Bengaluru| ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸರಣಿ ಅಪಘಾತ – 9 ವಾಹನಗಳಿಗೆ ಇವಿ ಬಸ್ ಡಿಕ್ಕಿ

Public TV
1 Min Read

ಬೆಂಗಳೂರು: ಇವಿ ಬಸ್ (EV Bus) ಚಾಲಕನ ನಿರ್ಲಕ್ಷ್ಯಕ್ಕೆ ಸರಣಿ ಅಪಘಾತ ಸಂಭವಿಸಿ, 9 ವಾಹನಗಳು ಜಖಂಗೊಂಡಿರುವ ಘಟನೆ ಬೆಂಗಳೂರಿನ (Bengaluru) ಚಿನ್ನಸ್ವಾಮಿ ಸ್ಟೇಡಿಯಂ (Chinnaswamy Stadium) ಮುಂಭಾಗ ನಡೆದಿದೆ.

ಬೆಳಗ್ಗೆ 11:30ರ ಸುಮಾರಿಗೆ ಸಿಗ್ನಲ್‌ನಲ್ಲಿ ವಾಹನಗಳು ನಿಂತಿದ್ದಾಗ ಏಕಾಏಕಿ ಬಸ್ ನುಗ್ಗಿದ ಪರಿಣಾಮ ಮುಂಭಾಗದಲ್ಲಿದ್ದ 4 ಕಾರು, 4 ಆಟೋ ಒಂದು ಬೈಕ್‌ಗೆ ಬಸ್ ಡಿಕ್ಕಿ ಹೊಡೆದಿದೆ. ಅಪಘಾತದ ಪರಿಣಾಮ ವಾಹನಗಳು ಸಂಪೂರ್ಣ ಜಖಂ ಆಗಿದ್ದು, ಅದೃಷ್ಟವಶಾತ್ ವಾಹನಗಳಲ್ಲಿದ್ದವರು ಪ್ರಾಣಪಾಯದಿಂದ ಪಾರಾಗಿದ್ದಾರೆ. ಇದನ್ನೂ ಓದಿ: ಪವರ್ ಶೇರಿಂಗ್, ಸಂಪುಟ ವಿಸ್ತರಣೆ ಬಗ್ಗೆ ಯಾರು ಮಾತಾಡಬಾರದು: ಸಂತೋಷ ಲಾಡ್

ಘಟನೆ ಸಂಬಂಧ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇವಿ ಬಸ್ ಚಾಲಕನನ್ನ ವಶಕ್ಕೆ ಪಡೆಯಲಾಗಿದೆ. ಘಟನೆ ಬಳಿಕ ಡ್ಯಾಮೇಜ್ ಆದ ವಾಹನ ಸವಾರರು ಬೇಸರ ವ್ಯಕ್ತಪಡಿಸಿದ್ದು, ಗುತ್ತಿಗೆ ಆಧಾರದಲ್ಲಿ ಯರ‍್ಯಾರನ್ನೋ ಚಾಲಕರಾಗಿ ತೆಗೆದುಕೊಂಡಿರುವ ಕಾರಣ ಹೀಗೆಲ್ಲ ಆಗುತ್ತಿದೆ, ಜನ ಹೇಗೆ ನಂಬಿಕೆ ಇಟ್ಟು ಬಸ್ ಹತ್ತೋದು? ನಮ್ಮ ನಷ್ಟಕ್ಕೆ ಹೊಣೆ ಯಾರೆಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಬಿಜೆಪಿಯವರಿಗೆ ಕಾಮನ್ ಸೆನ್ಸ್ ಇಲ್ಲ, ಒಂದು ರೂಪಾಯಿ ತರುವ ಯೋಗ್ಯತೆ ಇಲ್ಲ: ಪ್ರಿಯಾಂಕ್ ಖರ್ಗೆ ಕಿಡಿ

Share This Article