೂ ಸಿಗುತ್ತಾ? ಅವರು ಮನೆ ಬಿಟ್ಟು ಹೋಗಿ ಒಂದು ವರ್ಷ ಆಯ್ತು. ಈಗ ದೂರು ಕೊಟ್ಟಿದ್ದಾರೆ. ಅವರಿಗೆ ಸುಃಖ, ಸಂತೋಷ ಎಲ್ಲಿ ಸಿಗುತ್ತೋ ಅಲ್ಲಿಗೆ ಹೋಗಿದ್ದಾರೆ. ನನ್ನ ವ್ಯಕ್ತಿತ್ವ ಎಲ್ಲರಿಗೂ ಗೊತ್ತು, ನಾವು ಸದಾ ಹೆಣ್ಮಕ್ಕಳನ್ನ ಗೌರವರಿಂದ ಕಾಣುವಂತಹವರು ಅಂತ ತಿಳಿಸಿದ್ದಾರೆ. ಇದನ್ನೂ ಓದಿ: ದರ್ಶನ್‌ಗೆ 40 ನಿಮಿಷ ಜೈಲಿನಲ್ಲಿ ವಾಕಿಂಗ್‌ಗೆ ಅವಕಾಶ

ಎಫ್‌ಐಆರ್‌ ಏಕೆ?
ಸೊಸೆಗೆ ವರದಕ್ಷಿಣೆ ಕಿರುಕುಳ ನೀಡಿದ ಆರೋಪದಡಿ ಖ್ಯಾತ ಚಿತ್ರ ನಿರ್ದೇಶಕ ಎಸ್.ನಾರಾಯಣ್, ಪತ್ನಿ, ಪುತ್ರನ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಈ ಸಂಬಂಧ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಎಸ್.ನಾರಾಯಣ್ ಅವರ 2ನೇ ಮಗನ ಪತ್ನಿ ಪವಿತ್ರಾ ದೂರು ದಾಖಲಿಸಿದ್ದಾರೆ. ದೂರಿನನ್ವಯ ಎಸ್.ನಾರಾಯಣ್, ಪತ್ನಿ ಭಾಗ್ಯಲಕ್ಷ್ಮಿ, ಪತಿ ಪವನ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಮದುವೆಯಲ್ಲಿ ವರದಕ್ಷಿಣೆ ಕೊಟ್ಟಿದ್ದರೂ ಹೆಚ್ಚಿನ ಹಣಕ್ಕೆ ಒತ್ತಾಯ ಮಾಡುತ್ತಿದ್ದಾರೆ. ಹಲ್ಲೆ ನಡೆಸಿ ವರದಕ್ಷಿಣೆ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಅಮೆರಿಕದಲ್ಲಿ ವಿನಯ್ & ವಂದಿತಾ ಜೊತೆ ರಮ್ಯಾ ಸುತ್ತಾಟ

ದೂರಿನಲ್ಲಿ ಏನಿದೆ?
ನಾನು ಹಾಗೂ ಎಸ್.ನಾರಾಯಣ್ ಪುತ್ರ ಪವನ್ 2021ರಲ್ಲಿ ಮದುವೆಯಾದೆವು. ಪವನ್ ಓದಿರದ ಕಾರಣ ಕೆಲಸ ಇಲ್ಲದೆ ಮನೆಯಲ್ಲಿಯೇ ಇದ್ದರು. ಇದರಿಂದಾಗಿ ನಾನೇ ಕೆಲಸಕ್ಕೆ ಹೋಗಿ ಮನೆ ಸಾಗಿಸುತ್ತಿದ್ದೆ. ನಂತರ ಪವನ್ ಕಲಾ ಸಾಮ್ರಾಟ್ ಟೀಂ ಅಕಾಡೆಮಿ ಎಂಬ ಫಿಲ್ಮ್ ಇನ್ಸ್ಟಿಟ್ಯೂಟ್ ಪ್ರಾರಂಭಿಸಬೇಕೆಂದು ಯೋಚಿಸಿದ್ದರು. ಇದಕ್ಕಾಗಿ ನನ್ನ ಬಳಿ ದುಡ್ಡು ಕೇಳಿದ್ದರು. ಆಗ ನನ್ನ ತಾಯಿಯ ಒಡವೆ ಕೊಟ್ಟಿದ್ದೆ. ಆದ್ರೆ ಬಳಿಕ ಲಾಸ್ ಆಗಿ ಇನ್ಸ್ಟಿಟ್ಯೂಟ್ ಮುಚ್ಚಬೇಕಾದ ಪರಿಸ್ಥಿತಿ ಬಂತು.

ಮದುವೆಯಲ್ಲಿ 1 ಲಕ್ಷ ರೂ. ಮೌಲ್ಯದ ಉಂಗುರ ಹಾಗೂ ಮದುವೆ ಖರ್ಚು ನೋಡಿಕೊಂಡಿದ್ದೆವು. ವರದಕ್ಷಿಣೆ ಕೊಟ್ರೂ ಹಲ್ಲೆ ನಡೆಸಿ ಹೆಚ್ಚಿನ ಹಣಕ್ಕೆ ಒತ್ತಾಯಿಸಿದ್ದಾರೆ. ಹೀಗಾಗಿ ಜಗಳ ಆಗಿ ನನ್ನನ್ನು ಮನೆಯಿಂದ ಆಚೆ ಹಾಕಿದ್ದರು. ಇದರಿಂದ ನನಗೆ ಹಾಗೂ ನನ್ನ ಮಗನಿಗೆ ತೊಂದರೆಯಾಗುತ್ತೆ, ಒಂದು ವೇಳೆ ಏನಾದರೂ ಆದರೆ ಇವರುಗಳೇ ಕಾರಣ ಎಂದು ಆರೋಪಿಸಿ, ಕ್ರಮಕ್ಕಾಗಿ ಮನವಿ ಮಾಡಿಕೊಂಡಿದ್ದಾರೆ.

Share This Article