ಬಾಡಿಗೆ ಪಡೆದು ಕಾರು ವಂಚನೆ – 46 ಕಾರು ವಶಕ್ಕೆ, ಆರೋಪಿ ಪರಾರಿ

Public TV
1 Min Read

– 700ಕ್ಕೂ ಹೆಚ್ಚು ಕಾರುಗಳನ್ನು ಮಾರಾಟ ಮಾಡಿರುವ ಶಂಕೆ

ಬಳ್ಳಾರಿ: ನೂರಾರು ಕಾರುಗಳನ್ನು ಬಾಡಿಗೆ (Car Rental Fraud) ಪಡೆದು ಸಿನಿಮೀಯ ರೀತಿಯಲ್ಲಿ ವಂಚನೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಿಂಚಿನ ಕಾರ್ಯಾಚರಣೆ ನಡೆಸಿದ ಬಳ್ಳಾರಿ ಪೊಲೀಸರು (Ballari Police) ಬರೋಬ್ಬರಿ 46 ಕಾರುಗಳನ್ನು ವಶಕ್ಕೆ ಪಡೆದಿದ್ದಾರೆ.

ರಾಯಚೂರು ಜಿಲ್ಲೆಯ ಸಿಂಧನೂರು ಮೂಲದ ಜಾಹೀದ್‌ ಅಲಿಯಾಸ್ ಸೋನು ವಂಚನೆ ಮಾಡಿದ್ದು ಈಗ ಈತನ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಇದನ್ನೂ ಓದಿ: ಡೈರಿಯಲ್ಲಿ ಅವ್ಯವಹಾರ ಆರೋಪ –  ಅಧ್ಯಕ್ಷೆ, ಕಾರ್ಯದರ್ಶಿ ಮನೆ ಮುಂದೆ ಹಾಲು ಸುರಿದು ಗ್ರಾಮಸ್ಥರ ಪ್ರತಿಭಟನೆ

ವಂಚನೆ ಎಸಗಿದ ಸಿಂಧನೂರು ಮೂಲದ ಜಾಹೀದ್‌
ವಂಚನೆ ಎಸಗಿದ ಸಿಂಧನೂರು ಮೂಲದ ಜಾಹೀದ್‌

ತಿಂಗಳಿಗೆ 50-60 ಸಾವಿರ ರೂ. ಬಾಡಿಗೆ ನೀಡುವುದಾಗಿದ್ದ ಹೇಳಿ ಜಾಹಿದ್‌ ಕಾರುಗಳನ್ನು ಬಾಡಿಗೆ ಪಡೆದು ಹಲವೆಡೆ ಮಾರಾಟ ಮಾಡಿದ್ದ. ಆ ಬಳಿಕ ಬ್ರಾಂಡೆಡ್ ಕಾರುಗಳನ್ನು 4-10 ಲಕ್ಷದವರೆಗೂ ಮಾರಾಟ ಮಾಡಿ ಬಂದ ಹಣದಲ್ಲಿ ಮಜಾ ಮಾಡುತ್ತಿದ್ದ. ಇದನ್ನೂ ಓದಿ:  ಯಾವುದೇ ಪಶ್ಚಾತ್ತಾಪವಿಲ್ಲ, ಕ್ಷಮೆ ಕೇಳಲ್ಲ, ಶೂ ಎಸೆಯಲು ದೇವರೇ ಪ್ರಚೋದಿಸಿದ್ದಾನೆ: ವಕೀಲ ರಾಕೇಶ್‌ ಕಿಶೋರ್‌

ಆರಂಭದಲ್ಲಿ ಕಾರುಗಳ ಮಾಲೀಕರಿಗೆ ಒಂದು ತಿಂಗಳು ಬಾಡಿಗೆ ಕೊಟ್ಟು ನಂತರ ಜಾಹೀದ್‌ ಫೋನ್ ಸ್ವಿಚ್ ಆಫ್‌ ಮಾಡಿಕೊಂಡಿದ್ದ. ಜಿಪಿಎಸ್ ಟ್ರ್ಯಾಕ್ ಮಾಡಿದಾಗ ಕಾರು ಮಾರಾಟ ಮಾಡಿದ್ದು ಬೆಳಕಿಗೆ ಬಂದಿತ್ತು. ಘಟನೆಗೆ ಸಂಬಂಧಿಸಿದಂತೆ ಬಳ್ಳಾರಿಯ ಹಲವು ಪೊಲೀಸ್ ಠಾಣೆಗಳಲ್ಲಿ ಕೇಸ್ ದಾಖಲಾಗಿತ್ತು. ತನಿಖೆಗೆ ಇಳಿದಾಗ ಜಹೀದ್ 107 ಕಾರುಗಳ ಮಾಲೀಕರಿಗೆ ವಂಚನೆ ಮಾಡಿದ್ದು ಬೆಳಕಿಗೆ ಬಂದಿತ್ತು.

ತನಿಖೆ ಚುರುಕುಗೊಳಿಸಿ ಕಾರುಗಳನ್ನು ಪತ್ತೆ ಮಾಡಿರುವ ಪೊಲೀಸರು ಮಾಲೀಕರಿಗೆ ಕಾರುಗಳನ್ನು ಹಿಂತಿರುಗಿಸಿದ್ದಾರೆ. ಆರೋಪಿ ಜಹೀದ್ 700ಕ್ಕೂ ಹೆಚ್ಚು ಕಾರುಗಳನ್ನ ಬಾಡಿಗೆ ಪಡೆದು ಮಾರಾಟ ಮಾಡಿರುವ ಶಂಕೆ ಇದೆ.

Share This Article