ಮಾಲವಿ ಜಲಾಶಯದ ಮಣ್ಣಿನ ಗೋಡೆ ಒಡೆದು ನೀರು ಪೋಲು- ಅಧಿಕಾರಿಗಳ ವಿರುದ್ದ ಆಕ್ರೋಶ

Public TV
1 Min Read

ಬಳ್ಳಾರಿ: ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ಮಾಲವಿ ಗ್ರಾಮದ ಹೊರಭಾಗದಲ್ಲಿರುವ ಮಾಲವಿ ಜಲಾಶಯದ (Malavi Dam) ಮಣ್ಣಿನ ಗೋಡೆ ಒಡೆದು ಅಪಾರ ಪ್ರಮಾಣದ ನೀರು ಪೋಲಾಗಿದ್ದು, ಅಧಿಕಾರಿಗಳ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

2.50 ಟಿಎಂಸಿ ನೀರು ಸಂಗ್ರಹ‌ ಸಾಮರ್ಥ್ಯ ಹೊಂದಿರುವ ಮಾಲವಿ ಜಲಾಶಯ, ಈ ಭಾರೀ ಉತ್ತಮ ಮಳೆಯಾಗಿದ್ದರಿಂದ ಭರ್ತಿಯಾಗಿದೆ. ಆದ್ರೆ ನೀರಾವರಿ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ರೈತರ (Farmers) ಕೃಷಿ ಚಟುವಟಿಕೆಗೆ ಬಳಕೆಯಾಗಬೇಕಿದ್ದ ಜಲಾಶಯದ ನೀರು ವ್ಯರ್ಥವಾಗಿ ಹರಿಯುತ್ತಿದೆ. ಇದನ್ನೂ ಓದಿ:  ದೇವದುರ್ಗ ಶಾಸಕಿ ಕರೆಮ್ಮ ನಾಯಕ್ ಕಾರು ಅಪಘಾತ

ಕ್ರಸ್ಟ್ ಗೇಟ್‌ ಸಮಸ್ಯೆಯಿಂದ ನೀರು ಪೋಲಾಗುತ್ತಿದೆ. ಪೋಲಾಗುತ್ತಿರುವ ನೀರು ಉಳಿಸಿಕೊಳ್ಳಲು ಆಗುತ್ತಿಲ್ಲ ಎಂದು ಅಧಿಕಾರಿಗಳ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನೀರಾವರಿ ಇಲಾಖೆ ಅಧಿಕಾರಿಗಳು ಕೂಡಲೇ ಎಚ್ಚೆತ್ತು ಒಡೆದಿರುವ ಮಣ್ಣಿನ ಗೋಡೆ ದುರಸ್ಥಿಗೊಳಿಸುವಂತೆ ಒತ್ತಾಯಿಸಿದ್ದಾರೆ‌.
Share This Article