ದಾವಣಗೆರೆ | ಜಾತಿಗಣತಿ ಸಮೀಕ್ಷೆಗೆ ತೆರಳಿದ್ದ ಶಿಕ್ಷಕನಿಗೆ ಹೃದಯಾಘಾತ

Public TV
0 Min Read

ದಾವಣಗೆರೆ: ಜಾತಿ ಸಮೀಕ್ಷೆಗೆ ತೆರಳಿದ್ದ ವೇಳೆ ಶಿಕ್ಷಕನಿಗೆ ಹೃದಯಾಘಾತ ಆಗಿರುವ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ.

ದಾವಣಗೆರೆ ತಾಲ್ಲೂಕಿನ ಹಳೆಕಡ್ಲೆಬಾಳು ಶಾಲೆಯ ಶಿಕ್ಷಕ ಪ್ರಕಾಶ್ ನಾಯಕ್ (44) ಅವರು ಸಮೀಕ್ಷೆ ಮಾಡುತ್ತಿದ್ದಾಗಲೇ ಹೃದಯಾಘಾತ ಸಂಭವಿಸಿದೆ.

ತಕ್ಷಣ ಸ್ಥಳೀಯರ ಸಹಾಯದಿಂದ ಅವರನ್ನ ನಗರದ ಹೈಟೆಕ್‌ ಆಸ್ಪತ್ರೆಗೆ ರವಾನೆ ಮಾಡಲಾಗಿತ್ತು. ಬಳಿಕ ಸ್ಟೆಂಟ್ ಹಾಕಿ ವೈದ್ಯರು ಶಸ್ತ್ರಚಿಕಿತ್ಸೆ ಮಾಡಿದ್ದಾರೆ.

ಸ್ಥಳೀಯರ ಸಮಯಪ್ರಜ್ಞೆಯಿಂದ ಪ್ರಾಣಾಪಾಯದಿಂದ ಶಿಕ್ಷಕ ಪ್ರಕಾಶ್ ನಾಯಕ್ ಪಾರಾಗಿದ್ದಾರೆ. ಘಟನೆ ತಿಳಿದ ದಾವಣಗೆರೆ ಡಿಸಿ ಗಂಗಾಧರ ಸ್ವಾಮಿ ದೂರವಾಣಿ ಕರೆ ಮಾಡಿ ಪ್ರಕಾಶ್ ನಾಯಕ್‌ಗೆ ಧೈರ್ಯ ತುಂಬಿದ್ದಾರೆ.

Share This Article