ಚಾಮರಾಜನಗರ: ಮಲೆ ಮಹದೇಶ್ವರ ವನ್ಯಧಾಮದಲ್ಲಿ ಮತ್ತೆ ಹುಲಿ ದಾರುಣ ಸಾವನ್ನಪ್ಪಿರುವ ಘಟನೆ ನಡೆದಿದೆ. ಹುಲಿಯ ಅರ್ಧ ದೇಹ ಪತ್ತೆಯಾಗಿದೆ.
ಹನೂರು ವಲಯ ಪಚ್ಚೆದೊಡ್ಡಿ ಗ್ರಾಮದ ಬಳಿ ಹುಲಿಯ ತಲೆ, ಭುಜ, ಮುಂದಿನ ಕಾಲುಗಳು ಪತ್ತೆಯಾಗಿವೆ. ಸಿಕ್ಕಿರುವ ಕಳೇಬರದ ಭಾಗದಲ್ಲಿ ಉಗುರು ಮತ್ತು ಹಲ್ಲುಗಳು ಸೇಫ್ ಆಗಿವೆ.
ಹುಲಿಯ ಕಳ್ಳಬೇಟೆ ಶಂಕೆ ಶಂಕೆ ವ್ಯಕ್ತವಾಗಿದ್ದು, ತನಿಖೆಗೆ ಅರಣ್ಯ ಇಲಾಖೆ ಕ್ರಮವಹಿಸಿದೆ. ಹುಲಿ ದೇಹದ ಉಳಿತ ಭಾಗ ಹುಡುಕಲು ಶೋಧ ನಡೆದಿದೆ. ಹುಲಿ ಸಾವಿಗೆ ಕಾರಣವೇನು ಮತ್ತು ಕಾರಣಕರ್ತರು ಯಾರು ಎಂಬುದನ್ನು ಪತ್ತೆ ಹಚ್ಚಲು ಕ್ರಮಕೈಗೊಳ್ಳಲಾಗಿದೆ ಎಂದು ಮಹದೇಶ್ವರ ವನ್ಯಧಾಮದ ಡಿಸಿಎಫ್ ಭಾಸ್ಕರ್ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇತ್ತೀಚೆಗೆ ಮಹದೇಶ್ವರ ಬೆಟ್ಟದ ಬಳಿ ಐದು ಹುಲಿಗಳಿಗೆ ವಿಶಪ್ರಾಷಣ ಮಾಡಿ ಕೊಲ್ಲಲಾಗಿತ್ತು. ಕಾಡಂಚಿನ ಗ್ರಾಮಗಳಲ್ಲಿ ಹುಲಿಗಳ ಉಪಟಳ ತಪ್ಪಿಸುವ ಉದ್ದೇಶದಿಂದ ಮೃತ ಹಸುವಿನ ದೇಹಕ್ಕೆ ವಿಷ ಹಾಕಿ, ಮಾಂಸವನ್ನು ತಿಂದು ಹುಲಿಗಳು ಸಾಯುವಂತೆ ಮಾಡಲಾಗಿತ್ತು.