ನೆಲಮಂಗಲ | ಬೆಳ್ಳಂಬೆಳಗ್ಗೆ ಈರುಳ್ಳಿ ತುಂಬಿದ್ದ ಲಾರಿ ಬೆಂಕಿಗಾಹುತಿ

Public TV
1 Min Read

ನೆಲಮಂಗಲ: ಲಾರಿಯ ಇಂಜಿನ್‌ನಲ್ಲಿ ಉಂಟಾದ ಶಾರ್ಟ್‌ಸರ್ಕ್ಯೂಟ್‌ನಿಂದಾಗಿ ಮಾರುಕಟ್ಟೆಗೆ ಹೊರಟಿದ್ದ ಈರುಳ್ಳಿ ತುಂಬಿದ್ದ ಲಾರಿ ಬೆಂಕಿಗಾಹುತಿಯಾಗಿರುವ ಘಟನೆ ಬೆಂಗಳೂರು (Bengaluru) ಹೊರವಲಯದ ನೆಲಮಂಗಲ (Nelmangala) ತಾಲೂಕಿನ ಬೂದಿಹಾಳ್ (Budihal Gate) ಗೇಟ್ ಬಳಿ ನಡೆದಿದೆ.

ಶನಿವಾರ (ಅ.4) ಬೆಳಗ್ಗೆ ಈರುಳ್ಳಿ ತುಂಬಿದ್ದ ಲಾರಿ ಚಿತ್ರದುರ್ಗದಿಂದ ನೆಲಮಂಗಲದ ದಾಸನಪುರ ಎಪಿಎಂಸಿಗೆ ಬರುತ್ತಿತ್ತು. ಈ ವೇಳೆ ಮಾರ್ಗಮಧ್ಯೆ ಲಾರಿಯ ಇಂಜಿನ್‌ನಲ್ಲಿ ಶಾರ್ಟ್‌ಸರ್ಕ್ಯೂಟ್‌ ಉಂಟಾಗಿ ಬೆಂಕಿ ಹೊತ್ತಿಕೊಂಡಿದೆ. ಪರಿಣಾಮ ಲಕ್ಷಾಂತರ ಮೌಲ್ಯದ ಈರುಳ್ಳಿ ಬೆಂಕಿಗಾಹುತಿಯಾಗಿದೆ.ಇದನ್ನೂ ಓದಿ: ಬೆಳಗಾವಿ | ಕಲ್ಲು ತೂರಾಟಕ್ಕೆ ಹಿಂದೂ ಯುವಕರ ಕೌಂಟರ್ – `ಐ ಲವ್ ಶ್ರೀರಾಮ್‌’ ಫಲಕ ಅಳವಡಿಕೆ

ಈರುಳ್ಳಿ ನಾಶದಿಂದ ರೈತ ಕಂಗಾಲಾಗಿದ್ದು, ಲಾರಿಯ ಚಾಲಕ ಹಾಗೂ ಕ್ಲೀನರ್ ಪ್ರಾಣಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ನೆಲಮಂಗಲ ಟ್ರಾಫಿಕ್ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಸದ್ಯ ಈ ಸಂಬಂಧ ಪ್ರಕರಣ ದಾಖಲಾಗಿದೆ.

Share This Article