ಬೆಂಗಳೂರು: ಸಚಿವ ಸಂಪುಟದಲ್ಲಿ (Cabinet) ಬದಲಾವಣೆ ವಿಚಾರವಾಗಿ ನನಗೆ ಯಾವುದೇ ಮಾಹಿತಿ ಇಲ್ಲ. ಇದು ಪಕ್ಷ ಹಾಗೂ ಮುಖ್ಯಮಂತ್ರಿಗಳಿಗೆ ಬಿಟ್ಟ ವಿಚಾರ. ಅವರು ಈ ಬಗ್ಗೆ ತೀರ್ಮಾನ ಮಾಡುತ್ತಾರೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ (DK Shivakumar) ಹೇಳಿದರು.
ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ವಿಚಾರದಲ್ಲಿ ನಾನು ಮಾತನಾಡುವುದಿಲ್ಲ. ನನ್ನ ಜೊತೆ ಈ ವಿಚಾರ ಚರ್ಚೆ ಮಾಡಿದರೆ ನಾನು ನನ್ನ ಸಲಹೆ ನೀಡುತ್ತೇನೆ. ಈ ವಿಚಾರವಾಗಿ ಅನಗತ್ಯ ಚರ್ಚೆ ಮಾಡಿ ಗೊಂದಲ ಸೃಷ್ಟಿಸಬೇಡಿ ಎಂದು ನಿಮ್ಮಲ್ಲಿ ಮನವಿ ಮಾಡುತ್ತೇನೆ ಎಂದು ತಿಳಿಸಿದರು. ಇದನ್ನೂ ಓದಿ: ಭಯೋತ್ಪಾದಕ ಗುಂಪು ಜೆಇಎಂ ಮಹಿಳಾ ವಿಭಾಗ ಆರಂಭ – ‘ಆಪರೇಷನ್ ಸಿಂಧೂರ’ದಲ್ಲಿ ಗಂಡನ ಕಳೆದುಕೊಂಡ ಮಹಿಳೆಗೆ ಚುಕ್ಕಾಣಿ
ಮುಖ್ಯಮಂತ್ರಿಗಳು ಔತಣಕೂಟ ಆಯೋಜಿಸಿರುವ ಬಗ್ಗೆ ಕೇಳಿದಾಗ, ಇದರಲ್ಲಿ ತಪ್ಪೇನಿದೆ? ಒಟ್ಟಿಗೆ ಸೇರಿ ಊಟ ಮಾಡಿ, ಸಾಕಷ್ಟು ವಿಚಾರಗಳ ಬಗ್ಗೆ ಚರ್ಚೆ ಮಾಡುವುದು ಸಹಜ ಎಂದರು. ಇದನ್ನೂ ಓದಿ: ವೀರೇಂದ್ರ ಪಪ್ಪಿ ವಿರುದ್ಧದ ಅಕ್ರಮ ಆನ್‌ಲೈನ್ ಬೆಟ್ಟಿಂಗ್ ಕೇಸ್ – ಚಳ್ಳಕೆರೆಯ ಹಲವೆಡೆ ಇಡಿ ದಾಳಿ
ಬಿಗ್ ಬಾಸ್ ವಿಚಾರವಾಗಿ ಪ್ರತಿಕ್ರಿಯಿಸಿ, ಬುಧವಾರ ರಾತ್ರಿ ಡಿಸಿಗೆ ಕರೆ ಮಾಡಿ ಜಾಲಿವುಡ್ ಸ್ಟುಡಿಯೋದವರು ತಮ್ಮ ತಪ್ಪನ್ನು ಸರಿಪಡಿಸಿಕೊಳ್ಳಲು ಒಂದು ಅವಕಾಶ ಕಲ್ಪಿಸಿ ಎಂದು ಸೂಚಿಸಿದ್ದೇನೆ. ನಮ್ಮ ಉದ್ಯಮ ಬೆಳೆಯಬೇಕು. ಇದು ಹೆಚ್ಚಿನ ಮಾಲಿನ್ಯ ಉಂಟು ಮಾಡಲು ದೊಡ್ಡ ಕಾರ್ಖಾನೆಯಲ್ಲ. ಸಣ್ಣಪುಟ್ಟ ನಿಯಮ ಉಲ್ಲಂಘನೆಯಾಗಿದ್ದರೆ ಸರಿಪಡಿಸಿಕೊಳ್ಳಿ. ಮಾಲಿನ್ಯ ನಿಯಂತ್ರಣ ಮಂಡಳಿ ನಿಯಮಾವಳಿಯನ್ನು ಪಾಲನೆ ಮಾಡಿ ಎಂದು ಸ್ಟುಡಿಯೋದವರಿಗೂ ಹೇಳಿ ಕಳುಹಿಸಿದ್ದೇನೆ ಎಂದು ಹೇಳಿದರು. ಇದನ್ನೂ ಓದಿ: ಮೈಸೂರಲ್ಲಿ 10 ವರ್ಷದ ಬಾಲಕಿ ಮೇಲೆ ರೇಪ್ & ಮರ್ಡರ್; ಆರೋಪಿ ಗುರುತು ಪತ್ತೆ