ಬೆಂಗಳೂರು: ಬಿ.ಎಸ್ಸಿ ನರ್ಸಿಂಗ್, ಬಿ.ಫಾರ್ಮ, ಫಾರ್ಮ-ಡಿ ಕೋರ್ಸುಗಳಿಗೆ ಅಂತಿಮ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆಯಲ್ಲಿ ಭಾಗವಹಿಸಲು ಆಸಕ್ತಿಯುಳ್ಳ ಅರ್ಹ ಅಭ್ಯರ್ಥಿಗಳು ಅ.6ರ ಬೆಳಿಗ್ಗೆ 11ರೊಳಗೆ ಹೊಸದಾಗಿ ತಮ್ಮ ಇಚ್ಛೆ/ಆಯ್ಕೆಗಳನ್ನು ಆದ್ಯತಾ ಕ್ರಮದಲ್ಲಿ ದಾಖಲಿಸಬೇಕು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಸೂಚಿಸಿದೆ.
ಬಿ.ಎಸ್ಸಿ. ನರ್ಸಿಂಗ್ ಕೋರ್ಸಿಗೆ ಸರ್ಕಾರ ಹೆಚ್ಚಿಸಿರುವ ಸೀಟುಗಳು, ಹಿಂದಿನ ಸೀಟುಗಳ ಹಂಚಿಕೆಯ ನಂತರ ಭರ್ತಿಯಾಗದೇ ಉಳಿದಿರುವ/ರದ್ದುಗೊಂಡಿರುವ/ಹೊಸದಾಗಿ ಸೇರಿಸಲಾದ ಬಿ.ಫಾರ್ಮ ಮತ್ತು ಫಾರ್ಮ-ಡಿ ಸೀಟುಗಳನ್ನು ಈ ಹಂಚಿಕೆಗೆ ಪರಿಗಣಿಸಲಾಗುವುದು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಅವರು ಶುಕ್ರವಾರ ಮಾಧ್ಯಮ ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದ್ದಾರೆ.
ಸರ್ಕಾರಿ ಕಾಲೇಜುಗಳಲ್ಲಿರುವ ಸೀಟುಗಳು ಹಾಗೂ ಖಾಸಗಿ ಕಾಲೇಜುಗಳ ‘ಜಿ’ ಸೀಟುಗಳು ಈ ಹಂಚಿಕೆ ವ್ಯಾಪ್ತಿಗೆ ಒಳಪಡುತ್ತವೆ. ಅಭ್ಯರ್ಥಿಗಳು ಈ ಹಿಂದಿನ ಸುತ್ತುಗಳಲ್ಲಿ ದಾಖಲಿಸಿದ ಇಚ್ಛೆ/ಆಯ್ಕೆಗಳನ್ನು ಈ ಹಂತದ ಹಂಚಿಕೆಗೆ ಪರಿಗಣಿಸುವುದಿಲ್ಲ. ಕಾಲೇಜುವಾರು, ವರ್ಗವಾರು ಮತ್ತು ಕೋರ್ಸುವಾರು ವಿವರವಾದ ಸೀಟ್ ಮ್ಯಾಟ್ರಿಕ್ಸ್ ಅನ್ನು ಕೆಇಎ ವೆಬ್ ಸೈಟಿನಲ್ಲಿ ಪ್ರಕಟಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಇದನ್ನೂ ಓದಿ: ಕರ್ನಾಟಕದಲ್ಲಿ ಕೇಂದ್ರಕ್ಕೂ ಮೊದಲೇ ರಾಜ್ಯ ಚುನಾವಣಾ ಆಯೋಗದಿಂದ SIR
10,000 ರೂ. ಕಾಷನ್ ಡಿಪಾಸಿಟ್ ಪಾವತಿಸಿ ಇದುವರೆಗೂ ಯಾವುದೇ ಸೀಟು ಹಂಚಿಕೆ ಮಾಡಿಕೊಳ್ಳದ ಅಭ್ಯರ್ಥಿಗಳನ್ನು ಹೊರತುಪಡಿಸಿ ಉಳಿದೆಲ್ಲಾ ಅಭ್ಯರ್ಥಿಗಳು ಈ ಸುತ್ತಿನಲ್ಲಿ ಭಾಗವಹಿಸಬಹುದು. ಇದಕ್ಕಾಗಿ 10,000 ರೂ. ಕಾಷನ್ ಡೆಪಾಸಿಟ್ ಪಾವತಿಸಬೇಕು. 10,000 ರೂ. ದಂಡ ಪಾವತಿಸಿ ಸೀಟು ರದ್ದುಪಡಿಸಿಕೊಂಡಿರುವ ಅಭ್ಯರ್ಥಿಗಳು ಮತ್ತೊಮ್ಮೆ ಕಾಷನ್ ಡಿಪಾಸಿಟ್ ಪಾವತಿಸಬೇಕಾಗುತ್ತದೆ ಎಂದು ವಿವರಿಸಲಾಗಿದೆ. ಇದನ್ನೂ ಓದಿ: ಹದಗೆಟ್ಟ ರಸ್ತೆ| ಗಣತಿ ಕಾರ್ಯಕ್ಕೆ ತೆರಳಿದ್ದ ಶಿಕ್ಷಕಿ ಬೈಕಿನಿಂದ ಬಿದ್ದು ಸಾವು
ಇದು ಅಂತಿಮ ಸುತ್ತಿನ ಸೀಟು
ಹಂಚಿಕೆಯಾಗಿರುವುದರಿಂದ ಆಪ್ಷನ್ ಎಂಟ್ರಿ ಮಾಡಿದ ಕಾಲೇಜಿನಲ್ಲಿ ಸೀಟು ಹಂಚಿಕೆಯಾದರೆ ಕಡ್ಡಾಯವಾಗಿ ಪ್ರವೇಶ ಪಡೆಯಬೇಕು. ಹೀಗಾಗಿ, ಅಭ್ಯರ್ಥಿಗಳು ಸೇರಬಹುದಾದ ಕಾಲೇಜನ್ನು ಖಚಿತಪಡಿಸಿಕೊಂಡು ಆಪ್ಷನ್ ಎಂಟ್ರಿ ನಮೂದಿಸಬೇಕು. ಸೀಟ್ ಮ್ಯಾಟ್ರಿಕ್ಸ್ ನ ಪರಿಷ್ಕೃತ ಮಾಹಿತಿಗಾಗಿ ಅಭ್ಯರ್ಥಿಗಳು ಕೆಇಎ ವೆಬ್ ಸೈಟ್ ಅನ್ನು ಆಗಾಗ ಗಮನಿಸುತ್ತಿರಬೇಕು ಎಂದು ಸ್ಪಷ್ಟಪಡಿಸಲಾಗಿದೆ.