ಕೋಲಾರ | ಮನೆ ಮುಂದೆ ಆಟವಾಡುತ್ತಿದ್ದ ಬಾಲಕಿಯರು ಬಾವಿಯಲ್ಲಿ ಶವವಾಗಿ ಪತ್ತೆ

Public TV
1 Min Read

– ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಬಾಲಕಿಯರು

ಕೋಲಾರ: ಮನೆ ಮುಂದೆ ಆಟವಾಡುತ್ತಿದ್ದಾಗ ಏಕಾಏಕಿ ನಾಪತ್ತೆಯಾಗಿದ್ದ ಇಬ್ಬರು ಬಾಲಕಿಯರು ಬಾವಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಕೋಲಾರ (Kolar) ಜಿಲ್ಲೆಯ ಮುಳಬಾಗಿಲು (Mulbagal) ಯಳಚೇಪಲ್ಲಿ ಗ್ರಾಮದಲ್ಲಿ ನಡೆದಿದೆ.

ಪತ್ತೆಯಾದ ಮೃತದೇಹಗಳನ್ನು ಧನ್ಯಬಾಯಿ (13), ಚೈತ್ರಾಬಾಯಿ (13) ಎಂದು ಗುರುತಿಸಲಾಗಿದೆ. ಗುರುವಾರ (ಅ.2) ಮನೆ ಮುಂದೆ ಆಟವಾಡುತ್ತಿದ್ದ ಇಬ್ಬರು ಬಾಲಕಿಯರು ಏಕಾಏಕಿ ನಾಪತ್ತೆಯಾಗಿದ್ದರು. ಈ ಕುರಿತು ಬಾಲಕಿಯರ ಕುಟುಂಬಸ್ಥರು ಮುಳಬಾಗಿಲು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.ಇದನ್ನೂ ಓದಿ: ಪ್ರಿಯಕರ ಸ್ನೇಹಿತೆಯೊಟ್ಟಿಗೆ ಓಯೋ ರೂಂನಲ್ಲಿ ಇದ್ದಿದ್ದನ್ನ ಕಂಡು ಮನನೊಂದು ಮಹಿಳೆ ಆತ್ಮಹತ್ಯೆ

ಸದ್ಯ ನಾಪತ್ತೆಯಾಗಿದ್ದ ಬಾಲಕಿಯರು ಮುಳಬಾಗಿಲು ತಾಲೂಕಿನ ಕುಪ್ಪಂಪಾಳ್ಯ ಬಳಿಯಿರುವ ಬಾವಿಯೊಂದರಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ದುಷ್ಕರ್ಮಿಗಳು ಕೊಲೆ ಮಾಡಿ ಬಿಸಾಡಿರಬಹುದು ಅಥವಾ ಬಾಲಕಿಯರು ಆತ್ಮಹತ್ಯೆಗೆ ಶರಣಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದ್ದು, ಸ್ಥಳಕ್ಕೆ ಮುಳಬಾಗಿಲು ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

Share This Article