ರಾಯಚೂರಿನಲ್ಲಿ ನಿಲ್ಲದ ಮನೆಗಳ್ಳರ ಹಾವಳಿ – ಸಿಸಿಟಿವಿಯಲ್ಲಿ ಕಳ್ಳರ ಚಲನವಲನ ಕಂಡು ನಿವಾಸಿಗಳು ಶಾಕ್‌

Public TV
1 Min Read

ರಾಯಚೂರು: ಬಿಸಿಲನಾಡು ರಾಯಚೂರು (Raichuru) ಜಿಲ್ಲೆಯಲ್ಲಿ ಕಳ್ಳರ ಹಾವಳಿ ಹೆಚ್ಚಾಗಿದೆ. ಬೇರೆ ಬೇರೆ ಗ್ಯಾಂಗ್‌ಗಳು ಆಕ್ಟಿವ್ ಆಗಿದ್ದು, ಸಿಸಿಟಿವಿಯಲ್ಲಿ ಕಳ್ಳರ ಚಲನವಲನ ಕಂಡು ಜನರು ಬೆಚ್ಚಿಬಿದ್ದಿದ್ದಾರೆ.

ಕಳ್ಳತನ ಪ್ರಕರಣಗಳನ್ನು ತಡೆಗಟ್ಟಲು ಮನೆಗಳಿಗೆ ಸಿಸಿಟಿವಿ ಕ್ಯಾಮರಾ ಅಳವಡಿಸಿಕೊಳ್ಳಿ ಎಂದು ಪೊಲೀಸರು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುತ್ತಲೇ ಇದ್ದಾರೆ. ಸಿಸಿಟಿವಿ ಕ್ಯಾಮರಾಗಳಲ್ಲಿ ಕಳ್ಳರ ಚಲನವಲನಗಳು ಸೆರೆಯಾಗುತ್ತಿವೆ ಹೊರತು ಕಳ್ಳತನ ಪ್ರಕರಣಗಳು ಕಡಿಮೆಯಾಗಿಲ್ಲ. ಬೇರೆ ಬೇರೆ ಗ್ಯಾಂಗ್‌ಗಳು ನಗರ ಹಾಗೂ ಜಿಲ್ಲೆಯ ವಿವಿಧೆಡೆ ಆಕ್ಟಿವ್ ಆಗಿದ್ದು, ಕಳ್ಳತನಕ್ಕೆ ಯತ್ನಿಸುವ ದೃಶ್ಯಗಳು ಜನರನ್ನು ಭಯಭೀತರನ್ನಾಗಿಸಿವೆ.ಇದನ್ನೂ ಓದಿ: ಕುರುಬರನ್ನು ಎಸ್‌ಟಿಗೆ ಸೇರಿಸಿದರೆ ST ಮೀಸಲಾತಿ ಪ್ರಮಾಣ ಹೆಚ್ಚಾಗಬೇಕು: ಸಿದ್ದರಾಮಯ್ಯ

ಕೆಲವೆಡೆ ಕಳ್ಳರ ಗ್ಯಾಂಗ್ ಮುಖಕ್ಕೆ ಮಾಸ್ಕ್ ಹಾಕಿಕೊಂಡು ಓಡಾಡುತ್ತಿದ್ರೆ, ಇನ್ನೂ ಕೆಲವೆಡೆ ರಾಜಾರೋಷವಾಗಿ ಓಡಾಡಿಕೊಂಡು ಮನೆಗಳ್ಳತನ ಮಾಡುತ್ತಿದ್ದಾರೆ. ಬೆಳಗಿನ ಜಾವದಲ್ಲಿ ಕಳ್ಳರು ಓಡಾಡುವ ದೃಶ್ಯಗಳು ಸಿಸಿಟಿವಿ ಕ್ಯಾಮರಾಗಳಲ್ಲಿ ಸೆರೆಯಾಗುತ್ತಿದ್ದು, ಸಾರ್ವಜನಿಕರು ಪೊಲೀಸರಿಗೆ ರಕ್ಷಣೆಗಾಗಿ ಒತ್ತಾಯಿಸಿದ್ದಾರೆ. ರಾತ್ರಿ, ಬೆಳಗಿನ ಜಾವದಲ್ಲಿ ಹೆಚ್ಚು ಬೀಟ್ ಹಾಕುವಂತೆ ಮನವಿ ಮಾಡಿದ್ದಾರೆ. ರೈಲು ನಿಲ್ದಾಣ, ರೈಲು ಹಳಿ ಅಕ್ಕಪಕ್ಕದ ಮನೆಗಳನ್ನ ಕಳ್ಳರು ಟಾರ್ಗೆಟ್ ಮಾಡುತ್ತಿದ್ದು, ಪೊಲೀಸರು ಕಟ್ಟುನಿಟ್ಟಿನ ಕ್ರಮಕೈಗೊಳ್ಳಬೇಕು ಅಂತ ಆಗ್ರಹಿಸಿದ್ದಾರೆ.

ರಾಯಚೂರು ನಗರ ಸೇರಿದಂತೆ ಹಲವೆಡೆ ನಡೆಯುತ್ತಿರುವ ಕಳ್ಳತನ ಪ್ರಕರಣಗಳಲ್ಲಿ ಬಹುತೇಕ ಪ್ರಕರಣಗಳ ಕಳ್ಳರು ಪತ್ತೆಯಾಗಿಲ್ಲ. ಪಕ್ಕದ ಆಂಧ್ರಪ್ರದೇಶ, ತೆಲಂಗಾಣದಿಂದಲೂ ಕಳ್ಳರ ಕಾಟ ಹೆಚ್ಚಾಗಿರುವುದರಿಂದ ಸಾರ್ವಜನಿಕರು ಬೆಚ್ಚಿಬಿದ್ದಿದ್ದಾರೆ.ಇದನ್ನೂ ಓದಿ: ಕೆಮ್ಮಿನ ಸಿರಪ್‌ ಸೇವಿಸಿ ಮಕ್ಕಳ ಸಾವು ಪ್ರಕರಣ – ಸುಪ್ರೀಂಕೋರ್ಟ್‌ಗೆ ಪಿಐಎಲ್

Share This Article