ಪಾಟ್ನಾ: ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಡಿಕ್ಕಿಯಾಗಿ ನಾಲ್ವರು ಸಾವನ್ನಪ್ಪಿರುವ ಘಟನೆ ಬಿಹಾರದ (Bihar) ಪೂರ್ಣಿಯಾದಲ್ಲಿ (Purnea) ನಡೆದಿದೆ.
ವಂದೇ ಭಾರತ್ ಎಕ್ಸ್ಪ್ರೆಸ್ (Vande Bharat Express) ರೈಲು ಶುಕ್ರವಾರ (ಅ.3) ಬೆಳಗ್ಗೆ ಜೋಗಬಾನಿಯಿಂದ (Jogbani) ಪಾಟಲಿಪುತ್ರಕ್ಕೆ (Pataliputra) ಸಂಚರಿಸುತ್ತಿತ್ತು. ಪೂರ್ಣಿಯಾ ಪಟ್ಟಣದ ಬಳಿ ಮೇಳವೊಂದರಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ವೀಕ್ಷಿಸಿ ಮರಳುತ್ತಿದ್ದವರಿಗೆ ರೈಲು ಡಿಕ್ಕಿ ಹೊಡೆದಿದೆ. ಪರಿಣಾಮ ನಾಲ್ವರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.ಇದನ್ನೂ ಓದಿ: ಪಾಕ್ನ ಪೇಶಾವರದಲ್ಲಿ ಬಾಂಬ್ ಸ್ಫೋಟ – 9 ಮಂದಿ ಸಾವು, ನಾಲ್ವರಿಗೆ ಗಾಯ
ಸದ್ಯ ಗಾಯಗೊಂಡವರನ್ನು ಜಿಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿಕೊಡಲಾಗಿದೆ. ಈ ಅಪಘಾತಕ್ಕೆ ಸಂಬಂಧಿಸಿದಂತೆ ರೈಲ್ವೆ ಕ್ರಾಸಿಂಗ್ ಸಿಬ್ಬಂದಿಯ ನಿರ್ಲಕ್ಷ್ಯವೋ? ಅಥವಾ ಜನರು ಹೈಸ್ಪೀಡ್ ರೈಲನ್ನು ನಿರ್ಲಕ್ಷಿಸಿ ಕ್ರಾಸಿಂಗ್ ದಾಟಲು ಪ್ರಯತ್ನಿಸಿದ್ದರೋ? ಎಂಬುದರ ಕುರಿತು ಮಾಹಿತಿ ತಿಳಿದುಬರಬೇಕಿದೆ. ಸದ್ಯ ರೈಲ್ವೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.