ಜೈಪುರ: ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು (LPG cylinders) ತುಂಬಿದ್ದ ಟ್ರಕ್‌ಗೆ (Truck), ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಭಾರೀ ಸ್ಫೋಟ ಸಂಭವಿಸಿರುವ ಘಟನೆ ಜೈಪುರ-ಅಜ್ಮೀರ್ ಹೆದ್ದಾರಿಯಲ್ಲಿ (Jaipur-Ajmer highway) ಸಂಭವಿಸಿದೆ. ಸ್ಫೋಟದ ತೀವ್ರತೆಗೆ ಏಳು ವಾಹನಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ.
ಚಾಲಕ ರಸ್ತೆಬದಿಯಲ್ಲಿ ಟ್ರಕ್ ಅನ್ನು ನಿಲ್ಲಿಸಿ, ಊಟಕ್ಕೆಂದು ಹೋಟೆಲ್ ಹೋಗಿದ್ದ. ಈ ವೇಳೆ ಟ್ಯಾಂಕರೊಂದು (Tanker) ತಿರುವು ಪಡೆಯುತ್ತಿದ್ದಾಗ ನಿಯಂತ್ರಣ ತಪ್ಪಿ ಸಿಲಿಂಡರ್ ತುಂಬಿದ್ದ ಟ್ರಕ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಇದನ್ನೂ ಓದಿ: ಫಿಲ್ಮಿ ಸ್ಟೈಲ್ ಗಂಗಾವತಿಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನ ಕೊಲೆ
ಡಿಕ್ಕಿ ಹೊಡೆದ ರಭಸಕ್ಕೆ ಬೆಂಕಿ ಹೊತ್ತಿಕೊಂಡು, ನಂತರ ಗ್ಯಾಸ್ ಸಿಲಿಂಡರ್‌ಗಳು ಒಂದರ ನಂತರ ಒಂದರಂತೆ ಸರಣಿ ಸ್ಫೋಟಗೊಂಡಿದೆ. ಸ್ಫೋಟದ ಸದ್ದು ಕಿಲೋಮೀಟರ್ ಉದ್ದಕ್ಕೂ ಕೇಳಿಸಿದ್ದು, ಬೆಂಕಿಯ ಜ್ವಾಲೆಯು ಹತ್ತು ಕಿ.ಮೀ ದೂರಕ್ಕೂ ಕಾಣಿಸಿದೆ ಎನ್ನಲಾಗಿದೆ.
ಘಟನೆಯಲ್ಲಿ ಮೂವರಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಕೂಡಲೇ ಅಗ್ನಿಶಾಮಕ ದಳ ಧಾವಿಸಿ, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಯಿತು.