ಪಾಕ್‌ನ ಪೇಶಾವರದಲ್ಲಿ ಬಾಂಬ್ ಸ್ಫೋಟ – 9 ಮಂದಿ ಸಾವು, ನಾಲ್ವರಿಗೆ ಗಾಯ

Public TV
1 Min Read

ಇಸ್ಲಾಮಾಬಾದ್‌: ಪಾಕಿಸ್ತಾನದ (Pakistan) ಪೇಶಾವರದಲ್ಲಿ (Peshawar) ಸಂಭವಿಸಿದ ಬಾಂಬ್ ಸ್ಫೋಟದಿಂದ (Bomb Blast) 9 ಮಂದಿ ಸಾವನ್ನಪ್ಪಿದ್ದು, ನಾಲ್ವರು ಪೊಲೀಸರು ಗಾಯಗೊಂಡಿದ್ದಾರೆ.

ನಗರದ ಜನನಿಬಿಡ ಪ್ರದೇಶದಲ್ಲಿ ಸ್ಫೋಟ ಸಂಭವಿಸಿದೆ. ಪೊಲೀಸರು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ.‌ ಅಧಿಕಾರಿಗಳು ಬಾಂಬ್ ಸ್ಫೋಟದ ಬಗ್ಗೆ ತನಿಖೆ ಕೈಗೊಂಡಿದ್ದಾರೆ. ಇದನ್ನೂ ಓದಿ: ಪಾಕಿಸ್ತಾನದಲ್ಲಿ ಬಾಂಬ್‌ ದಾಳಿ – ಕನಿಷ್ಠ 10 ಜನರು ಸಾವು

ಬಲೂಚಿಸ್ತಾನ್ ಸಿಎಂ ಮೀರ್ ಸರ್ಫ್ರಾಜ್ ಬುಗ್ತಿ ಈ ಬಗ್ಗೆ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿದ್ದು, ಈ ದಾಳಿಯನ್ನು ಖಂಡಿಸಿದ್ದು, ಇದೊಂದು ಭಯೋತ್ಪಾದಕ ಕೃತ್ಯ ಎಂದು ಕರೆದಿದ್ದಾರೆ.

ಬಾಂಬ್‌ ದಾಳಿ ನಡೆದ ಸ್ಥಳದಲ್ಲಿ ಭದ್ರತಾ ಪಡೆಗಳು ತಕ್ಷಣ ಪ್ರತಿಕ್ರಿಯಿಸಿ ನಾಲ್ವರು ದಾಳಿಕೋರರನ್ನು ಹೊಡೆದುರುಳಿಸಿವೆ. ಭಯೋತ್ಪಾದಕರು ಹೇಡಿತನದ ಕೃತ್ಯಗಳ ಮೂಲಕ ರಾಷ್ಟ್ರದ ದೃಢಸಂಕಲ್ಪವನ್ನು ದುರ್ಬಲಗೊಳಿಸಲು ಸಾಧ್ಯವಿಲ್ಲ ಎಂದು ಅವರು ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.

ಸ್ಫೋಟದ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ. ಪೇಶಾವರ ಹಾಗೂ ಸುತ್ತಮುತ್ತ ನಡೆಯುವ ದಾಳಿಗಳಿಗೆ ಅಫ್ಘಾನಿಸ್ತಾನದ ಗಡಿಯ ಸಮೀಪವಿರುವ ಪ್ರದೇಶಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಉಗ್ರಗಾಮಿ ಗುಂಪುಗಳು ಕಾರಣ ಎನ್ನಲಾಗುತ್ತಿದೆ. ಇತ್ತೀಚಿನ ದಿನಗಳಲ್ಲಿ ಪಾಕಿಸ್ತಾನದ ಗಡಿಗಳಲ್ಲಿ ಹೆಚ್ಚಿನ ಉಗ್ರರ ದಾಳಿ ಸಂಭವಿಸುತ್ತಿವೆ. ಇದು ದೇಶದ ಭದ್ರತೆಗೆ ಸವಾಲಾಗಿ ಪರಿಣಮಿಸಿದೆ. ಇದನ್ನೂ ಓದಿ: ಪಾಕ್‌ ಸರ್ಕಾರದ ವಿರುದ್ಧ ಪಿಓಕೆಯಲ್ಲಿ ಭಾರೀ ಪ್ರತಿಭಟನೆ – ಷರೀಫ್‌, ಅಸಿಮ್ ಮುನೀರ್‌ಗೆ ಪುಕ ಪುಕ

Share This Article