ಬೀದರ್ | ಪತ್ನಿ ಬಿಟ್ಟು ಹೋಗಿದ್ದಕ್ಕೆ 30 ಅಡಿ ಬ್ರಿಡ್ಜ್ ಮೇಲಿಂದ ಹಾರಿದ ಪತಿ

Public TV
1 Min Read

ಬೀದರ್: ಮಕ್ಕಳನ್ನು ಕರೆದುಕೊಂಡು ಹೆಂಡತಿ ಬಿಟ್ಟು ಹೋಗಿದ್ದಕ್ಕೆ 30 ಅಡಿ ಬ್ರಿಡ್ಜ್ ಮೇಲಿಂದ ನದಿಗೆ ಹಾರಿರುವ ಘಟನೆ ಬೀದರ್ (Bidar) ಜಿಲ್ಲೆಯ ಭಾಲ್ಕಿ (Bhalki) ತಾಲೂಕಿನ ಹಲಸಿತೂಗಾಂವ್ ಗ್ರಾಮದ ಬಳಿ ನಡೆದಿದೆ.

ವ್ಯಕ್ತಿಯನ್ನು ಹಲಸಿತೂಗಾಂವ್ ಗ್ರಾಮದ ನಿವಾಸಿ ಪ್ರಭಾಕರ್ ಸೂರ್ಯವಂಶಿ (38) ಎಂದು ಗುರುತಿಸಲಾಗಿದೆ. ವ್ಯಕ್ತಿ 30 ಅಡಿಯ ಬ್ರಿಡ್ಜ್ ಮೇಲಿಂದ ಮಾಂಜ್ರಾ ನದಿಗೆ ಹಾರುವ ಭಯಾನಕ ದೃಶ್ಯವನ್ನು ಸ್ಥಳೀಯರು ಮೊಬೈಲ್‌ನಲ್ಲಿ ಸೆರೆಹಿಡಿದಿದ್ದಾರೆ.ಇದನ್ನೂ ಓದಿ: ಹಿಂದೂ ಆಗಲಿ, ಮುಸ್ಲಿಂ ಆಗಲಿ ಕಾನೂನಿಗೆ ವಿರುದ್ಧವಾಗಿ ನಡೆದುಕೊಂಡಿದ್ರೆ ಕ್ರಮ: ಪರಮೇಶ್ವರ್‌

ಕೆಲವು ವರ್ಷಗಳ ಹಿಂದೆ ಹೆಂಡತಿ ಮತ್ತು ಮಕ್ಕಳು ಬಿಟ್ಟು ತವರು ಮನೆಗೆ ಹೋಗಿದ್ದರು. ಇದರಿಂದ ಮನನೊಂದ ಪತಿ ಪ್ರಭಾಕರ್ ಸೂರ್ಯವಂಶಿ ಕುಡಿತದ ಚಟಕ್ಕೆ ದಾಸನಾಗಿದ್ದ. ಇದೀಗ ನದಿಗೆ ಹಾರಿ ನೀರುಪಾಲಾಗಿದ್ದಾನೆ. ಸದ್ಯ ಅಗ್ನಿಶಾಮಕ ಸಿಬ್ಬಂದಿ ಮತ್ತು ಪೊಲೀಸರು ಶೋಧ ಕಾರ್ಯಚರಣೆ ನಡೆಸುತ್ತಿದ್ದಾರೆ.

ಈ ಕುರಿತು ಮೆಹಕರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.ಇದನ್ನೂ ಓದಿ: ರಾಮನ ಪಾತ್ರಕ್ಕಾಗಿ ಮಾಂಸಾಹಾರ, ಮದ್ಯ ಸೇವನೆ ಬಿಟ್ಟಿದ್ದರಂತೆ ರಣ್‌ಬೀರ್ ಕಪೂರ್

Share This Article