– ಮಹಿಳಾ ವಿಂಗ್ ಮುನ್ನಡೆಸಲಿರೋ ಮಸೂದ್ ಅಜರ್ ಸಹೋದರಿ
ಇಸ್ಲಾಮಾಬಾದ್: ಪಾಕಿಸ್ತಾನ ಮೂಲದ ಭಯೋತ್ಪಾದಕ ಗುಂಪು ಜೈಶ್-ಎ-ಮೊಹಮ್ಮದ್ (Jaish-e-Mohammed) ತನ್ನ ಮೊದಲ ಮಹಿಳಾ ವಿಭಾಗ ’ಜಮಾತ್-ಉಲ್-ಮೊಮಿನಾತ್’ ಅನ್ನು ಪ್ರಾರಂಭಿಸುವುದಾಗಿ ಘೋಷಿಸಿದೆ.
ಜೆಇಎಂ ಮುಖ್ಯಸ್ಥ ಮತ್ತು ಭಯೋತ್ಪಾದಕ ಮೌಲಾನಾ ಮಸೂದ್ ಅಜರ್ (Masood Azhar) ಹೆಸರಿನಲ್ಲಿ ನೀಡಲಾದ ಪತ್ರದ ಮೂಲಕ ಈ ನಡೆಯನ್ನು ಬಹಿರಂಗಪಡಿಸಲಾಗಿದೆ. ಹೊಸ ಘಟಕಕ್ಕೆ ನೇಮಕಾತಿ ಅ.8 ರಂದು ಪಾಕಿಸ್ತಾನದ ಬಹವಾಲ್ಪುರದ ಮರ್ಕಜ್ ಉಸ್ಮಾನ್-ಒ-ಅಲಿಯಲ್ಲಿ ಪ್ರಾರಂಭವಾಗಿದೆ. ಇದನ್ನೂ ಓದಿ: ಕತಾರ್ ಏರ್‌ವೇಸ್ ವಿಮಾನದಲ್ಲಿ ಸಸ್ಯಾಹಾರಿಗೆ ಮಾಂಸಾಹಾರ ನೀಡಿ ಯಡವಟ್ಟು – ಉಸಿರುಗಟ್ಟಿ ಪ್ರಯಾಣಿಕ ಸಾವು
ಜೆಇಎಂನ ಪ್ರಚಾರ ಸಂಸ್ಥೆ ಅಲ್-ಕಲಾಮ್ ಮೀಡಿಯಾ ಹಂಚಿಕೊಂಡ ಪತ್ರದ ಪ್ರಕಾರ, ಜಮಾತ್-ಉಲ್-ಮೊಮಿನಾತ್ ಸಂಘಟನೆಯ ಮಹಿಳಾ ಬ್ರಿಗೇಡ್ ಆಗಿ ಕಾರ್ಯನಿರ್ವಹಿಸಲಿದೆ.
ಮೇ 7 ರಂದು ಭಾರತೀಯ ಪಡೆಗಳು ಜೆಇಎಂನ ಮರ್ಕಜ್ ಸುಭಾನಲ್ಲಾ ನೆಲೆಯನ್ನು ಗುರಿಯಾಗಿಸಿಕೊಂಡು ನಡೆಸಿದ ಕಾರ್ಯಾಚರಣೆಯಲ್ಲಿ ಮಸೂದ್ ಅಜರ್‌ನ ಸಹೋದರಿಯ ಪತಿ ಯೂಸುಫ್ ಹಜರ್ ಹತ್ಯೆಯಾಗಿದ್ದ. ಹೀಗಾಗಿ, ಮಸೂದ್ ಅಜರ್‌ನ ಸಹೋದರಿ ಈ ವಿಭಾಗವನ್ನು ಮುನ್ನಡೆಸಲಿದ್ದಾರೆ. ಇದನ್ನೂ ಓದಿ: ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಘರ್ಷಣೆ; 11 ಪಾಕಿಸ್ತಾನಿ ಸೈನಿಕರು, ಟಿಟಿಪಿಯ 19 ಉಗ್ರರು ಸಾವು
ಬಹಾವಲ್ಪುರ್, ಕರಾಚಿ, ಮುಜಫರಾಬಾದ್, ಕೋಟ್ಲಿ, ಹರಿಪುರ್ ಮತ್ತು ಮನ್ಸೆಹ್ರಾದಲ್ಲಿರುವ ಜೆಇಎಂ ಕೇಂದ್ರಗಳಲ್ಲಿ ಅಧ್ಯಯನ ಮಾಡುತ್ತಿರುವ ಜೆಇಎಂ ಕಮಾಂಡರ್‌ಗಳ ಪತ್ನಿಯರು ಮತ್ತು ಆರ್ಥಿಕವಾಗಿ ದುರ್ಬಲ ಮಹಿಳೆಯರನ್ನು ನೇಮಕಾತಿಗೆ ಪರಿಗಣಿಸಲಾಗುತ್ತದೆ.
ಭಾರತೀಯ ಸೇನೆಯು ಆಪರೇಷನ್ ಸಿಂಧೂರ ಸಮಯದಲ್ಲಿ ದಕ್ಷಿಣ ಪಂಜಾಬ್‌ನ ಬಹಾವಲ್ಪುರದಲ್ಲಿರುವ ಜೆಇಎಂ ಪ್ರಧಾನ ಕಚೇರಿಯನ್ನು ಗುರಿಯಾಗಿಸಿಕೊಂಡಿತ್ತು. ದಾಳಿಯ ನಂತರ, ಜೆಇಎಂ ಕಮಾಂಡರ್ ಇಲ್ಯಾಸ್ ಕಾಶ್ಮೀರಿ ಕಳೆದ ತಿಂಗಳು ಬಿಡುಗಡೆ ಮಾಡಿದ ವೀಡಿಯೊದಲ್ಲಿ ಮಸೂದ್ ಅಜರ್ ಕುಟುಂಬದ ಹಲವಾರು ಸದಸ್ಯರು ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಹೇಳಿಕೊಂಡಿದ್ದ.