ಭಾರತ-ಅಫ್ಘಾನಿಸ್ತಾನ ಜಂಟಿ ಹೇಳಿಕೆ ಸರಿಯಲ್ಲ; ಅಫ್ಘಾನ್‌ ರಾಯಭಾರಿಗೆ ಪಾಕಿಸ್ತಾನ ಸಮನ್ಸ್‌

Public TV
1 Min Read

ಇಸ್ಲಾಮಾಬಾದ್: ಭಾರತ ಭೇಟಿ ವೇಳೆ ನೀಡಿದ ಹೇಳಿಕೆಗೆ ಸಂಬಂಧಿಸಿದಂತೆ ಅಫ್ಘಾನಿಸ್ತಾನದ ರಾಯಭಾರಿಗೆ ಪಾಕಿಸ್ತಾನ (Pakistan) ಸಮನ್ಸ್‌ ನೀಡಿದೆ.

ಜಮ್ಮು ಮತ್ತು ಕಾಶ್ಮೀರದ ಬಗ್ಗೆ ಹೆಚ್ಚುವರಿ ವಿದೇಶಾಂಗ ಕಾರ್ಯದರ್ಶಿ (ಪಶ್ಚಿಮ ಏಷ್ಯಾ ಮತ್ತು ಅಫ್ಘಾನಿಸ್ತಾನ) ಅಫ್ಘಾನ್ ರಾಯಭಾರಿ ಹೇಳಿಕೆಗಳಿಗೆ ಪಾಕಿಸ್ತಾನದ ಬಲವಾದ ಆಕ್ಷೇಪಣೆಗಳನ್ನು ವ್ಯಕ್ತಪಡಿಸಿದೆ. ಇದನ್ನೂ ಓದಿ: ತಾಲಿಬಾನ್ ಸಚಿವನ ಸುದ್ದಿಗೋಷ್ಠಿಯಲ್ಲಿ ಮಹಿಳಾ ಪತ್ರಕರ್ತರಿಗೆ ನಿಷೇಧ – ನಮ್ಮ ಪಾತ್ರ ಇಲ್ಲ ಅಂತ ಕೇಂದ್ರ ಸ್ಪಷ್ಟನೆ

ಜಮ್ಮು ಮತ್ತು ಕಾಶ್ಮೀರವನ್ನು ಭಾರತದ ಭಾಗವಾಗಿ ಉಲ್ಲೇಖಿಸುವುದು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ನಿರ್ಣಯಗಳ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ತಿಳಿಸಲಾಗಿದೆ ಎಂದು ಪಾಕಿಸ್ತಾನ ವಿದೇಶಾಂಗ ಕಚೇರಿ ತಿಳಿಸಿದೆ.

ಏಪ್ರಿಲ್‌ನಲ್ಲಿ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಅಫ್ಘಾನಿಸ್ತಾನ ಬಲವಾಗಿ ಖಂಡಿಸಿದೆ. ಜನರು ಮತ್ತು ಭಾರತ ಸರ್ಕಾರದೊಂದಿಗೆ ಅಫ್ಘಾನಿಸ್ತಾನ ಜೊತೆಯಾಗಿರುತ್ತದೆ. ಪ್ರಾದೇಶಿಕ ದೇಶಗಳಿಂದ ಆಗುವ ಎಲ್ಲಾ ಭಯೋತ್ಪಾದಕಾ ಕೃತ್ಯಗಳನ್ನು ಎರಡೂ ಕಡೆಯವರು (ಭಾರತ-ಅಫ್ಘಾನಿಸ್ತಾನ) ನಿಸ್ಸಂದಿಗ್ಧವಾಗಿ ಖಂಡಿಸಿದ್ದಾರೆ. ಈ ಪ್ರದೇಶದಲ್ಲಿ ಶಾಂತಿ ಸ್ಥಾಪನೆಯಾಗಬೇಕು ಎಂದು ಅಫ್ಘಾನಿಸ್ತಾನ ತಿಳಿಸಿದೆ. ಇದನ್ನೂ ಓದಿ: ಕಾಬೂಲ್ ರಾಯಭಾರ ಕಚೇರಿ 4 ವರ್ಷದ ಬಳಿಕ ಪುನಾರಂಭಕ್ಕೆ ಭಾರತ ನಿರ್ಧಾರ – ಎಸ್.ಜೈಶಂಕರ್ ಘೋಷಣೆ

ಗುರುವಾರ ನವದೆಹಲಿಗೆ ಬಂದಿಳಿದ ಅಫ್ಘಾನಿಸ್ತಾನದ ವಿದೇಶಾಂಗ ಸಚಿವ ಅಮೀರ್ ಖಾನ್ ಮುತ್ತಕಿ ಅವರು ಆರು ದಿನಗಳ ಭಾರತ ಭೇಟಿಯಲ್ಲಿದ್ದಾರೆ.

Share This Article