ಭೋಪಾಲ್: ಮಧ್ಯಪ್ರದೇಶದ (Madhya Pradesh) ಸಿಎಂ ಮೋಹನ್ ಯಾದವ್ (Mohan Yadav) ಅವರು ಹಾರಾಟ ನಡೆಸಲು ಸಿದ್ಧತೆ ನಡೆಸಿದ್ದ ಹಾಟ್ ಏರ್ ಬಲೂನ್ನ ಎಂಜಿನ್ನಲ್ಲಿ (Hot Air Balloon) ಬೆಂಕಿ (Fire) ಕಾಣಿಸಿಕೊಂಡಿದೆ. ಮಂದಸೋರ್ನಲ್ಲಿ ಈ ಆಘಾತಕಾರಿ ಘಟನೆ ನಡೆದಿದ್ದು, ಮೋಹನ್ ಯಾದವ್ ಅವರು ಅಪಾಯದಿಂದ ಪಾರಾಗಿದ್ದಾರೆ.
मंदसौर में जिस हॉट एयर बैलून में सीएम मोहन यादव थे उसी में भड़की आग. सुरक्षाकर्मियों ने सुरक्षित बाहर निकाला…! pic.twitter.com/X1InpZilUY
— Rupesh Mishra (@rupeshmishramp) September 13, 2025
ಶನಿವಾರ ಬೆಳಿಗ್ಗೆ (ಸೆ.13) ಮಂದಸೋರ್ನ ಗಾಂಧಿ ಸಾಗರ್ ಅರಣ್ಯ ಪ್ರದೇಶದಲ್ಲಿ ಮೋಹನ್ ಯಾದವ್ ಹಾಟ್ ಏರ್ ಬಲೂನ್ನಲ್ಲಿ ಹಾರಾಟ ನಡೆಸಲು ಸಿದ್ಧತೆ ನಡೆಸಿದ್ದರು. ಅಷ್ಟರಲ್ಲೇ ಎಂಜಿನ್ನ ಭಾಗದಲ್ಲಿ ಬೆಂಕಿ ಹೊತ್ತಿಕೊಂಡಿದೆ. ಕೂಡಲೇ ಭದ್ರತಾ ಸಿಬ್ಬಂದಿ ಅವರನ್ನು ಕೆಳಗಿಳಿಸಿ, ಸುರಕ್ಷಿತ ಸ್ಥಳಕ್ಕೆ ಕರೆದೊಯ್ದಿದ್ದಾರೆ. ಹಾಟ್ ಏರ್ ಬಲೂನ್ ಹಾರಾಟದಲ್ಲಿದ್ದಾಗ ಬೆಂಕಿ ಹೊತ್ತಿಕೊಂಡಿದ್ದರೆ ಭಾರೀ ಅನಾಹುತ ಸಂಭವಿಸುತ್ತಿತ್ತು. ಅದೃಷ್ಟವಶಾತ್ ನೆಲದಲ್ಲಿದ್ದಾಗ ಈ ಅವಘಡ ಸಂಭವಿಸಿದ್ದರಿಂದ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ. ಇದನ್ನೂ ಓದಿ: 21 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಏರ್ ಬಲೂನ್ನಲ್ಲಿ ಬೆಂಕಿ ಅವಘಡ; 8 ಮಂದಿ ದುರ್ಮರಣ
ಈ ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವೀಡಿಯೋದಲ್ಲಿ ಮೋಹನ್ ಯಾದವ್ ಅವರು ಹಾಟ್ ಏರ್ ಬಲೂನ್ನಲ್ಲಿದ್ದಾಗ ಎಂಜಿನ್ನಿಂದ ಬೆಂಕಿಯ ಜ್ವಾಲೆ ಹೊರಹೊಮ್ಮುತ್ತಿರುವುದು ಕಾಣಿಸುತ್ತದೆ. ತಕ್ಷಣ ಹಾಟ್ ಏರ್ ಬಲೂನ್ನ್ನು ನಿಯಂತ್ರಣಕ್ಕೆ ತೆಗೆದುಕೊಂಡು, ಬೆಂಕಿ ನಂದಿಸಲಾಗಿದೆ. ಈ ಅವಘಡದಲ್ಲಿ ಯಾರಿಗೂ ಯಾವುದೇ ಅಪಾಯವಾಗಿಲ್ಲ ಎಂದು ವರದಿಯಾಗಿದೆ. ಇದನ್ನೂ ಓದಿ: ಕಾಂಡ್ಲಾದಲ್ಲಿ ಟೇಕಾಫ್ ವೇಳೆ ಕಳಚಿದ ಸ್ಪೈಸ್ಜೆಟ್ ಚಕ್ರ – ಮುಂಬೈನಲ್ಲಿ ಸೇಫ್ ಲ್ಯಾಂಡಿಂಗ್