Fraud Case | ನೋಟು ಅಮಾನ್ಯೀಕರಣದಿಂದಾಗಿ ಸಾಲ ಪಾವತಿಸಲು ಆಗಿರಲಿಲ್ಲ: ಶಿಲ್ಪಾ ಶೆಟ್ಟಿ ಪತಿ

Public TV
2 Min Read

– 60 ಕೋಟಿ ವಂಚನೆ ಪ್ರಕರಣ ಎದುರಿಸುತ್ತಿರುವ ಶಿಲ್ಪಾ ಶೆಟ್ಟಿ ದಂಪತಿ

ನೋಟು ಅಮಾನ್ಯೀಕರಣದಿಂದಾಗಿ (Demonetisation) ತಮ್ಮ ವ್ಯವಹಾರವು ಭಾರೀ ನಷ್ಟ ಅನುಭವಿಸಿದೆ. ಅಮಾನ್ಯೀಕರಣದಿಂದಾಗಿಯೇ ಸಾಲ ಪಾವತಿಸಲು ಆಗಿರಲಿಲ್ಲ ಎಂದು ಅಂತ 60 ಕೋಟಿ ವಂಚನೆ ಪ್ರಕರಣದಲ್ಲಿ ತನಿಖೆ ಎದುರಿಸ್ತಿರುವ ಶಿಲ್ಪಾ ಶೆಟ್ಟಿ (Shilpa Shetty) ಪತಿ ರಾಜ್‌ಕುಂದ್ರಾ (Raj Kundra) ಹೇಳಿದ್ದಾರೆ.

ತಮ್ಮ ಕಂಪನಿಯು ವಿದ್ಯುತ್ ಮತ್ತು ಗೃಹೋಪಯೋಗಿ ಉಪಕರಣಗಳಲ್ಲಿ ವ್ಯಾಪಾರ ಮಾಡುತ್ತಿತ್ತು. 2016ರಲ್ಲಿ ಕೇಂದ್ರ ಸರ್ಕಾರ ಜಾರಿಗೆ ತಂದ ನೋಟು ರದ್ದತಿಯ ನಂತರ ಕಂಪನಿಯು ಬಹಳಷ್ಟು ನಷ್ಟ ಎದುರಿಸಿದೆ. ಕಂಪನಿ ಪಡೆದ ಸಾಲವನ್ನ ಮರುಪಾವತಿಸಲು ಸಾಧ್ಯವಾಗಿಲ್ಲ ಅಂದಿದ್ದಾರೆ. ಇದನ್ನೂ ಓದಿ: ಮೊದಲು 60 ಕೋಟಿ ಠೇವಣಿ ಇಡಿ – ಶಿಲ್ಪಾ ಶೆಟ್ಟಿ ದಂಪತಿ ವಿದೇಶಿ ಪ್ರವಾಸಕ್ಕೆ ಬಾಂಬೆ ಹೈಕೋರ್ಟ್ ತಡೆ

Shilpa Shetty and Raj Kundra

ಸಾಲ ಮತ್ತು ಹೂಡಿಕೆ ಒಪ್ಪಂದದಲ್ಲಿ ಉದ್ಯಮಿ ದೀಪಕ್ ಕೊಠಾರಿ ಅನ್ನೋವ್ರಿಗೆ 60 ಕೋಟಿ ರೂ. ವಂಚಿಸಿರುವ ಕೇಸಲ್ಲಿ ಈಗಾಗಲೇ 2 ಬಾರಿ ವಿಚಾರಣೆಗೆ ಒಳಪಡಿಸಲಾಗಿದ್ದು, ಮತ್ತೆ ಸಮನ್ಸ್ ಜಾರಿ ಮಾಡುವ ಸಾಧ್ಯತೆ ಇದೆ. ಅಂದಹಾಗೆ, ಪತಿ ಕಂಪನಿಯ ಯಾವ ವ್ಯವಹಾರವನ್ನೂ ನಾನು ನೋಡಿಕೊಳ್ಳುತ್ತಿರಲಿಲ್ಲ ಎಂದು ಶಿಲ್ಪಾ ಶೆಟ್ಟಿ ವಿಚಾರಣೆಯಲ್ಲಿ ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ಕಾಂತಾರ ಚಾಪ್ಟರ್‌ 1 ಸಕ್ಸಸ್‌ ಬೆನ್ನಲ್ಲೇ ಕಟೀಲು ಅಮ್ಮನ ದರ್ಶನ ಪಡೆದ ವಿಜಯ್‌ ಕಿರಗಂದೂರು

ಮೊದಲು 60 ಕೋಟಿ ಠೇವಣಿ ಇಡಿ ಅಂದಿದ್ದ ಕೋರ್ಟ್‌
60 ಕೋಟಿ ವಂಚನೆ ಪ್ರಕರಣದಲ್ಲಿ ನಟಿ ಶಿಲ್ಪಾ ಶೆಟ್ಟಿ, ಪತಿ ರಾಜ್ ಕುಂದ್ರಾಗೆ ಭಾರಿ ಹಿನ್ನಡೆಯಾಗಿತ್ತು. ಅಮೆರಿಕದ ಲಾಸ್ ಏಂಜಲೀಸ್‌ ಸೇರಿದಂತೆ ಇತರ ದೇಶಗಳ ಪ್ರವಾಸಕ್ಕೆ ತೆರಳಲು ಮುಂದಾಗಿದ್ದ ಶಿಲ್ಪಾ ಶೆಟ್ಟಿ ದಂಪತಿಗೆ ಬಾಂಬೆ ಹೈಕೋರ್ಟ್‌ (Bombay High Court) ಇತ್ತೀಚೆಗೆ ತಡೆ ನೀಡಿದೆ.

Shilpa Shetty 1

ಕಾರ್ಯಕ್ರಮ ನಿಮಿತ್ತ ಲಾಸ್ ಎಂಜಲೀಸ್ (Los Angeles) ಮತ್ತು ಇತರ ದೇಶಗಳಿಗೆ ತೆರಳಬೇಕಿತ್ತು. ಹೀಗಾಗಿ ಬಾಂಬೆ ಹೈಕೋರ್ಟ್, ಲಾಸ್ ಏಂಜಲೀಸ್ ಮತ್ತು ಇತರ ವಿದೇಶಗಳಿಗೆ ಪ್ರಯಾಣಿಸಲು ಬಯಸಿದರೆ ಮೊದಲು 60 ಕೋಟಿ ರೂಪಾಯಿ ಡೆಪಾಸಿಟ್ ಇಡಿ ಎಂದು ಹೇಳಿತ್ತು. ಇದನ್ನೂ ಓದಿ: ದರ್ಶನ್‌ಗೆ ಜೈಲಲ್ಲಿ ಹಾಸಿಗೆ, ದಿಂಬು ನೀಡದ ವಿಚಾರ – ‘ಜೈಲು ಪರಿಶೀಲಿಸಿ ರಿಪೋರ್ಟ್‌ ಕೊಡಿ’: ಕಾನೂನು ಪ್ರಾಧಿಕಾರಕ್ಕೆ ಕೋರ್ಟ್ ಆದೇಶ

ಏನಿದು ವಂಚನೆ ಪ್ರಕರಣ?
2015 ರಿಂದ 2023ರ ನಡುವೆ, ದಂಪತಿ ತಮ್ಮ ವ್ಯವಹಾರ ವಿಸ್ತರಿಸುವ ನೆಪದಲ್ಲಿ ನನ್ನಿಂದ 60 ಕೋಟಿ ರೂ.ಗಳನ್ನು ಪಡೆದಿದ್ದಾರೆ. ಆದರೆ, ಅದನ್ನು ವೈಯಕ್ತಿಕ ವೆಚ್ಚಗಳಿಗೆ ಖರ್ಚು ಮಾಡಿದ್ದಾರೆ ಎಂದು ಉದ್ಯಮಿ ದೀಪಕ್ ಕೊಠಾರಿ ಆರೋಪಿಸಿದ್ದರು. ದಂಪತಿ ಹಣವನ್ನು ಸಾಲವಾಗಿ ಪಡೆದಿದ್ದಾರೆ ಎಂದು ಆರೋಪಿಸಿದ್ದಾರೆ.

Share This Article