ನಟಿ ರಮ್ಯಾ ವಿರುದ್ಧ ಅಶ್ಲೀಲ ಕಾಮೆಂಟ್ ಕೇಸ್ – 2 ತಿಂಗಳು ಕಳೆದರೂ 12 ಆರೋಪಿಗಳಿಗೆ ಬಿಡುಗಡೆ ಭಾಗ್ಯವಿಲ್ಲ

Public TV
1 Min Read

ಬೆಂಗಳೂರು: ನಟಿ ರಮ್ಯಾಗೆ (Ramya) ಅಶ್ಲೀಲ ಕಾಮೆಂಟ್ ಮಾಡಿದ್ದ ಪ್ರಕರಣದಲ್ಲಿ ಬಂಧನವಾಗಿರುವ ಹನ್ನೆರಡು ಜನ ಆರೋಪಿಗಳಿಗೆ ಇನ್ನೂ ಜಾಮೀನು ಸಿಕ್ಕಿಲ್ಲ.

ಕಳೆದ ಎರಡು ತಿಂಗಳಿನಿಂದ ಪರಪ್ಪನ ಅಗ್ರಹಾರ ಜೈಲಿನಲ್ಲೇ ಆರೋಪಿಗಳಿದ್ದಾರೆ. ಇತ್ತ ಸಿಸಿಬಿ ಪೊಲೀಸರು ಪ್ರಕರಣದ ತನಿಖೆ ಮುಕ್ತಾಯಕ್ಕೆ ಬಂದಿದ್ದು, ಇನ್ನೊಂದು ವಾರದಲ್ಲಿ ಚಾರ್ಜ್‌ಶೀಟ್ ಹಾಕಲು ಸಿದ್ಧತೆ ನಡೆಸಿದ್ದಾರೆ. ಇದನ್ನೂ ಓದಿ: ಮಲ್ಲಿಕಾರ್ಜುನ ಖರ್ಗೆ ಭೇಟಿಯಾಗಿ ಆರೋಗ್ಯ ವಿಚಾರಿಸಿದ ರಮ್ಯಾ

ಕಳೆದ ಜುಲೈನಲ್ಲಿ ನಟಿ ರಮ್ಯಾ, ರೇಣುಕಾಸ್ವಾಮಿ ಕೊಲೆ‌ ಕೇಸಲ್ಲಿ ನ್ಯಾಯ ಸಿಗಬೇಕು ಅಂತಾ ಕಾಮೆಂಟ್ ಮಾಡಿದ್ರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಹಲವರು ರಮ್ಯಾಗೆ ಅಶ್ಲೀಲ ಮೆಸೇಜ್ ಮಾಡಿದ್ರು. ಈ ಸಂಬಂಧ 43 ಅಕೌಂಟ್‌ಗಳ ವಿರುದ್ಧ ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ರು.

ತನಿಖೆಗಿಳಿದ ಸಿಸಿಬಿ ಪೊಲೀಸರು, ರಾಜ್ಯಾದ್ಯಂತ ಹನ್ನೆರಡು ಜನ ಆರೋಪಿಗಳನ್ನು ಬಂಧಿಸಿ ಜೈಲಿಗಟ್ಟಿದ್ದರು. ಇಲ್ಲಿಯವರೆಗೆ ಯಾವುದೇ ಆರೋಪಿಗೆ ಜಾಮೀನು ಸಿಕ್ಕಿಲ್ಲ. ಇದನ್ನೂ ಓದಿ: ಮೈಸೂರು ಅರಮನೆ ಪೇಂಟಿಂಗ್‌ ಮುಂದೆ ದಸರಾ ಗೊಂಬೆಯಂತೆ ಕಂಗೊಳಿಸಿದ ರಮ್ಯಾ!

Share This Article