Hassan Tragedy – ಸಂತ್ರಸ್ತರ ಕುಟುಂಬಕ್ಕೆ ಸಾಂತ್ವನ ಹೇಳಿದ ನಿಶ್ಚಲಾನಂದನಾಥ ಶ್ರೀ

1 Min Read

– ಐಸಿಯುನಲ್ಲಿದ್ದ ಮತ್ತೋರ್ವ ವಿದ್ಯಾರ್ಥಿ ಮೈಸೂರಿಗೆ ಶಿಫ್ಟ್

ಹಾಸನ: ಮೊಸಳೆಹೊಸಳ್ಳಿಯಲ್ಲಿ (Mosale Hosalli) ಟ್ರಕ್ ಹರಿದು ಸಾವನ್ನಪ್ಪಿದ (Hassan Tragedy) ಸಂತ್ರಸ್ತರ ಮನೆಗಳಿಗೆ ಕೆಂಗೇರಿಯ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಭೇಟಿ ನೀಡಿ ಸಾಂತ್ವನ ಹೇಳಿದರು.

ಕಬ್ಬಿನಹಳ್ಳಿ ಗ್ರಾಮದ ಪ್ರವೀಣ್, ಕುಮಾರ್ ಮನೆಗೆ ಶ್ರೀಗಳು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಇದೇ ವೇಳೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹೆಚ್ಚಿನ ಪರಿಹಾರ ನೀಡುವಂತೆ ಒತ್ತಾಯಿಸಿದರು. ಇದನ್ನೂ ಓದಿ: ಹಾಸನ ದುರಂತ – ಕಂಬನಿ ಮಿಡಿದ ಟ್ರಕ್ ಚಾಲಕನ ಗ್ರಾಮಸ್ಥರು

ವಿದ್ಯಾರ್ಥಿ ಮೈಸೂರಿಗೆ ಶಿಫ್ಟ್
ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಮತ್ತೊಬ್ಬ ಇಂಜಿನಿಯರಿಂಗ್ ವಿದ್ಯಾರ್ಥಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ನಗರದ ಹಿಮ್ಸ್ ಆಸ್ಪತ್ರೆಯಿಂದ ಮೈಸೂರಿಗೆ ಶಿಫ್ಟ್ ಮಾಡಲಾಗಿದೆ. ಆಕಾಶ್ (21) ಗಂಭೀರ ಗಾಯಗೊಂಡಿದ್ದು, ಅವರನ್ನು ಹಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಜೆಎಸ್‌ಎಸ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಯಿತು. ಈತ ಮೊಸಳೆಹೊಸಳ್ಳಿಯ ಇಂಜಿನಿಯರಿಂಗ್ ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿಯಾಗಿದ್ದಾನೆ. ಇದನ್ನೂ ಓದಿ: Hassan Tragedy | ಹೆಚ್ಚಿನ ಪರಿಹಾರ ಕೊಡದಿದ್ರೆ ರಾಜೀನಾಮೆ ಕೊಟ್ಟು ಹೋಗಿ – ಸಿಎಂ ವಿರುದ್ಧ ಶೋಭಾ ಕರಂದ್ಲಾಜೆ ಕಿಡಿ

Share This Article