ಚಿಂಚನಸೂರು ಗ್ರಾಮದ ಸುತ್ತಮುತ್ತ ಲಘು ಭೂಕಂಪ – ಆತಂಕ ಬೇಡ ಎಂದ ಪ್ರಿಯಾಂಕ್ ಖರ್ಗೆ

Public TV
1 Min Read

ಬೆಂಗಳೂರು: ಕಲಬುರಗಿ (Kalaburagi) ಜಿಲ್ಲೆಯ ಆಳಂದ (Alanda) ತಾಲೂಕಿನ ಚಿಂಚನಸೂರು ಗ್ರಾಮದ ಸುತ್ತಮುತ್ತಲಿನ ಪ್ರದೇಶದಲ್ಲಿ ಇಂದು ಬೆಳಗ್ಗೆ 8:17ರ ಸುಮಾರಿಗೆ ಸಣ್ಣ ಪ್ರಮಾಣದ ಭೂಕಂಪನವಾಗಿದ್ದು, ರಿಕ್ಟರ್ ಮಾಪಕದಲ್ಲಿ 2.3 ತೀವ್ರತೆ ದಾಖಲಾಗಿದೆ.

ಘಟನೆ ಹಿನ್ನೆಲೆ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯಿಸಿ, ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರದೊಂದಿಗೆ ಸಂಪರ್ಕದಲ್ಲಿದ್ದು, ಸ್ಥಳಕ್ಕೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು, ತಹಸೀಲ್ದಾರ್, ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕಾರು, ಬೈಕ್‌ ಮುಖಾಮುಖಿ ಡಿಕ್ಕಿ – ಮದುವೆ ನಿಶ್ಚಯವಾಗಿದ್ದ ಜೋಡಿ ದುರ್ಮರಣ

ಭೂಕಂಪನ ಸಣ್ಣ ಪ್ರಮಾಣದ್ದಾಗಿದ್ದು, ಸಾರ್ವಜನಿಕರು ಹಾಗೂ ಚಿಂಚನಸೂರು ಸೇರಿದಂತೆ ಸುತ್ತಮುತ್ತಲಿನ ವ್ಯಾಪ್ತಿಯ ಗ್ರಾಮಸ್ಥರು ಯಾವುದೇ ರೀತಿಯ ಆತಂಕಕ್ಕೆ ಒಳಗಾಗಬಾರದು ಎಂದು ಪ್ರಿಯಾಂಕ್ ಖರ್ಗೆ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಸಂಗಮೇಶ್ ಈ ಜನ್ಮದಲ್ಲೇ ಇಸ್ಲಾಂಗೆ ಹೋಗಿಬಿಡಲಿ: ಯತ್ನಾಳ್ ತರಾಟೆ

Share This Article