– ಬ್ಯಾಟಿಂಗ್ ಆಯ್ದುಕೊಂಡ ಪಾಕಿಸ್ತಾನ
ದುಬೈ: ಪಹಲ್ಗಾಮ್ ಭಯೋತ್ಪಾದಕ ದಾಳಿ, ಭಾರತದ ಆಪರೇಷನ್ ಸಿಂಧೂರ ಬಳಿಕ ಮೊದಲ ಬಾರಿಗೆ ಭಾರತ ಮತ್ತು ಪಾಕಿಸ್ತಾನ ಕ್ರಿಕೆಟ್ ತಂಡಗಳು ಮುಖಾಮುಖಿಯಾಗಿವೆ. ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಎಷ್ಯಾ ಕಪ್ 2025ರ ಗ್ರೂಪ್ ಎ ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ ಬ್ಯಾಟಿಂಗ್ ಆಯ್ದುಕೊಂಡಿದೆ.
ಟಾಸ್ ಸಮಯದಲ್ಲಿ ಮೈದಾನದಲ್ಲಿ ಕುತೂಹಲಕಾರಿ ಘಟನೆಯೊಂದು ನಡೆದಿದೆ. ಟಾಸ್ ಬಳಿಕ ಭಾರತದ ನಾಯಕ ಸೂರ್ಯಕುಮಾರ್ ಯಾದವ್, ಪಾಕ್ ಕ್ಯಾಪ್ಟನ್ ಸಲ್ಮಾನ್ ಅಲಿ ಅಘಾ ಕೈ ಕುಲುಕಲಿಲ್ಲ. ಪಾಕ್ ಕ್ಯಾಪ್ಟನ್ ಕಡೆ ನೋಡದೇ ಸೂರ್ಯಕುಮಾರ್ ಮುಂದೆ ಸಾಗಿದ ಪ್ರಸಂಗ ನಡೆಯಿತು. ಸಾಮಾನ್ಯವಾಗಿ ಕ್ರಿಕೆಟ್ ಪಂದ್ಯಗಳಲ್ಲಿ ನಾಯಕರು ಟಾಸ್ ಸಮಯದಲ್ಲಿ ಕೈಕುಲುಕುವುದು ವಾಡಿಕೆ.
ಭಾರತ ಆಟಗಾರರು: ಅಭಿಷೇಕ್ ಶರ್ಮಾ, ಶುಭಮನ್ ಗಿಲ್, ಸೂರ್ಯಕುಮಾರ್ ಯಾದವ್(ಸಿ), ತಿಲಕ್ ವರ್ಮಾ, ಸಂಜು ಸ್ಯಾಮ್ಸನ್(ಪ), ಶಿವಂ ದುಬೆ, ಹಾರ್ದಿಕ್ ಪಾಂಡ್ಯ, ಅಕ್ಸರ್ ಪಟೇಲ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ವರುಣ್ ಚಕ್ರವರ್ತಿ.
ಪಾಕಿಸ್ತಾನ ಆಟಗಾರರು: ಸಾಹಿಬ್ಜಾದಾ ಫರ್ಹಾನ್, ಸೈಮ್ ಅಯೂಬ್, ಮೊಹಮ್ಮದ್ ಹ್ಯಾರಿಸ್(ಡಬ್ಲ್ಯೂ), ಫಖರ್ ಜಮಾನ್, ಸಲ್ಮಾನ್ ಅಘಾ(ಸಿ), ಹಸನ್ ನವಾಜ್, ಮೊಹಮ್ಮದ್ ನವಾಜ್, ಫಹೀಮ್ ಅಶ್ರಫ್, ಶಾಹೀನ್ ಅಫ್ರಿದಿ, ಸುಫಿಯಾನ್ ಮುಖೀಮ್, ಅಬ್ರಾರ್ ಅಹ್ಮದ್.