ಇಸ್ಲಾಮಾಬಾದ್: ಈ ಬಾರಿ ಭಾರತ (India) ತನ್ನದೇ ಯುದ್ಧ ವಿಮಾನಗಳ ಅವಶೇಷಗಳ ಅಡಿಯಲ್ಲಿ ಹೂತುಹೋಗುತ್ತದೆ ಎಂದು ಹೇಳುವ ಮೂಲಕ ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್ *(Khawaja Asif) ಉದ್ಧಟತನ ಮೆರೆದಿದ್ದಾರೆ.
ಇತ್ತೀಚೆಗಷ್ಟೇ ಭಾರತೀಯ ಸೇನಾ ಪಡೆಯ ಮುಖ್ಯಸ್ಥರು ಪಾಕ್‌ಗೆ ಎಚ್ಚರಿಕೆ ನೀಡಿದ್ದರು. ಮತ್ತೆ ಕೆಣಕಿದ್ರೆ ಪಾಕಿಸ್ತಾನವನ್ನ ವಿಶ್ವಭೂಪಟದಿಂದಲೇ ಅಳಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದರು. ಅದಕ್ಕೆ ಪ್ರತಿಯಾಗಿ ಪಾಕಿಸ್ತಾನ (Pakistan) ಕೂಡ ಭಾರತಕ್ಕೆ ಎಚ್ಚರಿಕೆ ನೀಡಿದೆ. ಇದನ್ನೂ ಓದಿ: ಪಾಕಿನ ಎಫ್-16 , ಜೆಎಫ್-17 ಯುದ್ಧ ವಿಮಾನಗಳನ್ನು ಹೊಡೆದಿದ್ದೇವೆ: ಏರ್ ಚೀಫ್ ಮಾರ್ಷಲ್
ಈ ಬಾರಿ ʻಭಾರತವು ಅದರ ಯುದ್ಧ ವಿಮಾನಗಳ ಅವಶೇಷಗಳಡಿಯಲ್ಲಿ ಹೂತುಹೋಗಲಿದೆʼ ಎಂದು ಎಚ್ಚರಿಸಿದ್ದಾರೆ. ಈ ಬಗ್ಗೆ ಎಕ್ಸ್ನಲ್ಲಿ ಪೋಸ್ಟ್ ಮಾಡಿದ ಆಸಿಫ್, ಭಾರತದ ಮಿಲಿಟರಿ ಮತ್ತು ರಾಜಕೀಯ ನಾಯಕರ ಇತ್ತೀಚಿನ ಹೇಳಿಕೆಗಳು ಅವರ ಕಳೆದುಹೋದ ವಿಶ್ವಾಸಾರ್ಹತೆಯನ್ನ ಪುನಃಸ್ಥಾಪಿಸುವ ವಿಫಲ ಪ್ರಯತ್ನ. ದೇಶೀಯ ಪ್ರತಿಕ್ರಿಯೆಯಿಂದ ಜನರನ್ನ ಬೇರೆಡೆಗೆ ಸೆಳೆಯಲು ಸರ್ಕಾರವು ಉದ್ವಿಗ್ನತೆ ಹುಟ್ಟುಹಾಕುತ್ತಿದೆ ಎಂದು ಅವರು ಆರೋಪಿಸಿದ್ದಾರೆ.
ಪಾಕಿಸ್ತಾನ ಅಲ್ಲಾಹನ ಹೆಸರಿನಲ್ಲಿ ನಿರ್ಮಿಸಲಾದ ರಾಷ್ಟ್ರ, ನಮ್ಮ ರಕ್ಷಕರು ಅಲ್ಲಾಹನ ಸೈನಿಕರು. ಈ ಬಾರಿ, ಭಾರತವೇನಾದರೂ ನಮ್ಮ ತಂಟೆಗೆ ಬಂದರೆ ಅದು ತನ್ನ ಯುದ್ಧವಿಮಾನಗಳ ಭಗ್ನಾವಶೇಷಗಳ ಅಡಿಯಲ್ಲಿ ಹೂತುಹೋಗಲಿದೆ. ಅಲ್ಲಾಹು ಅಕ್ಬರ್, ಎಂದು ಅವರು ಪೋಸ್ಟ್‌ನಲ್ಲಿ ಬರೆದಿದ್ದಾರೆ. ಇದನ್ನೂ ಓದಿ: ಕೆಮ್ಮಿನ ಸಿರಪ್ ಸೇವಿಸಿ 11 ಮಕ್ಕಳು ಸಾವು ಕೇಸ್ – ಸಿರಪ್‌ಗಳನ್ನು ಶಿಫಾರಸು ಮಾಡ್ತಿದ್ದ ವೈದ್ಯ ಅರೆಸ್ಟ್
ಕಳೆದ ಏಪ್ರಿಲ್ 22ರಂದು ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತಿಕ್ರಿಯೆಯಾಗಿ ಭಾರತ ಮೇ 7ರಂದು ಆಪರೇಷನ್ ಸಿಂಧೂರ ಕಾರ್ಯಾಚರಣೆ ಆರಂಭಿಸಿತು. ಪಾಕ್ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಉಗ್ರರ 9 ಅಡಗು ತಾಣಗಳನ್ನು ಹೊಡೆದುರುಳಿಸಿದ್ದಲ್ಲೇ 100ಕ್ಕೂ ಹೆಚ್ಚು ಭಯೋತ್ಪಾದಕರನ್ನು ಕೊಂದಿತ್ತು. ಇದಾದ ನಂತರ, ಪಾಕಿಸ್ತಾನವು ಪುರಾವೆಗಳಿಲ್ಲದೆ ಪದೇ ಪದೇ ತಾನೇ ವಿಜಯ ಸಾಧಿಸಿರುವುದಾಗಿ ಹೇಳಿಕೊಂಡು ತಿರುಗಾಡುತ್ತಿತ್ತು. ಇದಕ್ಕೆ ಇತ್ತೀಚೆಗೆ ವಾಯುಪಡೆಯ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ಎಪಿ ಸಿಂಗ್ ಮತ್ತೊಮ್ಮೆ ನಿಖರ ಸಾಕ್ಷ್ಯ ನೀಡಿದ್ದರು. ಆಪರೇಷನ್ ಸಿಂಧೂರ ಕಾರ್ಯಾಚರಣೆ ವೇಳೆ ಪಾಕಿಸ್ತಾನದ (Pakistan) ಎಫ್-16 ಮತ್ತು ಜೆಎಫ್-17 ಯುದ್ಧ ವಿಮಾನಗಳನ್ನು ನಾಶ ಮಾಡಲಾಗಿದೆ ಎಂದು ವಾಯುಪಡೆಯ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ಎಪಿ ಸಿಂಗ್ (AP Singh) ಹೇಳಿದ್ದರು.
ಪಹಲ್ಗಾಮ್ ದಾಳಿಗೆ (Pahalgam Attack) ಪ್ರತಿಯಾಗಿ ಭಾರತ ನಡೆಸಿದ ಕಾರ್ಯಾಚರಣೆಯ ಬಳಿಕ ಮೊದಲ ಬಾರಿಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, F-16 ಮತ್ತು JF-17 ವರ್ಗದ ನಡುವಿನ 5 ಪಾಕಿಸ್ತಾನಿ ಹೈಟೆಕ್ ಯುದ್ಧವಿಮಾನಗಳನ್ನು ಹೊಡೆದು ಹಾಕಿದ್ದೇವೆ ಎಂದಿದ್ದಾರೆ. ಇದನ್ನೂ ಓದಿ: ಮಹಾರಾಷ್ಟ್ರದ ಶಿರೋಡಾ ಬೀಚ್‍ನಲ್ಲಿ ಅಲೆಯಬ್ಬರಕ್ಕೆ ಒಂದೇ ಕುಟುಂಬದ 7 ಮಂದಿ ಬಲಿ