ತುಮಕೂರು: ಬಿಹಾರ ಎಲೆಕ್ಷನ್‌ವರೆಗೂ (Bihar Election) ಸುಮ್ಮನೆ ಇದ್ದು ಬಿಡಿ, ಬಿಹಾರ ಎಲೆಕ್ಷನ್ ಕಳೆದು ಹೋಗಲಿ ಎಂದು ಮಾಜಿ ಸಚಿವ ಕೆಎನ್ ರಾಜಣ್ಣ (KN Rajanna) ಮಾರ್ಮಿಕವಾಗಿ ನುಡಿದಿದ್ದಾರೆ.
ತುಮಕೂರಿನಲ್ಲಿ (Tumakuru) ಮಾಧ್ಯಮದವರು, ಮತ್ತೆ ನೀವು ಸಚಿವರಾಗುತ್ತೀರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಬಿಹಾರ ಚುನಾವಣೆವರೆಗೂ ಕಾದು ನೋಡಿ ಎಂದಷ್ಟೇ ಹೇಳಿದ್ದಾರೆ. ಕೆಎನ್ ರಾಜಣ್ಣರ ಈ ಮಾತಿನ ಮರ್ಮ ಹಲವು ಚರ್ಚೆಗೆ ಗ್ರಾಸವಾಗಿದೆ. ಇದನ್ನೂ ಓದಿ: ಭಾರತಕ್ಕೆ ಆಗಮಿಸಿದ ತಾಲಿಬಾನ್ ವಿದೇಶಾಂಗ ಸಚಿವ
ಅಲ್ಲದೇ ಸಿಎಂ ಸಿದ್ದರಾಮಯ್ಯರ (Siddaramaiah) ಬಗ್ಗೆ ನನಗೆ ವಿಶ್ವಾಸ ಇದೆ ಎಂದೂ ಮತ್ತೆ ಮಂತ್ರಿಗಿರಿ ಸಿಗಬಹುದು ಅನ್ನೋದನ್ನೂ ಪರೋಕ್ಷವಾಗಿ ಹೇಳಿದ್ದಾರೆ. ಮಂತ್ರಿ ಸ್ಥಾನ ಕೊಡಿ ಎಂದು ನಾನು ಕೇಳಿರಲಿಲ್ಲ. 2018 ರಲ್ಲಿ ನಾನು ಸೋತಾಗ ಸಿಎಂ ಸಿದ್ದರಾಮಯ್ಯ ಹೇಳಿದ್ರು ನೀನು ಗೆದ್ದರೆ ಮಿನಿಸ್ಟರ್ ಆಗ್ತಿದ್ದೆ ಕಣಯ್ಯಾ, ನಿನ್ನ ಬದಲು ತುಕಾರಂನನ್ನು ಮಾಡಿದೆ ಎಂದು ಹೇಳಿದರು. ಈ ಬಾರಿ ಅವರೇ ಕರೆದು ಸಚಿವ ಸ್ಥಾನ ಕೊಟ್ಟರು ಎಂದರು. ಇದನ್ನೂ ಓದಿ: ಕೆಮ್ಮಿನ ಸಿರಪ್ ಸೇವಿಸಿ 20ಕ್ಕೂ ಹೆಚ್ಚು ಮಕ್ಕಳ ಸಾವು – ಫಾರ್ಮಾ ಕಂಪನಿ ಮಾಲೀಕ ಅರೆಸ್ಟ್
ಹೈಕಮಾಂಡ್‌ಗೆ ಸತ್ಯದ ಅರಿವಾಗಿದ್ಯಾ ಎಂಬ ಪ್ರಶ್ನೆಗೂ ಉತ್ತರಿಸಿದ ರಾಜಣ್ಣ, ಎಲ್ಲವೂ ಬಿಹಾರ ಎಲೆಕ್ಷನ್ ಕಳೆದ ಮೇಲೆಯೇ ಗೊತ್ತಾಗುತ್ತದೆ ಎಂದು ಹೇಳಿದರು. ಇದನ್ನೂ ಓದಿ: ಖಾಸಗಿ ವಸತಿ ಶಾಲೆಯಲ್ಲಿ ಅಗ್ನಿ ಅವಘಡ – ವಿದ್ಯಾರ್ಥಿ ಸಜೀವ ದಹನ