ಹಾಸನ: ಮದ್ದೂರಿನಲ್ಲಿ ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣ ಮಾಸುವ ಮುನ್ನವೇ ಹಾಸನದ (Hassan) ಮೊಸಳೆಹೊಸಳ್ಳಿ ಗ್ರಾಮದಲ್ಲಿ ಗಣೇಶ ಮೆರವಣಿಗೆ ವೇಳೆ ಘನಘೋರ ದುರಂತವೊಂದು ಸಂಭವಿಸಿದೆ. ಹುಟ್ಟುಹಬ್ಬದ ಸಂಭ್ರಮದಲ್ಲಿದ್ದ ವಿದ್ಯಾರ್ಥಿಯೋರ್ವ ಈ ಘಟನೆಯಲ್ಲಿ ಸಾವನ್ನಪ್ಪಿದ್ದಾನೆ.
ಚಿತ್ರದುರ್ಗದ (Chitradurga) ಹೊಸದುರ್ಗ ತಾಲೂಕಿನ ಗವಿಗಂಗಾಪುರ ಗ್ರಾಮದವನಾದ ಮಿಥುನ್ ಬಿನ್ ವಿಜಯ್ (23) ಮೃತ ವಿದ್ಯಾರ್ಥಿ. ಈವರೆಗೆ ದುರಂತದಲ್ಲಿ 9 ಜನರು ಸಾವನ್ನಪ್ಪಿದ್ದಾರೆ. ಅವಘಡದಲ್ಲಿ 20ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಇದನ್ನೂ ಓದಿ: ಹಾಸನದಲ್ಲಿ ಗಣೇಶ ಮೆರವಣಿಗೆ ವೇಳೆ ಘನಘೋರ ದುರಂತ – ಸಾವಿನ ಸಂಖ್ಯೆ 9ಕ್ಕೆ ಏರಿಕೆ
ಗುರುವಾರ ತಡರಾತ್ರಿ (ಸೆ.11) ಹಾಸ್ಟೆಲ್‌ನಲ್ಲಿ ಮಿಥುನ್ ಗೆಳೆಯರು ಬರ್ತ್‌ಡೇ ಆಚರಿಸಿದ್ದರು. ಬಳಿಕ ಶುಕ್ರವಾರ ಸಂಜೆವರೆಗೂ ಮಿಥುನ್ ಸ್ನೇಹಿತರ ಜೊತೆಗಿದ್ದ. ಬಳಿಕ ಮೆರವೆಣಿಗೆಗೆ ತೆರಳಿದ್ದ. ಈ ವೇಳೆ ಮೆರವಣಿಗೆಯಲ್ಲಿ ಟ್ರಕ್ ಹರಿದು ದಾರುಣವಾಗಿ ಸಾವನ್ನಪ್ಪಿದ್ದಾನೆ.
ಇನ್ನು ಮೊಸಳೆಹೊಸಳ್ಳಿ ಗ್ರಾಮಸ್ಥರು ಗ್ರಾಮದಲ್ಲಿ 25 ವರ್ಷಗಳಿಂದ ಗ್ರಾಮಸ್ತರು ಗಣಪತಿ ಕೂರಿಸುತ್ತಿದ್ದಾರೆ. ಇಂದು ಆರ್ಕೆಸ್ಟ್ರಾ ಆಯೋಜಿಸಲಾಗಿತ್ತು. ಮೆರವಣಿಗೆಯಲ್ಲಿ ಆರ್ಕೆಸ್ಟ್ರಾ ಬಳಿಗೆ ಸಾವಿರಾರು ಮಂದಿ ಬರುತ್ತಿದ್ದರು. ಈ ವೇಳೆ ಮೆರವಣಿಗೆಯಲ್ಲಿ ತೆರಳುತ್ತಿದ್ದವರ ಮೇಲೆ ಯಮಸ್ವರೂಪಿ ಟ್ರಕ್ ಹರಿದು ದುರಂತ ಸಂಭವಿಸಿದೆ.
ಏನಿದು ಘನಘೋರ ದುರಂತ?
ಹಾಸನದಿಂದ ಹೊಳೆನರಸೀಪುರದ ಕಡೆಗೆ ಮಹಾರಾಷ್ಟ್ರಕ್ಕೆ ಸೇರಿದ ಟ್ರಕ್ ಹೋಗುತ್ತಿತ್ತು. ಬೈಕ್‌ಗೆ ಡಿಕ್ಕಿ ತಪ್ಪಿಸಲು ಹೋಗಿ ಮೆರವಣಿಗೆ ಹೋಗುತ್ತಿದ್ದವರ ಮೇಲೆ ವಾಹನ ನುಗ್ಗಿದೆ. ಬೈಕ್ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಚಾಲಕ ಭುವನೇಶ್‌ಗೆ ಸ್ಥಳೀಯರು ಹಿಡಿದು ಥಳಿಸಿದ್ದಾರೆ. ಗಾಯಗೊಂಡ ಹೊಳೆನರಸೀಪುರ ತಾಲ್ಲೂಕಿನ ಕಟ್ಟೆಬೆಳಗುಲಿಯ ಚಾಲಕ ಭುವನೇಶ್‌ನನ್ನು ಹಾಸನದ ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಡಿಸಿ ಲತಾ ಕುಮಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಇದನ್ನೂ ಓದಿ: ಹಾಸನ| ಗಣೇಶ ಮೆರವಣಿಗೆ ವೇಳೆ ಭೀಕರ ಅಪಘಾತ – ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ