ರಾಜ್ಯದಲ್ಲಿ ಮೂರು ದಿನ ಭಾರೀ ಮಳೆ ಎಚ್ಚರಿಕೆ

Public TV
1 Min Read

– ಉತ್ತರ ಒಳನಾಡು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಮೂರು ದಿನಗಳು ಭಾರೀ ಮಳೆಯಾಗುವ (Rain) ಎಚ್ಚರಿಕೆಯನ್ನು ಹವಾಮಾನ ಇಲಾಖೆ (IMD) ನೀಡಿದೆ.

ಸೆಪ್ಟೆಂಬರ್ 16 ಮತ್ತು 17ರಂದು ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿರುವ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರಗಿ, ಕೊಪ್ಪಳ, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಭಾರೀ ಮಳೆಯ ಎಚ್ಚರಿಕೆ ನೀಡಿದೆ.

ಇನ್ನು ಕರಾವಳಿ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಸೆ.18 ರಂದು ಕರಾವಳಿ, ಗದಗ, ಕೊಪ್ಪಳ, ರಾಯಚೂರು, ಯಾದಗಿರಿ, ಬೆಂಗಳೂರು ನಗರ, ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ ಮತ್ತು ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಸೆ. 19 ರಿಂದ 22ರ ವರೆಗೆ ರಾಜ್ಯಾದ್ಯಂತ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Share This Article